ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷರಿಂದ ಸಿ.ಟಿ ರವಿ ಭೇಟಿ

KannadaprabhaNewsNetwork |  
Published : Nov 07, 2025, 03:15 AM IST
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ತಂಡ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರನ್ನು ಭೇಟಿಯಾಗಿ ಅರೆಭಾಷೆ ಸಮುದಾಯದ  ಹೆಮ್ಮೆಯ ಕೃತಿಗಳನ್ನು ನೀಡಿದರು.  | Kannada Prabha

ಸಾರಾಂಶ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ತಂಡ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಅವರನ್ನು ಭೇಟಿಯಾದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

2019 - 2022 ಅವಧಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ತಂಡ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಭಾನುವಾರ ಚಿಕ್ಕಮಗಳೂರಿನ ಅವರ ಸ್ವಗೃಹದಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವಸಿ.ಟಿ.ರವಿ ಅವರಿಗೆ ಅಕಾಡೆಮಿ ಅವಧಿಯಲ್ಲಿ ಹಮ್ಮಿಕೊಂಡಿದ್ದ ಮಹತ್ತರ ಯೋಜನೆಗಳಾದ ಅರೆಭಾಷೆ ಪದಕೋಶ, ಅರೆಭಾಷೆ ವಿಶ್ವಕೋಶ, ಅರೆಭಾಷೆ ವಸ್ತುಕೋಶ, ಸಾಹೇಬ್ರು ಬಂದವೆ ನಾಟಕ ತಿರುಗಾಟ ಹಾಗೂ ಗ್ರಾಮ ವಾಸ್ತವ್ಯದ ಕಲಾಚಿತ್ರ ಮುಂತಾದ ಭಾಷೆ ಮತ್ತು ಸಂಸ್ಕೃತಿ ಅಭಿವೃದ್ಧಿ ಬಗೆಗೆ ಕಾಳಜಿ ವಹಿಸಿ ಮಾಡಿರುವ ಪ್ರಾದೇಶಿಕ ಮತ್ತು ಅರೆಭಾಷೆ ಸಮುದಾಯದ ಮೈಲಿಗಲ್ಲು ಹಾಗೂ ಹೆಮ್ಮೆಯ ಕೃತಿಗಳನ್ನು ನೀಡಿದರು.

ಅಕಾಡೆಮಿಯ ಮಾಜಿ ಸದಸ್ಯರಾದ ಜಾನಕಿ ಬೆಳಿಯಪ್ಪ ಗೌಡ, ಪ್ರೇಮಾ ರಾಘವಯ್ಯ ಚೊಕ್ಕಾಡಿ, ಧನಂಜಯ ಅಗೋಳಿಕಜೆ, ಸ್ಮಿತಾ ಅಮೃತರಾಜ್, ದಂಬೆಕೋಡಿ ಅನಂದ ಗೌಡ, ಡಾ.ದಯಾನಂದ ಕೂಡಕಂಡಿ, ಕುಸುಮಾಧರ ಎ.ಟಿ., ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ ಮೊಂಟಡ್ಕ, ಡಾ. ವಿಶ್ವನಾಥ ಬದಿಕಾನ, ಡಾ.ಪುರುಷೋತ್ತಮ ಕರಂಗಲ್ಲು, ಕಿರಣ ಕುಂಬಳಚೇರಿ, ಭರತೇಶ ಅಲಸಂಡೆಮಜಲು ಉಪಸ್ಥಿತರಿದ್ದರು.

ಇದೇ ಸಂದರ್ಭ ಇತ್ತೀಚೆಗೆ ನಿವೃತ್ತರಾದ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕರಾದ ಡಾ. ವಿಶ್ವನಾಥ ಬದಿಕಾನ ದಂಪತಿ ಅವರನ್ನು ಅಭಿನಂದಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ
₹1000+ ಕೋಟಿ ಸೈಬರ್‌ ವಂಚನೆ : ಸ್ವಾಮೀಜಿ.ಕಾಂ, ನಿಯೋ ಸಿಸ್ಟಮ್‌ ಹೆಸರಲ್ಲಿ ಜಾಲ ಪತ್ತೆ