6ನೇ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾಜಿ ಸಚಿವೆ ಮೋಟಮ್ಮ ಆಯ್ಕೆ

KannadaprabhaNewsNetwork |  
Published : Feb 05, 2026, 01:15 AM IST
ಮಾಜಿ ಸಚಿವೆ ಮೋಟಮ್ಮ | Kannada Prabha

ಸಾರಾಂಶ

ಚಿಕ್ಕಮಗಳೂರುಕರ್ನಾಟಕ ಜಾನಪದ ಪರಿಷತ್ತಿನಿಂದ ಮುಂಬರುವ ಏಪ್ರಿಲ್‌ನಲ್ಲಿ ನಡೆಯಲಿರುವ ತಿಂಗಳಿನಲ್ಲಿ ನಡೆಯಲಿರುವ 6ನೇ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾಜಿ ಸಚಿವೆ ಮೋಟಮ್ಮ ಆಯ್ಕೆಯಾಗಿದ್ದಾರೆ.

ಮೂಡಿಗೆರೆಯಲ್ಲಿ ನಡೆದ ಪರಿಷತ್ತಿನ ಸಭೆಯಲ್ಲಿ ಆಯ್ಕೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕರ್ನಾಟಕ ಜಾನಪದ ಪರಿಷತ್ತಿನಿಂದ ಮುಂಬರುವ ಏಪ್ರಿಲ್‌ನಲ್ಲಿ ನಡೆಯಲಿರುವ ತಿಂಗಳಿನಲ್ಲಿ ನಡೆಯಲಿರುವ 6ನೇ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಾಜಿ ಸಚಿವೆ ಮೋಟಮ್ಮ ಆಯ್ಕೆಯಾಗಿದ್ದಾರೆ.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ಅಧ್ಯಕ್ಷತೆಯಲ್ಲಿ ಮೂಡಿಗೆರೆಯಲ್ಲಿ ನಡೆದ ಪರಿಷತ್ತಿನ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್, ಮೂಡಿಗೆರೆ ತಾಲೂಕು ಅಧ್ಯಕ್ಷ ಕುನ್ನಳ್ಳಿ ರವಿ, ಸಂಚಾಲಕ ರವಿ, ಗೌರವಾಧ್ಯಕ್ಷ ಸುಬ್ರಹ್ಮಣ್ಯ, ಚಿಕ್ಕಮಗಳೂರು ತಾಲೂಕು ಕಸಾಪ ಅಧ್ಯಕ್ಷ ಮಾವಿನಕೆರೆ ದಯಾನಂದ್, ಪರಿಷತ್ತಿನ ತಾಲೂಕು ಅಧ್ಯಕ್ಷ ಸಚಿನ್ ಸಿಂಗ್ ಉಪಾಧ್ಯಕ್ಷ ಸಂದೀಪ್, ದೀಪಿಕ, ಚಂದ್ರೇಗೌಡ ಸಭೆಯಲ್ಲಿ ಇದ್ದರು.

ಮೂರು ಬಾರಿ ಮೂಡಿಗೆರೆಯ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ವಿರೋಧ ಪಕ್ಷದ ನಾಯಕಿಯಾಗಿ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಜತೆಗೆ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ಮೋಟಮ್ಮಅವರು ಸ್ವತಃ ಜಾನಪದ ಕಲಾವಿದೆ ಹಾಗೂ ಗಾಯಕಿ.

ಮೂಡಿಗೆರೆಯಲ್ಲಿ ಹಲವು ವರ್ಷಗಳಿಂದ ಸರಳ ಸಾಮೂಹಿಕ ವಿವಾಹ, ಜಾನಪದ ಜಾತ್ರೆಗಳನ್ನು ಪ್ರತಿ ವರ್ಷ ನಡೆಸುತ್ತಿದ್ದಾರೆ. ರಾಜಕೀಯ, ಸಮಾಜ ಸೇವೆ ಹಾಗೂ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(ಮೋಟಮ್ಮ ಫೋಟೋ ಬಳಸಿ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಬ್ಬಿ ಪಟ್ಟಣ ಪಂಚಾಯಿತಿ ಆದಾಯ 2.30 ಕೋಟಿ ರು.
ರೈಲ್ವೆ ಪ್ರವೇಶ ಪರೀಕ್ಷೆ: ಕನ್ನಡಕ್ಕೆ ಅವಕಾಶ ನೀಡಿ