13ರಂದು ಮಾಜಿ ಸಂಸದ ಸಿದ್ದೇಶ್ವರ ಹುಟ್ಟುಹಬ್ಬ: ಯಶವಂತ ರಾವ್‌ ಮಾಹಿತಿ

KannadaprabhaNewsNetwork |  
Published : Jul 11, 2024, 01:41 AM ISTUpdated : Jul 11, 2024, 12:34 PM IST
9ಕೆಡಿವಿಜಿ4-ದಾವಣಗೆರೆಯಲ್ಲಿ ಬಿಜೆಪಿ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತರಾವ್ ಜಾಧವ್, ಎಸ್.ಎಂ.ವೀರೇಶ ಹನಗವಾಡಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅವರ ಹುಟ್ಟುಹಬ್ಬ ಸಂಭ್ರಮಾಚರಣೆ ಸಮಾರಂಭವನ್ನು ಜಿ.ಎಂ.ಸಿದ್ದೇಶ್ವರ ಅಭಿಮಾನಿ ಬಳಗದಿಂದ ಜು.13ರಂದು ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ದಾವಣಗೆರೆಯಲ್ಲಿ ಹೇಳಿದ್ದಾರೆ.

 ದಾವಣಗೆರೆ: ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅವರ ಹುಟ್ಟುಹಬ್ಬ ಸಂಭ್ರಮಾಚರಣೆ ಸಮಾರಂಭವನ್ನು ಜಿ.ಎಂ.ಸಿದ್ದೇಶ್ವರ ಅಭಿಮಾನಿ ಬಳಗದಿಂದ ಜು.13ರಂದು ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಚಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30 ಗಂಟೆಗೆ ಅಂಧ ಮಕ್ಕಳೊಂದಿಗೆ ಕೇಕ್‌ ಕತ್ತರಿಸುವ ಮೂಲಕ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ಶುಭ ಹಾರೈಸಲಿದ್ದಾರೆ. ಮಕ್ಕಳಿಗೆ ಬಳಗದಿಂದ ಆತಿಥ್ಯ ನೀಡಲಾಗುವುದು. ರಾಜ್ಯಮಟ್ಟದ ಬಿಜೆಪಿ ನಾಯಕರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ಹೇಳಿದರು.

ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ ಹನಗವಾಡಿ ಮಾತನಾಡಿ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಮಧ್ಯ ಕರ್ನಾಟಕದ ಪ್ರಭಾವಿ ನಾಯಕರಾಗಿದ್ದಾರೆ. ಅವರ ಅಧಿಕಾರ ಅ‍ವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಸ್ಮಾರ್ಟ್ ಸಿಟಿ ಯೋಜನೆಯನ್ನು ದಾವಣಗೆರೆಗೆ ತಂದಿದ್ದು ಸಿದ್ದೇಶ್ವರ ಎಂದರು.

ಸಿದ್ದೇಶ್ವರ ಅವರ ಹುಟ್ಟುಹಬ್ಬ ಸಂಭ್ರಮಕ್ಕೆ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದಲೂ ಮುಖಂಡರು, ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಕ್ಷೇತ್ರದ ಮಾಜಿ ಶಾಸಕರು, ಪದಾಧಿಕಾರಿಗಳು, ಹಿರಿಯ, ಕಿರಿಯ ಕಾರ್ಯಕರ್ತರು, ಬೂತ್ ಮಟ್ಟದ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಪಕ್ಷದ ಮುಖಂಡರಾದ ಬಿ.ಎಸ್‌.ಜಗದೀಶ, ಬಿ.ಎಂ.ಸತೀಶ ಕೊಳೇನಹಳ್ಳಿ, ನೆಲಹೊನ್ನೆ ದೇವರಾಜ, ರಾಕೇಶ ಬಜರಂಗಿ, ಟಿಂಕರ್ ಮಂಜಣ್ಣ, ರಾಜು ನೀಲಗುಂದ ಇತರರು ಇದ್ದರು. 

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ