ಮಾಜಿ ಎಂಎಲ್ಸಿ ಸುನಂದಾ ಪಾಟೀಲ ಇನ್ನಿಲ್ಲ

KannadaprabhaNewsNetwork |  
Published : Apr 15, 2024, 01:28 AM ISTUpdated : Apr 15, 2024, 12:11 PM IST
ಅಅಅಅ | Kannada Prabha

ಸಾರಾಂಶ

ಬೆಳಗಾವಿ: ವಿಧಾನ ಪರಿಷತ್‌ ಮಾಜಿ ಸದಸ್ಯೆ ಮೂಲತಃ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದವರಾದ ಸುನಂದಾ ಲಿಂಗನಗೌಡ ಪಾಟೀಲ (71) ಭಾನುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರಿಗೆ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆ ಫಲಿಸದೇ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಒಂದು ಬಾರಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಹಿರೇಬಾಗೇವಾಡಿ ಗ್ರಾಮದ ತೋಟದ ಮನೆಯಲ್ಲಿ ನೆರವೇರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಂಚಣಿ: ವಾರ್ಷಿಕ ಆದಾಯ ಮಿತಿ ₹1.20 ಲಕ್ಷಕ್ಕೇರಿಕೆ ಏರಿಕೆ
ಈ ಸಲ ಅಂಬಾರಿ ಹೊರಲು ದುಬಾರೆಯ ಧನಂಜಯ, ಪ್ರಶಾಂತ್ ಆನೆ ಪೈಪೋಟಿ!