ಅತಿ ಹೆಚ್ಚು ಮತಗಳ ಅಂತರಗಳಲ್ಲಿ ಗೆಲ್ಲುವ ಆತ್ಮವಿಶ್ವಾಸ : ಬಸವರಾಜ ಬೊಮ್ಮಾಯಿ

KannadaprabhaNewsNetwork |  
Published : Apr 16, 2024, 01:14 AM ISTUpdated : Apr 16, 2024, 10:40 AM IST
೧೫ಎಚ್‌ವಿಆರ್೧ | Kannada Prabha

ಸಾರಾಂಶ

ಹಾವೇರಿ-ಗದಗ ಲೋಕಸಭೆಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಹಾವೇರಿ:  ಹಾವೇರಿ-ಗದಗ ಲೋಕಸಭೆಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ನಾಮಪತ್ರ ಸಲ್ಲಿಸಿದರು.ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಪೂಜಾರ, ಶಿವರಾಜ ಸಜ್ಜನ್, ಪ್ರಮುಖರಾದ ಶಂಕರಣ್ಣ ಮಾತನವರ, ರಾಜೇಂದ್ರ ಹಾವೇರಣ್ಣನವರ, ಪುತ್ರ ಭರತ್ ಬೊಮ್ಮಾಯಿ ಸಾಥ್ ನೀಡಿದರು.ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬೊಮ್ಮಾಯಿ ಏ. 19ರಂದು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಮೂಲಕ ಆಗಮಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಸಾಧನೆಯನ್ನೂ  ಹೇಳುತ್ತೇವೆ:  ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನೊಂದಿಗೆ ಕೇಂದ್ರ ಸರ್ಕಾರ ಹಾಗೂ ನಮ್ಮ ಅವಧಿಯ ಸಾಧನೆಗಳನ್ನು ಜನರಿಗೆ ತಿಳಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಇವತ್ತು ಒಳ್ಳೆಯ ಮುಹೂರ್ತ ಇದೆ. ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದೇನೆ. ಏ. 19ರಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವೆ. ಅವತ್ತು ನಮ್ಮ ನಾಯಕರಾದ ಯಡಿಯೂರಪ್ಪ, ಭೈರತಿ ಬಸವರಾಜ ಸೇರಿ ಹಲವು ನಾಯಕರು ಬರುತ್ತಾರೆ. ಇವತ್ತು ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿರುವೆ. ಅತಿ ಹೆಚ್ಚು ಮತಗಳ ಅಂತರಗಳಲ್ಲಿ ಗೆಲ್ಲುವ ಆತ್ಮವಿಶ್ವಾಸ ಇದೆ ಎಂದು ಹೇಳಿದರು.

ಕಾಂಗ್ರೆಸ್ಸಿನವರು ಕೇಂದ್ರದಲ್ಲಿ ಬಹುಮತ ಬರುತ್ತೇವೆ ಎಂದು ನೀಡುವ ಹೇಳಿಕೆಗಳೆಲ್ಲ ಹಾಸ್ಯಾಸ್ಪದ. ಬಹುಮತಕ್ಕೆ272 ಸ್ಥಾನ ಬೇಕು. ಅಷ್ಟು ಸ್ಥಾನಗಳಿಗೆ ನಿಲ್ಲುವ ಶಕ್ತಿ ಇಲ್ಲದವರು ಊರೆಲ್ಲ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

ಕ್ಷೇತ್ರದಲ್ಲಿ ನೀರಾವರಿ ಸಾಧನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಒಂದು ಲಕ್ಷ ಎಕರೆ ನೀರಾವರಿ ಮಾಡಿರುವುದು ಸಾಮಾನ್ಯ ಮಾತಲ್ಲ. ಇದರಿಂದ ಹಾನಗಲ್, ಹಿರೇಕೆರೂರು, ರಾಣಿಬೆನ್ನೂರು ತಾಲೂಕುಗಳಲ್ಲಿ ನೀರಾವರಿಯಾಗಿದೆ. ಈ ಕೆಲಸ ಸಾಧ್ಯವಿಲ್ಲ ಎಂದು ಹೇಳಿದ್ದರು. ಅದನ್ನು ಮಾಡಿ ತೋರಿಸಿದ್ದೇನೆ. 

ಶಿಗ್ಗಾವಿ ಕ್ಷೇತ್ರ ಬಿಟ್ಟು ಎಂಟು ಏತ ನೀರಾವರಿ ಯೋಜನೆಗಳ ಕಾಮಗಾರಿ ಈಗ ಮುಗಿಯುವ ಹಂತದಲ್ಲಿವೆ ಎಂದರು.ಈ ಚುನಾವಣೆಯಲ್ಲಿ ಬಿಜೆಪಿಯವರು ಕೇವಲ ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, ಇದು ಲೋಕಸಭಾ ಚುನಾವಣೆ, ರಾಷ್ಟ್ರದ ಚುನಾವಣೆ. ಮೋದಿಯವರ ಹೆಸರು ಹೇಳಲೇಬೇಕು ಹೇಳುತ್ತೇವೆ. 

ಅದರ ಜೊತೆಗೆ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಸೇರಿಸಿ ಮತ ಕೇಳುತ್ತೇವೆ ಎಂದರು.ಇದೇ ವೇಳೆ, ಪ್ರಧಾನಿ ಮೋದಿ ಪ್ರಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಏ.25 ಅಥವಾ 26 ರ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರವಾಸ ಮಾಡಲಿದ್ದು, ಎರಡು ಅಥವಾ ಮೂರು ಲೋಕಸಭೆಗೆ ಒಂದು ಕ್ಲಸ್ಟರ್ ಮಾಡಿದ್ದಾರೆ ಎಂದರು.ಇನ್ನು ನಟ ಪ್ರಕಾಶ್ ರೈ ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಕಾಶ ರೈ ಯಾವಾಗ ಫೇಸ್ ರೀಡರ್ ಆದರು. ಮೋದಿಯವರು ವಿಶ್ವದ ನಾಯಕ ಅವರು ನೋಡುವ ದೃಷ್ಟಿಕೋನ ಹಾಗಿದೆ ಎಂದು ಹೇಳಿದರು.

ತಂದೆ ತಾಯಿ ಸಮಾಧಿಗೆ ನಮನ:ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ನಾಮಪತ್ರ ಸಲ್ಲಿಕೆಗೂ ಮೊದಲು ಹುಬ್ಬಳ್ಳಿಯ ರಾಯಾಪುರ ಬಳಿ ಇರುವ ಅವರ ತಂದೆ ತಾಯಿಯ ಗದ್ದುಗೆಗೆ ತೆರಳಿ ನಮಸ್ಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿಗಾಗಿ ಮಕ್ಕಳಿಂದ ಪತ್ರ: ₹490 ಕೋಟಿ ಕೊಟ್ಟ ಸಿಎಂ!
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ಬಿಯರ್‌, ವೈನ್‌ ಅಗ್ಗ?