ಪ್ರೀತಂ ಗೌಡರನ್ನು ಟೀಕಿಸಿದ ಮಾಜಿ ಶಾಸಕ ಲಿಂಗೇಶ್‌

KannadaprabhaNewsNetwork |  
Published : Feb 12, 2026, 02:00 AM IST
11ಎಚ್ಎಸ್ಎನ್19 :  | Kannada Prabha

ಸಾರಾಂಶ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಯಿಂದ ಅವಕಾಶ ಸಿಗುವುದಿಲ್ಲ ಎಂಬ ಆತಂಕದಿಂದಲೇ ಸ್ಥಳೀಯ ಮಟ್ಟದಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಟಿಕೆಟ್ ವಂಚಿತರಾಗುವ ಭಯದಿಂದಲೇ ಮಾಜಿ ಶಾಸಕ ಪ್ರೀತಂಗೌಡ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿಯೇ ಅವರು ಒಂದು ಕಾಲು ಬಿಜೆಪಿ ಮತ್ತೊಂದು ಕಾಲು ಕಂಗ್ರೆಸ್ ಪಕ್ಷದಲ್ಲಿ ಇರಿಸಿದ್ದಾರೆ ಎಂದು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಟೀಕಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಟಿಕೆಟ್ ವಂಚಿತರಾಗುವ ಭಯದಿಂದಲೇ ಮಾಜಿ ಶಾಸಕ ಪ್ರೀತಂಗೌಡ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿಯೇ ಅವರು ಒಂದು ಕಾಲು ಬಿಜೆಪಿ ಮತ್ತೊಂದು ಕಾಲು ಕಂಗ್ರೆಸ್ ಪಕ್ಷದಲ್ಲಿ ಇರಿಸಿದ್ದಾರೆ ಎಂದು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಜೆಡಿಎಸ್-ಬಿಜೆಪಿ ಮೈತ್ರಿ ಇದ್ದಾಗ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದರು. ಈಗಾಗಲೇ ಒಂದು ಕಾಲನ್ನು ಕಾಂಗ್ರೆಸ್‌ಗೆ ಇಟ್ಟಿದ್ದಾರೆ. ಮೈತ್ರಿಯಿಂದ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್‌ನಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ. ಇಂತಹವರು ಮೈತ್ರಿ ವಿರೋಧಿಸುವುದು ಅಚ್ಚರಿಯಲ್ಲ ಎಂದು ಕಿಡಿಕಾರಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಯಿಂದ ಅವಕಾಶ ಸಿಗುವುದಿಲ್ಲ ಎಂಬ ಆತಂಕದಿಂದಲೇ ಸ್ಥಳೀಯ ಮಟ್ಟದಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಮೈತ್ರಿ ವಿಚಾರದಲ್ಲಿ ದೇವೇಗೌಡರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸ್ನೇಹ ಸಂಬಂಧವನ್ನು ಉಲ್ಲೇಖಿಸಿದ ಲಿಂಗೇಶ್, ಜೆಡಿಎಸ್ ಪಕ್ಷ ಮೈತ್ರಿ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ರೇವಣ್ಣ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಸಂಘಟನೆ ಬಲಿಷ್ಠವಾಗಿದೆ. ಮೈತ್ರಿ ಇರದಿದ್ದರೂ ಚುನಾವಣೆಯನ್ನು ಎದುರಿಸುವ ಶಕ್ತಿ ಜೆಡಿಎಸ್‌ಗೆ ಇದೆ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ. ಅದಕ್ಕೆ ನಾವು ಬದ್ಧರಾಗಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಜಿಪಂ, ತಾಪಂ ಚುನಾವಣೆಯಲ್ಲಿ ಹೊಂದಾಣಿಕೆ ಇಲ್ಲದೆ ನೇರವಾಗಿ ವಿಧಾನಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದರಿಂದ ಪ್ರಯೋಜನವೇನು? ತಳಮಟ್ಟದ ಕಾರ್ಯಕರ್ತರಲ್ಲಿ ಸಮನ್ವಯ ಅಗತ್ಯ. ಅಖಾಡಕ್ಕೆ ಇಳಿದಾಗ ಯಾರ ಶಕ್ತಿ ಎಷ್ಟೆಂಬುದು ಗೊತ್ತಾಗುತ್ತದೆ ಎಂದು ಹೇಳಿದರು.

ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಮೈತ್ರಿ ಮಾಡಿಕೊಳ್ಳಲು ನಾವು ಅಂಗಲಾಚುತ್ತಿಲ್ಲ. ಹೈಕಮಾಂಡ್ ನಿರ್ಧಾರವೇ ಅಂತಿಮ. ಪ್ರೀತಂಗೌಡರು ರಾಜ್ಯ ಪ್ರಧಾನ ಕಾರ್ಯದರ್ಶಿ ಅಷ್ಟೇ. ಹೈಕಮಾಂಡ್ ಅಲ್ಲ. ಅವರ ಮಾತಿನಿಂದ ಎಲ್ಲವೂ ನಡೆಯುವುದಿಲ್ಲ. ಸಮಯ ಬಂದಾಗ ನಮ್ಮ ಶಕ್ತಿ ಪ್ರದರ್ಶಿಸುತ್ತೇವೆ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಲ್ಲರ ಬಣ್ಣ ಬಯಲಾಗಲಿದೆ ಎಂದು ತಿರುಗೇಟು ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಮಾಧ್ಯಮ ವಕ್ತಾರ ರಘು ಹೊಂಗೆರೆ, ಮುಖಂಡರಾದ ರಂಗಶೆಟ್ಟಿ, ಸಮೀರ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿನಾಯಿಗಳ ಕೊರಳಲ್ಲಿ ದೇವರಾಜೇಗೌಡ ಫೋಟೋ
ಸರ್ಕಾರಿ ಶಾಲೆಗಳು ಅಭಿವೃದ್ಧಿಯಾದರೆ ಗ್ರಾಮ ಅಭಿವೃದ್ಧಿ