ಕನ್ನಡಪ್ರಭ ವಾರ್ತೆ ಪುತ್ತೂರು
ಸುಳ್ಯ ತಾಲೂಕಿನ ಪೆರುವಾಜೆಯಲ್ಲಿರುವ ತನ್ನ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ವೇಳೆಗೆ ಏರುಪೇರು ಕಂಡು ಬಂದಿತ್ತು. ರಾತ್ರಿ ಅವರನ್ನು ನಗರದ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಅವರು ಪತ್ನಿ ಸುಮಾ ಆರ್.ಆಚಾರ್, ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆರ್., ಬೆಳ್ಳಾರೆ ಡಾ.ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆರ್.ಅವರನ್ನು ಅಗಲಿದ್ದಾರೆ. ಮೃತದೇಹವನ್ನು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿರಿಸಲಾಗಿದ್ದು ಬುಧವಾರ ಅಂತ್ಯ ಕ್ರಿಯೆ ನಡೆಯಲಿದೆ.