- ಚನ್ನಗಿರಿ ತಾಲೂಕು ಬಿಜೆಪಿಯಿಂದ ಅಟಲ್ ಸ್ಮೃತಿ ವರ್ಷ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಚನ್ನಗಿರಿ
ಭಾರತ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕಾಂಗ್ರೆಸೇತರ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರ ಮಹತ್ವದ್ದಾಗಿಗಿದೆ. ಇವರು ಪ್ರಧಾನಿ ಆಗಿದ್ದಾಗ ನಿಷ್ಠೆ, ಪ್ರಾಮಾಣಿಕತೆ, ದೇಶಪ್ರೇಮದಿಂದ ದಕ್ಷ ಆಡಳಿತ ನೀಡಿದ್ದರು. ಇದರ ಪರಿಣಾಮ ಇಂದಿಗೂ ವಾಜಪೇಯಿ ಅವರನ್ನು ಪಕ್ಷಾತೀತವಾಗಿ ಗೌರವಿಸಲಾಗುತ್ತದೆ ಎಂದು ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.ಬುಧವಾರ ಸಂಜೆ ಪಟ್ಟಣದ ಹಿರೇಮಠದ ಆವರಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಅಟಲ್ ಸ್ಮೃತಿ ವರ್ಷ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ವಾಜಪೇಯಿ ಆಡಳಿತ ಅವಧಿಯಲ್ಲಿ ಚತುಷ್ಪಥ ರಸ್ತೆಗಳು, ನೆರೆಯ ದೇಶಗಳೊಂದಿಗೆ ಸೌಹಾರ್ದತೆ ಬೆಳೆಸುವುದು ಸೇರಿದಂತೆ ಹಲವಾರು ಪ್ರಗತಿಪರ ಕೆಲಸಗಳನ್ನು ಮಾಡಿದ್ದರು. ಇದರಿಂದ ಇಂದಿಗೂ ಭಾರತದಲ್ಲಿ ವಾಜಪೇಯಿ ಅವರ ಹೆಸರು ಶಾಶ್ವತವಾಗಿ ಉಳಿದಿದೆ ಎಂದರು.ತಾಲೂಕು ಬಿಜೆಪಿ ಮುಖಂಡ ಗೌ.ಹಾಲೇಶ್ ಮಾತನಾಡಿ, ವಾಜಪೇಯಿ ಅವರ ಅಧಿಕಾರ ಅವಧಿಯಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸಿದೆ. ಬಿಜೆಪಿಯ ಪ್ರಾರಂಭದ ದಿನಗಳಲ್ಲಿ ಕೇವಲ ಎರಡು ಜನ ಸಂಸತ್ ಸದಸ್ಯರನ್ನು ಮಾತ್ರ ಹೊಂದಿತ್ತು. ಪ್ರಸ್ತುತ ದಿನದಲ್ಲಿ ವಿಶ್ವದಲ್ಲಿಯೇ ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆಯಲು ವಾಜಪೇಯಿ ಮತ್ತು ಎಲ್.ಕೆ.ಆಡ್ವಾಣಿ ಅವರು ಹಾಕಿದ ಭದ್ರ ಬುನಾದಿಯೇ ಕಾರಣವಾಗಿದೆ ಎಂದರು.
ಅಧ್ಯಕ್ಷತೆಯನ್ನು ತಾಲೂಕು ಬಿಜೆಪಿ ಅಧ್ಯಕ್ಷ ಮಲಹಾಳ್ ಡಿ.ಸಿ. ಕುಮಾರ ಸ್ವಾಮಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಮುಖಂಡರಾದ ಮಂಗೇನಹಳ್ಳಿ ಲೋಹಿತ್, ಹರೀಶ್, ತಿಪ್ಪಗೊಂಡನಹಳ್ಳಿ ಮಲ್ಲಿಕಾರ್ಜುನ, ಸಿಂಧು, ಉಮಾ ರಾಜಣ್ಣ, ಕಮಲಾ, ರೂಪ, ಮಂಜುಳಾ, ಸುಜಾತ, ಪುಪ್ಪಲತಾ ಜಗದೀಶ್, ಶಶಿಕಲಾ ನಾಗರಾಜ್, ಸವಿತಾ ರಾಘವೇಂದ್ರ ಶೆಟ್ಟಿ ಮೊದಲಾದವರು ಹಾಜರಿದ್ದರು.- - -
-25ಕೆಸಿಎನ್‌ಜಿ1.ಜೆಪಿಜಿ:ಚನ್ನಗಿರಿಯಲ್ಲಿ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ಅಟಲ್ ಸ್ಮೃತಿ ವರ್ಷ ಕಾರ್ಯಕ್ರಮವನ್ನು ಶ್ರೀ ಕೇದಾರಲಿಂಗ ಸ್ವಾಮೀಜಿ ಉದ್ಘಾಟಿಸಿದರು.