ಚನ್ನರಾಯಪಟ್ಟಣದಲ್ಲಿ ಮಾಜಿ ಶಾಸಕ ಪುಟ್ಟೇಗೌಡ ಭೇಟಿಯಾದ ಶ್ರೇಯಸ್ ಪಟೇಲ್‌

KannadaprabhaNewsNetwork |  
Published : Mar 10, 2024, 01:30 AM IST
9ಎಚ್ಎಸ್ಎನ್7 : ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪರ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ರವರಿಗೆ ಟಿಕೆಟ್ ಘೋ?ಣೆಯಾದ ಹಿನ್ನಲೆಯಲ್ಲಿ ಪಟ್ಟಣದ ಮಾಜಿ ಶಾಸಕ ಸಿ. ಎಸ್. ಪುಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿದರು.ಇದೇ ಸಂದರ್ಭದಲ್ಲಿ ಮಾಜಿ ವಿಧಾನ ಪರಿ?ತ್ ಸದಸ್ಯ ಎಂ. ಎ. ಗೋಪಾಲಸ್ವಾಮಿ ಮಾತನಾಡಿ ನಮ್ಮ ಪಕ್ಷದ ಕೆಪಿಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತು ಸೋನಿಯಾ ಗಾಂಧಿಯವರು ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲೂ ಶ್ರೇಯಸ್ ಪಟೇಲ್ ರವರನ್ನು ಹಾಸನ ಜಿಲ್ಲೆಯ ಸೂಕ್ತ ಅಭ್ಯರ್ಥಿ ಎಂದು ಘೋ?ಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳು ಒಟ್ಟಾಗಿ ಸೇರಿಕೊಂಡು ಶ್ರೇಯಸ್ ಪಟೇಲ್‌ರವರಿಗೆ ಚುನಾವಣೆ ಪ್ರಚಾರ ಮಾಡಿ ಅವರನ್ನು ಹೆಚ್ಚಿನ ಮತಗಳಿಂದ ಜಯಶೀಲರಾಗಿ ಮಾಡಲು ನಾವುಗಳು ಶ್ರಮಿಸಬೇಕು ಎಂದರು.ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಸಿ. ಎಸ್. ಪುಟ್ಟೇಗೌಡ ರವರು ಮಾತನಾಡಿ ಜಿಲ್ಲೆಯಲ್ಲಿ ಇವರ ಹೊಲಸು ರಾಜಕೀಯವನ್ನು ನೋಡಿ ಮತಬಾಂಧವರು ಬೇಸತ್ತು ಹೋಗಿದ್ದಾರೆ ಆ ನಿಟ್ಟಿನಲ್ಲಿ ದಯಮಾಡಿ ಈ ಬಾರಿಯಾದರೂ ಮತ ಬಾಂಧವರು ಎಚ್ಚೆತ್ತುಕೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್‌ರವರಿಗೆ ಮತ ನೀಡಿ ರಾಜಕೀಯ ಚಿತ್ರಣವನ್ನು ಬದಲಾಯಿಸಲು ಸಹಕರಿಸಿ ಜಿಲ್ಲೆಯಲ್ಲಿ ಈ ಹಿಂದೆ ಕಾಂಗ್ರೆಸ್ ಪರವಾಗಿ ಇದ್ದಂತಹ ಲೋಕಸಭಾ ಅಭ್ಯರ್ಥಿ ಮತ್ತು ಮಾಜಿ ಸಚಿವರಾದಂತಹ ಪುಟ್ಟಸ್ವಾಮಿಗೌಡರವರ ಜಿಲ್ಲೆಗೆ ಅಪಾರ ಪ್ರಮಾಣದ ಕೊಡುಗೆಯನ್ನು ನೀಡಿದ್ದಾರೆ. ಅಂತಹ ಮೊಮ್ಮಗನಾದ ಶ್ರೇಯಸ್ ಪಟೇಲ್‌ರವರು ಈ ಹಿಂದೆಯೂ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಭ್ಯರ್ಥಿಯಾಗಿ ಅಲ್ಪ ಮತಗಳಿಂದ ಸೋಲನ್ನು ಕಂಡರೂ ಗೆದ್ದರೀತಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂತಹ ನಿ?ವಂತ ಅಭ್ಯರ್ಥಿಯನ್ನು ಈ ಬಾರಿಯಾದರೂ ಮತಬಾಂಧವರು ಕೈಹಿಡಿದು ಗೆಲುವಿಗೆ ಮುನ್ನಡೆಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ನೀಡಿದೆ.ಜಿಲ್ಲೆಯಲ್ಲಿ ಜೆಡಿಎಸ್‌ನವರು ಸಹಕಾರ ಸಂಘಗಳು ಹಾಗೂ ಡೈರಿಗಳಲ್ಲಿ ಮಾಡಿರುವ ಅವ್ಯವಹಾರಗಳು ಎಲ್ಲರಿಗೂ ತಿಳಿದಿದೆ, ಅದರ ದುರಾಡಳಿತವನ್ನು ಕಿತ್ತು ಹಾಕಬೇಕೆಂದರೆ ಚುನಾವಣೆಯಲ್ಲಿ ಪುಟ್ಟಸ್ವಾಮೀಗೌಡರು ಹಾಗೂ ಶ್ರೀಕಂಠಯ್ಯನವರ ಅಭಿವೃದ್ಧಿಗೆ ಹಾಗೂ ಜಿಲ್ಲೆಗೆ ನೀಡಿದ ಸೇವೆಯನ್ನು ಪರಿಗಣಿಸಿ ಮತದಾರರು ಸ್ವಾಭಿಮಾನಕ್ಕೆ ಚುನಾವಣೆಯಲ್ಲಿ ಹಲವಾರು ಬಾರಿ ದಂಡಯಾತ್ರೆ ನಡೆಸುತ್ತಿರುವ ಶ್ರೇಯಸ್ ಪಟೇಲ್‌ಗೆ ಬೆಂಬಲಿಸಬೇಕೆಂದು ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಹೊಳೇನರಸೀಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷಣ್, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಯುವರಾಜ್, ವೆಂಕಟೇಶ್ ಮತ್ತಿತರಿದ್ದರು. | Kannada Prabha

ಸಾರಾಂಶ

ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್‌ರವರಿಗೆ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣದ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು.

ಲೋಕಸಭೆಗೆ ಪಟೇಲ್‌ಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್‌ರವರಿಗೆ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು.

ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲೂ ಶ್ರೇಯಸ್ ಪಟೇಲ್ ರವರನ್ನು ಹಾಸನ ಜಿಲ್ಲೆಯ ಸೂಕ್ತ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಟ್ಟಾಗಿ ಶ್ರೇಯಸ್ ಪಟೇಲ್‌ರವರಿಗೆ ಚುನಾವಣೆ ಪ್ರಚಾರ ಮಾಡಿ ಅವರನ್ನು ಹೆಚ್ಚಿನ ಮತಗಳಿಂದ ಜಯಶೀಲರಾಗಿ ಮಾಡಲು ಶ್ರಮಿಸಬೇಕು ಎಂದು ಹೇಳಿದರು.

ಮಾಜಿ ಶಾಸಕ ಸಿ. ಎಸ್.ಪುಟ್ಟೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿಯ ಹೊಲಸು ರಾಜಕೀಯ ನೋಡಿ ಮತಬಾಂಧವರು ಬೇಸತ್ತು ಹೋಗಿದ್ದಾರೆ. ಈ ಬಾರಿಯಾದರೂ ಮತಬಾಂಧವರು ಎಚ್ಚೆತ್ತುಕೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್‌ರವರಿಗೆ ಮತ ನೀಡಿ ರಾಜಕೀಯ ಚಿತ್ರಣವನ್ನು ಬದಲಾಯಿಸಲು ಸಹಕರಿಸಬೇಕು. ನಿಷ್ಠಾವಂತ ಅಭ್ಯರ್ಥಿಯನ್ನು ಈ ಬಾರಿಯಾದರೂ ಮತಬಾಂಧವರು ಕೈಹಿಡಿದು ಗೆಲುವಿಗೆ ಮುನ್ನಡೆಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ನೀಡಿದ ಎಂದು ಹೇಳಿದರು.

ಜಿಲ್ಲೆಯಲ್ಲಿ ಜೆಡಿಎಸ್‌ ಸಹಕಾರ ಸಂಘಗಳು ಹಾಗೂ ಡೈರಿಗಳಲ್ಲಿ ಮಾಡಿರುವ ಅವ್ಯವಹಾರಗಳು ಎಲ್ಲರಿಗೂ ತಿಳಿದಿದೆ, ಅದರ ದುರಾಡಳಿತವನ್ನು ಕಿತ್ತು ಹಾಕಲು ಚುನಾವಣೆಯಲ್ಲಿ ಶ್ರೇಯಸ್ ಪಟೇಲ್‌ ಅವರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಹೊಳೇನರಸೀಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷಣ್, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಯುವರಾಜ್, ವೆಂಕಟೇಶ್ ಇದ್ದರು.ಚನ್ನರಾಯಪಟ್ಟಣದ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡರ ನಿವಾಸಕ್ಕೆ ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌ ಭೇಟಿ ನೀಡಿ ಚರ್ಚಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ