ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

KannadaprabhaNewsNetwork |  
Published : Oct 15, 2025, 02:08 AM IST
ಸುದೀಪ್ ಭಂಡಾರಿ | Kannada Prabha

ಸಾರಾಂಶ

ಉದ್ಯಮಿ ಸುದೀಪ್ ಭಂಡಾರಿ (೪೫) ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ನಡೆದಿದೆ. ಮೃತರು ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ.

ಹೆಬ್ರಿ: ಹೆಬ್ರಿಯ ಉದ್ಯಮಿ ಸುದೀಪ್ ಭಂಡಾರಿ (೪೫) ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ನಡೆದಿದೆ.

ಮೃತರು ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ. ಅವರು ಹೆಬ್ರಿಯಲ್ಲಿ ವೈನ್ ಶಾಪ್‌ ನಡೆಸಿಕೊಂಡಿದ್ದು, ಸರಳ ಸ್ವಭಾವದವರಾಗಿದ್ದು ಎಲ್ಲರೊಂದಿಗೆ ಸ್ನೇಹಮಯ ಒಡನಾಟ ಹೊಂದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಸುದೀಪ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲದಿದ್ದರೂ, ಆರ್ಥಿಕ ಮುಗ್ಗಟ್ಟೇ ಕಾರಣವಾಗಿರಬಹುದು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಸುದೀಪ್ ಭಂಡಾರಿ ಪತ್ನಿ, ಇಬ್ಬರು ಗಂಡು ಮಕ್ಕಳು, ತಾಯಿ, ತಂಗಿ, ತಮ್ಮನನ್ನು ಅಗಲಿದ್ದಾರೆ.ಮಂಗಳವಾರ ಪೂರ್ವಾಹ್ನ 11 ಗಂಟೆ ವೇಳೆಗೆ ಹುತ್ತುರ್ಕೆಯಲ್ಲಿರುವ ಅವರ ನಿವಾಸದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಸುದೀಪ್ ಅಕಾಲಿಕ ಅಗಲಿಕೆಯಿಂದ ಭಂಡಾರಿ ಕುಟುಂಬದವರಲ್ಲಿ ಹಾಗೂ ಹೆಬ್ರಿ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯರು ಕಣ್ಣೀರಿಟ್ಟು ಶ್ರದ್ಧಾಂಜಲಿ ಸಲ್ಲಿಸಿದರು.

ಸುದೀಪ್‌ ನಿಧನಕ್ಕೆ ಮುಖಂಡರಾದ ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ನಾರಾಯಣಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!