ದೇವನಹಳ್ಳಿ: ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 1980ರಲ್ಲಿ ಸ್ಥಾನಪನೆಗೊಂಡು ಈಗ ರಾಜ್ಯದಲ್ಲೆ ಅತ್ಯುನ್ನತ ಸ್ಥಾನದಲ್ಲಿರುವುದಕ್ಕೆ ಈ ಬ್ಯಾಂಕಿನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಪ್ರಾಮಾಣಿಕ ಪ್ರಯತ್ನದಿಂದ ಸಾಧ್ಯವಾಗಿದೆ ಎಂದು ಐದನೇ ಹಣಕಾಸು ಆಯೋಗ ಅಧ್ಯಕ್ಷ ಸಿ.ನಾರಾಯಣಸ್ವಾಮಿ ತಿಳಿಸಿದರು.
ಹೊಸ ಕಟ್ಟಡ 60 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಇನ್ನು ಐದಾರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಜಿ ಅಧ್ಯಕ್ಷ ಮುನಿರಾಜು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ. ಮುನೇಗೌಡ ಹಾಗೂ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್. ಮುನೇಗೌಡ ಮಾತನಾಡಿದರು.
ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷ ಜಿ.ಕೆ. ಹನುಮಪ್ಪ, ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ವಕೀಲರ ಸಂಘದ ಅಧ್ಯಕ್ಷ ವಕೀಲ ಮುನಿರಾಜು ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ್, ಪುರಸಭಾ ಸದಸ್ಯ ಜಿ.ಎ.ರವೀಂದ್ರ ಉಪಸ್ಥಿತರಿದ್ದರು.(ಫೋಟೊ ಕ್ಯಾಪ್ಷನ್)