ಜಿಲ್ಲೆಗೆ ಮಾಜಿ ಸಂಸದ ಧ್ರುವನಾರಾಯಣ ಕೊಡುಗೆ ಅಪಾರ

KannadaprabhaNewsNetwork |  
Published : Aug 07, 2025, 12:46 AM IST
ಜಿಲ್ಲೆಗೆ ಧ್ರುವನಾರಾಯಣ ಕೊಡುಗೆ ಅಪಾರ | Kannada Prabha

ಸಾರಾಂಶ

ದಿ.ಮಾಜಿ ಸಂಸದ ಆ‌ರ್.ಧ್ರುವನಾರಾಯಣ ಶಾಸಕರಾಗಿ, ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ದಿ.ಮಾಜಿ ಸಂಸದ ಆ‌ರ್.ಧ್ರುವನಾರಾಯಣ ಶಾಸಕರಾಗಿ, ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್ ಹೇಳಿದರು.

ನಗರದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಚೇತನ ಕಲಾವಾಹಿನಿ ಬೆಳ್ಳಿ ಮಹೋತ್ಸವ, ರೋಟರಿ ಸಂಸ್ಥೆ ಸಹಯೋಗದಲ್ಲಿ ನಡೆದ ಆರ್.ಧ್ರುವನಾರಾಯಣ ಜನ್ಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ತಂದೆ ಮಹದೇವ ಪ್ರಸಾದ್ ಅವರು ಧ್ರುವನಾರಾಯಣ ಜೊತೆಗೂಡಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದಿ ಕೆಲಸ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಶಾಲಾ, ಕಾಲೇಜು, ಆಸ್ಪತ್ರೆ ನಿರ್ಮಾಣ ಸೇರಿದಂತೆ ಜಿಲ್ಲೆಯಲ್ಲಿ ಮಹತ್ತರ ವಾದ ಕೆಲಸಗಳನ್ನು ಮಾಡಿದ್ದಾರೆ. ಅವರಿಬ್ಬರು ನಮ್ಮಿಂದ ದೂರವಾಗಿರಬಹುದು ಆದರೆ ಅವರು ಜಿಲ್ಲೆಯಲ್ಲಿ ಮಾಡಿರುವ ಜನಪರ ಕಾರ್ಯಗಳು ಜೀವಂತವಾಗಿವೆ ಎಂದರು.

ಶಾಸಕ ದರ್ಶನ್‌ ಧ್ರುವನಾರಾಯಣ ಮಾತನಾಡಿ, ನಮ್ಮ ತಂದೆ ಆರ್.ಧ್ರುವನಾರಾಯಣ 2 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಈ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. 2013ರಿಂದ 18ರ ತನಕ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸುವಾರಿ ಸಚಿವರಾಗಿದ್ದ ದಿ. ಎಚ್. ಎಸ್. ಮಹದೇವಪ್ರಸಾದ್ ಆಶೀರ್ವಾದಿಂದ ತಂದೆ ಧ್ರುವನಾರಾಯಣ ಜೊತೆಗೂಡಿ ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದರು.ನಮ್ಮ ತಂದೆ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದರು. ಈ ಜಿಲ್ಲೆಯಲ್ಲಿ ಅನೇಕ ಶಾಲೆ, ಕಾಲೇಜು ನಿರ್ಮಾಣ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೆಡಿಕಲ್‌ ಕಾಲೇಜು, ಕಾನೂನು, ಕೃಷಿ ಕಾಲೇಜು, ಏಕಲವ್ಯ, ಕೇಂದ್ರೀಯ ವಿದ್ಯಾಲಯ, ಎಂಜಿನಿಯ‌ರ್ ಕಾಲೇಜು ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಹದೇವಪ್ರಸಾದ್, ಧ್ರುವನಾರಾಯಣ ಅವರು ಜೊತೆಗೂಡಿ ಮಾಡಿದ ಶ್ರಮಫಲವಾಗಿ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ. ತಂದೆಯವರ ಹಾದಿಯಲ್ಲಿ ನಿಷ್ಠೆಯಿಂದ ಜನಸೇವೆಯನ್ನು.ಪ್ರಾಮಾಣಿಕವಾಗಿ ಮಾಡುವುದಾಗಿ ತಿಳಿಸಿದರು.

250 ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಬೋಧನಾ ಉಪಕರಣ, ಹಾಗೂ 100 ಜಾನಪದ ಕಲಾವಿದರಿಗೆ ನಮವಸ್ತ್ರ ವಿತರಿಸಲಾಯಿತು.

ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಚೂಡಾಧ್ಯಕ್ಷ ಮಹಮ್ಮದ್‌ಅಸ್ಗರ್, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಬಿ.ಕೆ.ರವಿಕುಮಾ‌ರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ರೇಣುಕಾದೇವಿ,ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿ.ಪಂ.ಮಾಜಿ ಸದಸ್ಯ ಕೆರೆಹಳ್ಳಿ ನವೀನ್‌, ಜೆಎಸ್‌ಎನ್‌ ಶಿಕ್ಷಣ ಸಂಸ್ಥೆ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಚೇತನ ಕಲಾವಾಹಿನಿ ಅಧ್ಯಕ್ಷ ಜಿ.ರಾಜಪ್ಪ, ಕಾರ್ಯದರ್ಶಿ ಮಂಜುನಾಥ್, ರೋಟರಿ ಅಧ್ಯಕ್ಷ ಕಾಗಲವಾಡಿ ಚಂದ್ರು, ತಾ.ಪಂ. ಮಾಜಿ ಸದಸ್ಯರಾದ ರಾಜು, ಚಿಕ್ಕಮಹದೇವ್ರು, ಎಪಿಎಂಸಿ ನಿರ್ದೇಶಕ ಪ್ರದೀಪ್‌, ಸಮಾಜಸೇವಕ ಶ್ರೀನಿಧಿಕುದರ್, ನಂಜುಂಡಸ್ವಾಮಿ, ಅಕ್ಷಯ್, ಸ್ವಾಮಿ, ವಿನೋದ್ ಇತರರು ಹಾಜರಿದ್ದರು.

PREV

Recommended Stories

ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್