ಕನ್ನಡಪ್ರಭ ವಾರ್ತೆ ಮದ್ದೂರು
ಪುರಾಣ ಪ್ರಸಿದ್ಧ ಶ್ರೀಹೊಳೇ ಆಂಜನೇಯ ಸ್ವಾಮಿ ದೇಗುಲದಲ್ಲಿ ಹುಟ್ಟುಹಬ್ಬದ ಅಂಗವಾಗಿ ಮೂಲ ವಿಗ್ರಹಕ್ಕೆ ಅಭಿಷೇಕ, ಪುಷ್ಪಾಲಂಕಾರ ದೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಭಗವಂತನು ಅಶ್ವಥ್ ನಾರಾಯಣ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸನ್ನು ನೀಡಿ ನಿರಂತರವಾಗಿ ಜನಸೇವೆ ಮಾಡಲು ಅವಕಾಶ ನೀಡುವಂತೆ ಪ್ರಾರ್ಥಿಸಿದರು.
ಬಳಿಕ ಭಕ್ತಾದಿಗಳಿಗೆ ಮತ್ತು ನೆರೆದಿದ್ದಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ತರುವಾಯ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಒಳ ರೋಗಿಗಳಿಗೆ ಮತ್ತು ಅನಾಥಾಶ್ರಮದ ಮಕ್ಕಳಿಗೆ ಹುಟ್ಟು ಹಬ್ಬದ ಅಂಗವಾಗಿ ಹಣ್ಣು ಹಂಪಲುಗಳನ್ನು ವಿತರಿಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ನಿಡಘಟ್ಟ ಸುನೀಲ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಸಿಎಂ ಆಗಿ ಉತ್ತಮ ಆಡಳಿತ ನೀಡಿರುವ ಅಶ್ವಥ್ ನಾರಾಯಣ ಅವರಿಗೆ ಭವಿಷ್ಯದಲ್ಲಿ ಅವರಿಗೆ ಮತ್ತೊಮ್ಮೆ ಉನ್ನತ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿದರು.
ಮಾಜಿ ಉಪ ಮುಖ್ಯಮಂತ್ರಿ ಸಿ.ಎಸ್.ಅಶ್ವಥ್ ನಾರಾಯಣ ಅವರ ಹುಟ್ಟುಹಬ್ಬಕ್ಕೆ ಮದ್ದೂರು ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಹಾಗೂ ಮನ್ಮುಲ್ ನಿರ್ದೇಶಕ ಎಸ್. ಪಿ. ಸ್ವಾಮಿ ಸ್ವಾಮಿ ಶುಭಾಶಯ ಕೋರಿದರು.