ಹಾವೇರಿಯಲ್ಲಿ ಪ್ರಧಾನಿ ಮೋದಿ ಜನ್ಮದಿನದ ನಿಮಿತ್ತ ಸೇವಾ ಪಾಕ್ಷಿಕ

KannadaprabhaNewsNetwork |  
Published : Sep 18, 2025, 01:10 AM IST
17ಎಚ್‌ವಿಆರ್6 | Kannada Prabha

ಸಾರಾಂಶ

ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿ ಚಟುವಟಿಕೆಯ ಭಾಗವಾಗಿರುವ ನಾವೆಲ್ಲ ಭಾಗ್ಯವಂತರು.

ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಪ್ರಯುಕ್ತ ನಗರದ ಶ್ರೀ ಶನೈಶ್ಚರ ಹಾಗೂ ಆಂಜನೇಯ ದೇವಸ್ಥಾನದಲ್ಲಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ನರೇಂದ್ರ ಮೋದಿ ಅವರಿಗೆ ಆಯುರಾರೋಗ್ಯ ಕಲ್ಪಿಸುವಂತೆ ದೇವರಲ್ಲಿ ಪ್ರಾರ್ಥಿಸಲಾಯಿತು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಒಬಿಸಿ ಮೋರ್ಚಾ ವತಿಯಿಂದ ಕೇಕ್ ಕತ್ತರಿಸಿ ಸಿಹಿ ವಿತರಿಲಾಯಿತು. ನಂತರ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ನಡೆದ ಸಭೆಯಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿ ಚಟುವಟಿಕೆಯ ಭಾಗವಾಗಿರುವ ನಾವೆಲ್ಲ ಭಾಗ್ಯವಂತರು. ಮೋದಿ ಅವರ ಸಾರಥ್ಯದಲ್ಲಿ ಭಾರತ ಉನ್ನತ ಮಟ್ಟದಲ್ಲಿ ಪ್ರಗತಿ ಹೊಂದುತ್ತಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದಲ್ಲಿಯೇ ಅತಿ ಹೆಚ್ಚು ಆರ್ಥಿಕ ಪ್ರಗತಿ ಹೊಂದಿದ ರಾಷ್ಟ್ರವಾಗುತ್ತದೆ. ನಾವೆಲ್ಲ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಹೆಗಲು ಕೊಟ್ಟು ಕೆಲಸ ಮಾಡೋಣ ಎಂದರು.

ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ದೇಶಾದ್ಯಂತ ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ 15 ದಿನಗಳ ಕಾಲ ನಿರಂತರವಾಗಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಸೇವಾ ಕಾರ್ಯಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿ, ಮೋದಿ ಅವರ ಕಾರ್ಯ ಸಾಧನೆಗಳನ್ನು ತಿಳಿಸಬೇಕು ಎಂದರು.

ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೆಲಗಾರ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸ್ಸೀಮಗೌಡ್ರ, ಮಾಜಿ ಶಾಸಕ ಶಿವರಾಜ ಸಜ್ಜನರ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ವಕ್ತಾರರಾದ ಪರಮೇಶ್ವರಪ್ಪ ಮೇಗಳಮನಿ, ಹಾವೇರಿ ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ ಇದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ