ಹುಬ್ಬಳ್ಳಿ:
ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಉಪ ಚುನಾವಣೆಯಲ್ಲಿ ಸರ್ಕಾರದ ಆಟಾಟೋಪ ನಡೆಯಲ್ಲ. ಜನ ರಾಜ್ಯ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ರಾಜ್ಯಕ್ಕೆ ಜೆಪಿಸಿ ತಂಡ ಆಗಮಿಸುತ್ತಿರುವುದೇ ಅನಧಿಕೃತ ಎಂಬ ವಕ್ಫ್ ಸಚಿವ ಜಮೀರ್ ಅಹಮದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೊದಲು ಅವರು ಕಾನೂನು ಅರಿತುಕೊಳ್ಳಲಿ. ಈ ರೀತಿಯಾಗಿ ಏಕೆ ಹೇಳಿಕೆ ಕೊಟ್ಟರೋ ಗೊತ್ತಾಗುತ್ತಿಲ್ಲ. ಅವರಿಗೆ ಮುಸ್ಲಿಮರು ಮಾತ್ರ ಮತ ಹಾಕಿಲ್ಲ. ಎಲ್ಲರೂ ಹಾಕಿದ್ದಾರೆ. ಅವರು ಮೊದಲು ಮಂತ್ರಿ ಕೆಲಸ ಮಾಡಲಿ. ಅದನ್ನು ಬಿಟ್ಟು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.ಪಂಜರದ ಗಿಳಿಯಾಗಿದ್ದಾರೆ:
ರಾಷ್ಟ್ರಕ್ಕೆ ಬಸವರಾಜ ಬೊಮ್ಮಾಯಿ ಅವಶ್ಯಕತೆ ಇದೆ ಎಂದು ನರೇಂದ್ರ ಮೋದಿ ಅವರು ಅಪೇಕ್ಷೆ ಮೇರೆಗೆ ಅವರು ಸಂಸದರಾಗಿದ್ದು, ಅವರ ಮಗನನ್ನು ಶಿಗ್ಗಾಂವಿ ಕ್ಷೇತ್ರಕ್ಕೆ ನಿಲ್ಲಿಸಲಾಗಿದೆ. ಮಾಜಿ ಸಿಎಂ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಈ ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಧಾನಿ ಮೋದಿ ಅವರು ಕೈಗೊಂಡ ಕಾರ್ಯಗಳು ಗೆಲುವಿಗೆ ಸಹಕಾರಿ ಆಗಲಿದೆ. ಮೂರು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.