.ಮಾಜಿ ಶಾಸಕ ಚಂದ್ರಶೇಖರಪ್ಪ ನಿಧನ

KannadaprabhaNewsNetwork |  
Published : Jul 27, 2026, 01:45 AM IST
ಪೋಟೋ: 26ಎಸ್‌ಎಂಜಿಕೆಪಿ04: ಎಚ್‌.ಎಂ.ಚಂದ್ರಶೇಖರಪ್ಪ | Kannada Prabha

ಸಾರಾಂಶ

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ(78) ಭಾನುವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ(78) ಭಾನುವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಭಾನುವಾರ ಮಧ್ಯಾಹ್ನ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ.

ಇವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್‌.ಸಿ. ಯೋಗೀಶ್‌, ಉದ್ಯಮಿ ಶರಣ ಪುತ್ರರಿದ್ದಾರೆ. ಎಚ್.ಎಂ. ಚಂದ್ರಶೇಖರಪ್ಪ ಅವರ ಮೃತದೇಹವನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ತಡರಾತ್ರಿ ಶಿವಮೊಗ್ಗಕ್ಕೆ ತರಲಿದ್ದು, ಸೋಮವಾರ ಸಂಜೆ ಹೊಸಹಳ್ಳಿ ತೋಟದಲ್ಲಿ ಅವರ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕಂಬನಿ ಮಿಡಿದಿದ್ದಾರೆ.

------------

ಬಾಕ್ಸ್‌...

ಈಶ್ವರಪ್ಪ ವಿರುದ್ಧ ಗೆದ್ದಿದ್ದ ಎಚ್‌.ಎಂ.ಸಿ1997/98 ರಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದು ಎಚ್‌.ಎಂ. ಚಂದ್ರಶೇಖರಪ್ಪ ಅವರು ಶಾಸಕರಾಗಿ ಆಯ್ಕೆಗೊಂಡಿದ್ದರು. ಬೊಮ್ಮನಕಟ್ಟೆ ಆಶ್ರಯ ಬಡಾವಣೆ, ಗಾಜನೂರು ಡ್ಯಾಂ ಹೊಸದಾಗಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಇವರ ಅವಧಿಯಲ್ಲಿ ಆಗಿದ್ದವು.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದ ಅವರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ, ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಹಾಗೂ ವೀರಶೈವ- ಲಿಂಗಾಯತ ಮಹಾಸಭಾದ ಮಾಜಿ ರಾಜ್ಯ ಉಪಾಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿದ್ದಾರೆ.

---------------------ಪೋಟೋ: 26ಎಸ್‌ಎಂಜಿಕೆಪಿ04: ಎಚ್‌.ಎಂ. ಚಂದ್ರಶೇಖರಪ್ಪ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ.3ರಂದು ಸಂಕಲ್ಪ-2 ಸ್ಪರ್ಧಾತ್ಮಕ ತರಬೇತಿಗೆ ಪ್ರವೇಶ ಪರೀಕ್ಷೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೋರಾಟದಲ್ಲಿ ಕೈ ಪ್ರಮುಖ ಪಾತ್ರ - ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಹೇಳಿಕೆ