ಅನಾರೋಗ್ಯ: ಮಾಜಿ ಪಿಎಂ ದೇವೇಗೌಡ ಆಸ್ಪತ್ರೆಗೆ ದಾಖಲು

KannadaprabhaNewsNetwork |  
Published : Feb 16, 2024, 01:55 AM ISTUpdated : Feb 16, 2024, 01:00 PM IST
Deve Gowda

ಸಾರಾಂಶ

ಅನಾರೋಗ್ಯ ಹಿನ್ನೆಲೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೊಳಗಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಅನಾರೋಗ್ಯ ಹಿನ್ನೆಲೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೊಳಗಾಗಿದ್ದಾರೆ.

ಇತ್ತೀಚೆಗೆ ದೇವೇಗೌಡ ಅವರು ಹೆಚ್ಚಾಗಿ ಓಡಾಟ ನಡೆಸಿದ್ದರಿಂದ ದೇಹ ದಣಿವಾಗಿದೆ. ಅಲ್ಲದೇ, ವಯೋಸಹಜ ಸಮಸ್ಯೆಯಿಂದಾಗಿ ಅನಾರೋಗ್ಯಕ್ಕೊಳಗಾಗಿದ್ದಾರೆ. 

ದೈಹಿಕವಾಗಿ ತೀವ್ರ ಆಯಾಸಗೊಂಡಿದ್ದರಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅಗತ್ಯ ಚಿಕಿತ್ಸೆ ನೀಡಿದ್ದಾರೆ. ಶುಕ್ರವಾರ ಅಥವಾ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಇದೆ. 

ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.ಈ ನಡುವೆ, ಮಾಧ್ಯಮಗಳಲ್ಲಿ ಆರೋಗ್ಯದ ಬಗ್ಗೆ ಇಲ್ಲದ ವದಂತಿ ಹಬ್ಬಿದ್ದ ಹಿನ್ನೆಲೆಯಲ್ಲಿ ದೇವೇಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. 

ನನ್ನ ಆರೋಗ್ಯದ ಕುರಿತು ಕೆಲವು ಉತ್ಪ್ರೇಕ್ಷಿತ ವರದಿಗಳು ಬಿತ್ತರಗೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. 

ಆದರೆ ನಾನು ಸಹಜ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ