ಕನಕಪುರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ

KannadaprabhaNewsNetwork |  
Published : May 19, 2026, 01:30 AM IST
ಕೆ ಕೆ ಪಿ ಸುದ್ದಿ 02:ನಗರದ ಚನ್ನಬಸಪ್ಪ ವೃತ್ತದ ಬಳಿ ಜೆಡಿಎಸ್ ಪಕ್ಷದ ವತಿಯಿಂದ ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಕನಕಪುರ: ಜೆಡಿಎಸ್ ರಾಷ್ಟ್ರಾಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 94ನೇ ಹುಟ್ಟು ಹಬ್ಬವನ್ನು ತಾಲೂಕು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಡಗರದಿಂದ ಆಚರಿಸಿದರು

ಕನಕಪುರ: ಜೆಡಿಎಸ್ ರಾಷ್ಟ್ರಾಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 94ನೇ ಹುಟ್ಟು ಹಬ್ಬವನ್ನು ತಾಲೂಕು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಡಗರದಿಂದ ಆಚರಿಸಿದರು.

ನಗರದ ಚನ್ನಬಸಪ್ಪ ವೃತ್ತದ ಬಳಿ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ, ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ ಬಳಿಕ ತಾಯಿ ಮಗುವಿನ ಆಸ್ಪತ್ರೆಯ ಗರ್ಭಿಣಿಯರಿಗೆ ಹಣ್ಣು ವಿತರಿಸಿದರು.

ರಾಜ್ಯ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ಚಿನ್ನಸ್ವಾಮಿ ಮಾತನಾಡಿ, ಈ ದೇಶ ಕಂಡ ಅಪ್ರತಿಮ ರಾಜಕಾರಣಿ, ದೇವೇಗೌಡರು, ಅವರು ರಾಜಕಾರಣದಲ್ಲಿ ಸಾಗಿ ಬಂದ ಜನಪರ ಹೋರಾಟಗಳು ಇಂದಿನ ಪೀಳಿಗೆಗೂ ಪ್ರಸ್ತುತ. ರಾಜ್ಯದ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ, ರಾಜ್ಯ ಹಾಗೂ ದೇಶಕ್ಕೆ ನೀಡಿದ ಕೊಡುಗೆ ಅಪಾರ. ದೇವೇಗೌಡರು ಇಳಿವಯಸ್ಸಿನಲ್ಲಿಯೂ ರಾಜ್ಯಸಭೆಯಲ್ಲಿ ರಾಜ್ಯ ಹಾಗೂ ದೇಶದ ರೈತರ, ಬಡವರ ಧ್ವನಿಯಾಗಿ ಕೆಲಸ ಮಾಡುತ್ತಲೇ ಬಂದಿದ್ದಾರೆ, ಇವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಆಗ್ರಹಿಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು, ದಿಶಾ ಸಮಿತಿ ಸದಸ್ಯರಾದ ರಾಜೇಶ್, ಶೋಭಾ, ಜೆಡಿಎಸ್ ತಾಲೂಕು ಮಹಿಳಾ ಅಧ್ಯಕ್ಷ ಪವಿತ್ರ, ಹಿರಿಯ ಮುಖಂಡ ಸಿದ್ದಮರಿಗೌಡ, ವಕೀಲ ನಂಜೇಗೌಡ, ಯುವ ಮುಖಂಡರಾದ ತಿಮ್ಮೇಗೌಡ, ಅರಳಾಳು ರಾಜೇಂದ್ರ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕೆ.ಪಿ.ಕುಮಾರ್, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗಾನಂದ, ಮುಖಂಡ ಮಂಜುನಾಥ್ ಇತರರು ಭಾಗವಹಿಸಿದ್ದರು.

ಕೆ ಕೆ ಪಿ ಸುದ್ದಿ, 02:

ಕನಕಪುರದ ಚನ್ನಬಸಪ್ಪ ವೃತ್ತದ ಬಳಿ ಜೆಡಿಎಸ್ ಪಕ್ಷದ ತಾಲೂಕು ಪದಾಧಿಕಾರಿಗಳು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬ ಆಚರಿಸಿದರು. ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಚಿನ್ನಸ್ವಾಮಿ, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು, ದಿಶಾ ಸಮಿತಿ ಸದಸ್ಯರಾದ ರಾಜೇಶ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಚ್‌ಡಿಡಿ ಹೆಸರಲ್ಲಿ ಬೇಲೂರು ಚನ್ನಕೇಶವ ಸ್ವಾಮಿಗೆ ವಿಶೇಷ ಪೂಜೆ
ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಸಂಭ್ರಮ