ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಅಭಿವೃದ್ಧಿಗೆ ಇಂದು ಶಿಲಾನ್ಯಾಸ

KannadaprabhaNewsNetwork |  
Published : Nov 22, 2025, 03:00 AM IST
ಶಿಲಾನ್ಯಾಸ | Kannada Prabha

ಸಾರಾಂಶ

614 ಕೋಟಿ ರು. ವೆಚ್ಚದ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಲಾಖೆಯ ಹೆದ್ದಾರಿಗಳ ನಿರ್ವಹಣೆ ಯೋಜನೆಯಲ್ಲಿ 30 ಕಿ.ಮೀ. ವ್ಯಾಪ್ತಿಯ ಬಹುಬೇಡಿಕೆಯ ಉಜಿರೆ ಪೆರಿಯಶಾಂತಿ ಸ್ಪರ್ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ನಡೆಯಲಿದೆ.

614 ಕೋಟಿ ರು. ವೆಚ್ಚದಲ್ಲಿ 30 ಕಿ.ಮೀ. ವ್ಯಾಪ್ತಿಯ ಬಹುಬೇಡಿಕೆ ರಸ್ತೆ ಕಾಮಗಾರಿ ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನಡೆಯಲಿದೆ.

614 ಕೋಟಿ ರು. ವೆಚ್ಚದ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಲಾಖೆಯ ಹೆದ್ದಾರಿಗಳ ನಿರ್ವಹಣೆ ಯೋಜನೆಯಲ್ಲಿ 30 ಕಿ.ಮೀ. ವ್ಯಾಪ್ತಿಯ ಬಹುಬೇಡಿಕೆಯ ಉಜಿರೆ ಪೆರಿಯಶಾಂತಿ ಸ್ಪರ್ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ನಡೆಯಲಿದೆ.

ಐತಿಹಾಸಿಕ ಕ್ಷೇತ್ರಗಳನ್ನು ಸಂಪರ್ಕಿಸುವ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಅಥವಾ ಒಂದು ರಾಷ್ಟ್ರೀಯ ಹೆದ್ದಾರಿಯಿಂದ ಇನ್ನೊಂದು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಅಥವಾ ಒಂದು ಪ್ರಮುಖ ರಸ್ತೆಯನ್ನು ಸಂಪರ್ಕಿಸುವ ಒಳದಾರಿಗಳನ್ನು ಮೇಲ್ದರ್ಜೆಗೇರಿಸುವ ಸ್ಪರ್ ಯೋಜನೆಯಡಿ ನಡೆಯಲಿರುವ ಈ ಕಾಮಗಾರಿಯಿಂದ ಮುಂದಿನ ದಿನಗಳಲ್ಲಿ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂದರ್ಶಿಸುವವರಿಗೆ ಅನುಕೂಲವಾಗಲಿದೆ.

ಕಾಮಗಾರಿಯಲ್ಲಿ ರಸ್ತೆ ಅಗಲೀಕರಣಗೊಳ್ಳಲಿದ್ದು, ಸುಸಜ್ಜಿತ ಚರಂಡಿಗಳು ನಿರ್ಮಾಣವಾಗಲಿವೆ. ಅಗತ್ಯ ಸ್ಥಳಗಳಲ್ಲಿ ಕಿರು ಸೇತುವೆ, ಸೇತುವೆಗಳು ರಚನೆಗೊಳ್ಳಲಿವೆ. ಧರ್ಮಸ್ಥಳದ ಮುಖ್ಯ ದ್ವಾರದ ಬಳಿ ಬೆಂಗಳೂರು ಮೆಜೆಸ್ಟಿಕ್ ಮಾದರಿಯ ಅಂಡರ್ ಪಾಸ್ ನಿರ್ಮಾಣವಾಗಲಿದೆ. ರಾತ್ರಿಯ ಸಂಚಾರ ಸುರಕ್ಷತೆಗೆ ಪೇಟೆ ಪ್ರದೇಶಗಳಲ್ಲಿ ವಿಶೇಷ ವಿದ್ಯುತ್ ದೀಪಗಳನ್ನು ಅಳವಡಿಸಲಾಗುತ್ತದೆ.

ಈ ರಸ್ತೆಯು 4 ವರ್ಷಗಳ ಹಿಂದೆ ರಾಜ್ಯ ಹೆದ್ದಾರಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಗೊಂಡಿದೆ. ಬಳಿಕ ಸಾಕಷ್ಟು ಸಮೀಕ್ಷೆಗಳು ನಡೆದಿವೆ. ಉಜಿರೆ-ಪೆರಿಯಶಾಂತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗಾಗಿ ಮರಗಳು ತೆರವುಗೊಳ್ಳಬೇಕಾಗಿದ್ದು ಅವುಗಳ ಲೆಕ್ಕಾಚಾರ ಪೂರ್ಣಗೊಂಡಿದೆ.ಸಂಸದ, ಶಾಸಕರಿಂದ ಶಿಲಾನ್ಯಾಸ: ಶನಿವಾರ ಧರ್ಮಸ್ಥಳ ದ್ವಾರದ ಬಳಿಯಿರುವ ಬಸ್‌ ನಿಲ್ದಾಣದ ಬಳಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ ಪೂಂಜ ಶಿಲಾನ್ಯಾಸ ನೆರವೇರಿಸಲಿದ್ದಾರೆ. .................ಬಹು ಬೇಡಿಕೆಯ ರಸ್ತೆಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳ ಓಡಾಟವಿದೆ. ಈಗಿರುವ ರಸ್ತೆಯ ಸ್ಥಿತಿ ಸಾಮಾನ್ಯವಾಗಿದೆ. ಇದರಿಂದ ವಾಹನ ಸವಾರರು ಕೆಲವೊಂದು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಇದೀಗ ಇಲ್ಲಿ ರಸ್ತೆ ಅಭಿವೃದ್ಧಿ ಹೊಂದುವುದರಿಂದ ಬಹುಕಾಲದ ಬೇಡಿಕೆಯೊಂದು ಈಡೇರಲಿದೆ. ಉಜಿರೆ ಪೇಟೆಯಿಂದ ಸಿದ್ದವನ ತನಕ ಈಗಾಗಲೇ ರಸ್ತೆ ಅಭಿವೃದ್ಧಿ ಹೊಂದಿದೆ. ಆದರೆ ಇಲ್ಲಿ ಮತ್ತೆ ಕಾಮಗಾರಿ ನಡೆಯಲಿದೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. 2ಕಿ.ಮೀ. ವ್ಯಾಪ್ತಿಯ ಈ ರಸ್ತೆ ಅಭಿವೃದ್ಧಿ ಹೊಂದಿದ್ದರೂ ಇಲ್ಲಿ ಸರಿಯಾದ ಫುಟ್ಪಾತ್, ಪಾರ್ಕಿಂಗ್ ವ್ಯವಸ್ಥೆಗಳು ಇರುವುದಿಲ್ಲ. ರಸ್ತೆ ಅಭಿವೃದ್ಧಿ ಹೊಂದಿರುವ ಜಾಗಗಳಲ್ಲಿ ವಾಹನಗಳ ಬೇಕಾಬಿಟ್ಟಿ ಪಾರ್ಕಿಂಗ್ ನಿಂದ ಇತರ ವಾಹನ ಸವಾರರು ಹೈರಾಣರಾಗುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ