ಕನ್ನಡಪ್ರಭ ವಾರ್ತೆ ಮಡಿಕೇರಿ ಕಾಡಾನೆ ದಾಳಿಗೆ ಸಿಲುಕಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರು ಮೃತ ಪಟ್ಟಿರುವ ಘಟನೆ ಕುಶಾಲನಗರ ತಾಲೂಕು ಅರಣ್ಯ ವ್ಯಾಪ್ತಿಗೆ ಒಳಪಡುವ ಬಾಳೆಗುಂಡಿಯಲ್ಲಿ ನಡೆದಿದೆ.ಕಳೆದ ಅವಧಿಯಲ್ಲಿ ವಾಲ್ನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸದಸ್ಯರಾಗಿದ್ದ , ಜಲಜಮ್ಮ ಅಲಿಯಾಸ್ ಜಲಜಾಕ್ಷಿ (54) ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟ ದುರ್ದೈವಿ.
ಘಟನೆ ತಿಳಿದು ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ಸೇರಿದಂತೆ ಅರಣ್ಯಾಧಿಕಾರಿಗಳ ದಂಡು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಿದ್ದಾರೆ.
ಮೃತ ಜಲಜಾಕ್ಷಿ ಪತಿ ಸ್ವಾಮಿ ಹಾಗೂ ಮಕ್ಕಳಾದ ಡಿಂಪಲ್ ಕಿರಣ್ , ಹರೀಶ್, ಸಚಿನ್ ಇವರನ್ನು ಅಗಲಿದ್ದಾರೆ. ಕೆಲಸಕ್ಕೆಂದು ಸಮೀಪದ ತೋಟಕ್ಕೆ ತೆರಳಿ ಹಿಂತಿರುಗುವ ಸಂದರ್ಭ, ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಜಲಜ ಆನೆ ದಾಳಿಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗಿದ್ದವರು ಆನೆ ಬರುವುದನ್ನು ಕಂಡು ಓಡಿದ್ದಾರೆ. ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಈಗಾಗಲೇ ಜಿಲ್ಲೆಯಲ್ಲಿ ಹಲವು ಬಡ ಜೀವಗಳು ವನ್ಯ ಜೀವಿಗಳ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದು, ಅಂತವರ ಕುಟುಂಬ ಸಂಕಷ್ಟಕ್ಕೆ ಸಿಲುಕಿರುವ ಹಲವು ಉದಾಹರಣೆಗಳಿವೆ.ಮೃತ ಮಹಿಳೆಯ ಸಂಬಂಧಿಕರು