ಮಾಜಿ ಶಾಸಕ ಯಾದವಾಡ ಮನವೊಲಿಕೆ ಸಕ್ಸಸ್‌

KannadaprabhaNewsNetwork |  
Published : Apr 06, 2024, 12:45 AM IST
05ಆರ್‌ಎಂಡಿ.1-ಎ | Kannada Prabha

ಸಾರಾಂಶ

ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಯಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಪಟ್ಟಣದ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹಾಗೂ ಜಿಲ್ಲೆಯ ಮುಖಂಡರು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಪಕ್ಷದಲ್ಲಿನ ಅಸಮಧಾನಕ್ಕೆ ತೆರೆ ಎಳೆದಿದ್ದಾರೆ.

ಕನ್ನಡಪ್ರಭ ವಾರ್ತೆ ರಾಮದುರ್ಗ

ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಯಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಪಟ್ಟಣದ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹಾಗೂ ಜಿಲ್ಲೆಯ ಮುಖಂಡರು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಪಕ್ಷದಲ್ಲಿನ ಅಸಮಧಾನಕ್ಕೆ ತೆರೆ ಎಳೆದಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಶಾಸಕ ಯಾದವಾಡ ನಿವಾಸಕ್ಕೆ ಜಗದೀಶ ಶೆಟ್ಟರ್‌, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಶುಕ್ರವಾರ ಭೇಟಿ ನೀಡಿ, ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದ್ದು, ಕಹಿ ಘಟನೆ ಮರೆತು ಮತ್ತೆ ಪಕ್ಷದ ಸಂಘಟನೆಯಲ್ಲಿ ತೊಡಗಿ ಬಿಜೆಪಿ ಗೆಲುವಿಗೆ ಸಹಕರಿಸುವಂತೆ ಮುಖಂಡರು ಮನವಿ ಮಾಡಿದರು. ಒತ್ತಾಯಕ್ಕೆ ಮಣಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡರು ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲು ಸಮ್ಮತಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಜಗದೀಶ ಶೆಟ್ಟರ್ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಡೆದ ಕಹಿ ಘಟನೆ ಮರೆತು ಪಕ್ಷದ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಮಹಾದೇವಪ್ಪ ಯಾದವಾಡ ಮನವೊಲಿಸಿದ್ದು, ಅವರ ಸಹ ಸಮ್ಮತಿಸಿ ಪ್ರಚಾರ ಕಾರ್ಯಕದಲ್ಲಿ ತೊಡಗಲಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ಏನೆ ಸಮಸ್ಯೆಗಳಿದ್ದರೂ ಅವುಗಳನ್ನು ಮುಖಂಡರ ಸಮ್ಮಖದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಇನ್ನೂ ಮೇಲೆ ತಾಲೂಕಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ತಿಳಿಸಿದರು.

ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಮತ್ತು ಮುಖಂಡರ ಒತ್ತಾಯದ ಮೇರೆಗೆ ಅಸಮಾಧಾನ ಮರೆತು ಪಕ್ಷದ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ. ಈ ಬಾರಿ ರಾಮದುರ್ಗ ಕ್ಷೇತ್ರದಲ್ಲಿ 30 ಸಾವಿರಕ್ಕೂ ಅಧಿಕ ಮತಗಳ ಲೀಡ್‌ ತಂದು ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುತ್ತಾರೆ. ಇಂತವರ ಬಗ್ಗೆ ಎಚ್ಚರ ವಹಿಸಿ ಜಿಲ್ಲೆಯ ಮುಖಂಡರು ಜವಾಬ್ದಾರಿಯಿಂದ ಯಾರಿಗೂ ಅಸಮಾಧಾನವಾಗದಂತೆ ನೋಡಿಕೊಳ್ಳಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಬಿಜೆಪಿ ತಾಲೂಕಾಧ್ಯಕ್ಷ ರಾಜೇಶ ಬೀಳಗಿ, ಜಿಪಂ ಮಾಜಿ ಸದಸ್ಯ ಮಾರುತಿ ತುಪ್ಪದ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎಸ್.ಢವಣ, ಮುಖಂಡರಾದ ಬಿ.ಎಂ.ತುಪ್ಪದ, ಅಪ್ಪಶಿಗೌಡ ಪಾಟೀಲ, ಜಗದೀಶ ಲಾಹೋಟಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ