ಕನ್ನಡಪ್ರಭ ವಾರ್ತೆ ಪಾಂಡವಪುರ
ಬಳಿಕ ಮಾತನಾಡಿದ ಮಾಜಿ ಸಚಿವರು, ಸಂಸ್ಥೆಯಲ್ಲಿ ಪ್ರತಿ ವರ್ಷವೂ ನಮ್ಮ ಪೋಷಕರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಮಾನ್ಸೂನ್ ಮ್ಯಾರಥಾನ್ ಓಟದ ಸ್ಪರ್ಧೆ ಆಯೋಜನೆ ಮಾಡುತ್ತಿದ್ದೇವೆ. ಆ ಮೂಲಕ ನಮ್ಮ ಪೋಷಕರನ್ನು ಸ್ಮರಿಸುವ, ನೆನಪಿಸಿಕೊಳ್ಳುವ ಕಾರ್ಯವನ್ನು ಮಾಡಲಾಗುತ್ತಿದೆ. ಅದೇ ರೀತಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ತಂದೆ- ತಾಯಿಯನ್ನು ನೆನೆಯುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸ್ಪರ್ಧೆಯಲ್ಲಿ ಎಸ್ ಟಿಜಿ ಶಾಲೆಯ 5 ರಿಂದ 10ನೇ ತರಗತಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಾಲಕ- ಬಾಲಕಿಯರಿಗೆ ಪ್ರತ್ಯೇಕ ಓಟದ ಸ್ಪರ್ಧೆ ನಡೆದು ಶಾಲೆಯಿಂದ ಹೊರಟ ಮ್ಯಾರಥಾನ್ ಚಿನಕುರಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತ್ತೆ ಶಾಲೆಗೆ ಆಗಮಿಸಿತು.ಮ್ಯಾರಥಾನ್ ನ ದಾರಿಯುದ್ದಕ್ಕೂ ಅಲ್ಲಲ್ಲಿ ವಿದ್ಯಾರ್ಥಿಗಳಿಗೆ ತಂಪು ಪಾನೀಯಗಳನ್ನು ವಿತರಿಸಲಾಯಿತು. ಮಕ್ಕಳ ಭದ್ರತೆಯ ದೃಷ್ಟಿಯಿಂದ ಅಲ್ಲಲ್ಲಿ ಪೊಲೀಸರು, ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ನಂತರ ವಿಜೇತರಾದ ಬಾಲಕಿ ಹಾಗೂ ಬಾಲಕರಿಗೆ ಪ್ರತ್ಯೇಕವಾಗಿ ಬಹುಮಾನ ಹಾಗೂ ಪ್ರಶಸ್ತಿ ವಿತರಿಸಲಾಯಿತು.