ಮೇ 1 ರಂದು ಕೊಡಗು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ

KannadaprabhaNewsNetwork |  
Published : Apr 30, 2026, 02:30 AM IST
ಮೇ೧ರಂದು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ | Kannada Prabha

ಸಾರಾಂಶ

ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘ ವತಿಯಿಂದ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಕೊಡಗು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಮೇ 1ರಂದು ಶಂಕುಸ್ಥಾಪನೆ ನೆರವೇರಲಿದೆ.

ಮಡಿಕೇರಿ: ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘ ವತಿಯಿಂದ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಕೊಡಗು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಮೇ 1ರಂದು ಶಂಕುಸ್ಥಾಪನೆ ನೆರವೇರಲಿದೆ.

ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ, ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಎಂಎಲ್‌ಸಿ ಸುಜಾ ಕುಶಾಲಪ್ಪ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ದಾನಿ ದಿ.ಡಾ.ಬಿ.ಟಿ.ಪ್ರೇಮನಾಥ್ ಪೂಂಜಾ ಅವರು ಭವನ ನಿರ್ಮಾಣಕ್ಕಾಗಿ ತಮ್ಮ 0.52 ಎಕರೆ ಜಾಗವನ್ನು ದಶಕದ ಹಿಂದೆಯೇ ನೀಡಿದ್ದರು. ಸುಸಜ್ಜಿತವಾದ ಬಂಟರ ಭವನ ನಿರ್ಮಾಣವಾಗಬೇಕೆಂಬುದು ನಮ್ಮ ಸಮುದಾಯದ ಹಲವು ವರ್ಷಗಳ ಕನಸಾಗಿತ್ತು. ಇದು ಈಗ ನನಸಾಗುತ್ತಿದೆ. ಕಾರ್ಯಕ್ರಮದಲ್ಲಿ ದಿವಂಗತ ಪ್ರೇಮನಾಥ್ ಪೂಂಜಾ ಅವರಿಗೆ ಮರಣೋತ್ತರವಾಗಿ ವಿಶೇಷ ಬಿರುದು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಯುವ ಬಂಟ್ಸ್ ಕ್ರೀಡಾಕೂಟ: ಶಂಕುಸ್ಥಾಪನೆ ಅಂಗವಾಗಿ ಏ.30 ರಿಂದ ಮೇ 3 ರವರೆಗೆ ಕೊಡಗು ಯುವ ಬಂಟ್ಸ್ ವತಿಯಿಂದ ಮಡಿಕೇರಿಯಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗ ಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್, ಹಗ್ಗ ಜಗ್ಗಾಟ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಬಿ.ಬಿ.ಐತಪ್ಪ ರೈ, ಉಪಾಧ್ಯಕ್ಷ ಬಿ.ಎಸ್.ಸದಾಶಿವ ರೈ, ಕಾರ್ಯದರ್ಶಿ ರವೀಂದ್ರ.ವಿ.ರೈ, ಬಂಟರ ಭವನ ಟ್ರಸ್ಟ್ ಕಾರ್ಯದರ್ಶಿ ಅಪ್ಪು ಬಾಲಕೃಷ್ಣ ರೈ, ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಸದಾನಂದ ರೈ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾಸ್‌ ಸಿಲಿಂಡರ್‌ ಕೊರತೆ: ಹೊಟೇಲ್ ಉದ್ಯಮ ಕಂಗಾಲು
ದ.ಕ. ಹಾಲು ಉತ್ಪಾದಕರ ಒಕ್ಕೂಟಕ್ಕೆ 10.61 ಕೋಟಿ ರು.ನಿವ್ವಳ ಲಾಭ