ಇಂದು ಕೇಂದ್ರದ ಮಾಜಿ ಸಚಿವ ಸಿದ್ದೇಶ್ವರ ಹುಟ್ಟುಹಬ್ಬ ಸಂಭ್ರಮ

KannadaprabhaNewsNetwork |  
Published : Jul 11, 2026, 02:45 AM IST
9ಕೆಡಿವಿಜಿ3, 4-ದಾವಣಗೆರೆಯಲ್ಲಿ ಗುರುವಾರ ಬಿಜೆಪಿ ಹಿರಿಯ ಮುಖಂಡರ ಯಶವಂತರಾವ್ ಜಾಧವ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಡಾ. ಜಿ.ಎಂ.ಸಿದ್ದೇಶ್ವರ ಅವರ 74ನೇ ಜನ್ಮದಿನದ ಸಮಾರಂಭವನ್ನು ಜು.11ರಂದು ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಡಾ. ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ತಿಳಿಸಿದ್ದಾರೆ.

- ಅಭಿಮಾನಿ ಬಳಗದಿಂದ 74ನೇ ಜನ್ಮದಿನ ಆಯೋಜನೆ, ಸನ್ಮಾನ: ಯಶವಂತ ರಾವ್ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಡಾ. ಜಿ.ಎಂ.ಸಿದ್ದೇಶ್ವರ ಅವರ 74ನೇ ಜನ್ಮದಿನದ ಸಮಾರಂಭವನ್ನು ಜು.11ರಂದು ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಡಾ. ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ನಡೆಯುವ ಸಮಾರಂಭದಲ್ಲಿ ವಿಧಾನ ಪರಿಷತ್ತು ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಸುನೀಲಕುಮಾರ, ಶಿವನಗೌಡ ನಾಯಕ, ವಿಪ ಮುಖ್ಯ ಸಚೇತಕ ಎನ್.ರವಿಕುಮಾರ, ಶಾಸಕರಾದ ಎಂ.ಚಂದ್ರಪ್ಪ, ಬಿ.ಪಿ.ಹರೀಶ ಇತರರು ಭಾಗವಹಿಸುವರು ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ, ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ, ಎಚ್.ಪಿ. ರಾಜೇಶ, ಬಿಜೆಪಿ ಮಹಿಳಾ ಮೋರ್ಚಾದ ನಾಯಕಿ ಗಾಯತ್ರಿ ಸಿದ್ದೇಶ್ವರ, ಪಕ್ಷದ ಜಿಲ್ಲಾ ಅಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಇತರರು ಪಾಲ್ಗೊಳ್ಳುವರು. ಇದೇ ವೇಳೆ ರಾಜ್ಯಸಭಾ ಸದಸ್ಯ ಡಾ. ಮಾ.ನಾಗರಾಜ, ವಿಪ ಸದಸ್ಯ ಲಿಂಗರಾಜರನ್ನು ಸನ್ಮಾನಿಸಲಾಗುವುದು. ಸುಮಾರು ನಾಲ್ಕೈದು ಸಾವಿರಕ್ಕೂ ಅಧಿಕ ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾತಿ ದೊಗ್ಗಳ್ಳಿ ವೀರೇಶ, ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ ಹನಗವಾಡಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ, ಬಿ.ರಮೇಶ ನಾಯ್ಕ, ಟಿಂಕರ್ ಮಂಜಣ್ಣ, ಶಿವನಗೌಡ ಟಿ.ಪಾಟೀಲ್, ಗುರುಶಾಂತ ಸೋಗಿ, ಗೋವಿಂದರಾಜು, ಶಿವಾನಂದ, ಕಿಶೋರಕುಮಾರ ಮಡಿವಾಳ್ ಇತರರು ಇದ್ದರು.

- - -

-9ಕೆಡಿವಿಜಿ3, 4: ದಾವಣಗೆರೆಯಲ್ಲಿ ಯಶವಂತ ರಾವ್ ಜಾಧವ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

​ಜಗಳೂರು ಕ್ಷೇತ್ರ: 263 ಬಿಎಲ್‌ಒಗಳಿಂದ ಮನೆ ಮನೆ ಸಮೀಕ್ಷೆ
ವಿದ್ಯಾರ್ಥಿಗಳನ್ನು ಸುಂದರ ಶಿಲ್ಪಗಳಾಗಿಸಲು ಶ್ರಮಿಸಿ: ಸಿದ್ದೇಶ್ವರ್‌