ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಗರಣ: ಮಾಜಿ ಎಂಡಿ ಲೀಲಾವತಿ ಅರೆಸ್ಟ್‌

KannadaprabhaNewsNetwork |  
Published : Apr 13, 2025, 02:04 AM ISTUpdated : Apr 13, 2025, 07:15 AM IST
ಲೀಲಾವತಿ | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಬಂಧಿಸಿದೆ.

 ಬೆಂಗಳೂರು : ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಬಂಧಿಸಿದೆ.

ಇತ್ತೀಚೆಗೆ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ‌.ನಾಗರಾಜಪ್ಪ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ಇದೀಗ ಲೀಲಾವತಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ. ನಾಗರಾಜಪ್ಪ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಲೀಲಾವತಿ ಅವರನ್ನು ಸಹ ಬಂಧಿಸಲಾಗಿದೆ.

ಹಗರಣಕ್ಕೆ ಸಂಬಂಧಿಸಿ ಕಳೆದ ವಾರ ಇ.ಡಿ ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಸೇರಿ 10 ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ದಾಳಿ ವೇಳೆ ಬ್ಯಾಂಕ್ ಖಾತೆಗಳ ವಿವರ, ಸ್ಥಿರಾಸ್ತಿ-ಚರಾಸ್ತಿಗಳು, ಸಂಬಂಧಿಕರ ಹೆಸರಿನಲ್ಲಿ ಸಂಪಾದನೆ ಮಾಡಿದ್ದ ಆಸ್ತಿ ಮತ್ತಿತರ ದಾಖಲೆಗಳು ಲಭ್ಯವಾಗಿದ್ದವು. ಈ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಆರೋಪಿಗಳ ಮೇಲಿನ ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶ ಕಂಡು ಬಂದ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರು. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವ ಆರೋಪ ಇತ್ತು. ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಇ.ಡಿ. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಏನಿದು ಹಗರಣ?

ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿಯಲ್ಲಿ ಲಕ್ಷಾಂತರ ರು. ಸಾಲ ಕೊಡಿಸುವುದಾಗಿ ಅಧಿಕಾರಿಗಳಿಂದ ಜನರಿಗೆ ಆಮಿಷ

ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ಹಣ ದುರ್ಬಳಕೆ ಆರೋಪ ಸಾರ್ವಜನಿಕರ ದಾಖಲೆಗಳನ್ನು ಬಳಸಿಕೊಂಡು ಅವರ ಹೆಸರಲ್ಲಿ ಸಾಲ ಪಡೆದು ವಂಚಿಸಿದ್ದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು

ಇದೆ ಪ್ರಕರಣದಲ್ಲಿ ಪ್ರಕರಣ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯದಿಂದಲೂ ತನಿಖೆ. ಈವರೆಗೆ ಇಬ್ಬರ ಮಾಜಿ ಅಧಿಕಾರಿಗಳ ಸೆರೆ

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ