ಉಪ್ಪಿನಂಗಡಿ ಸರ್ಕಾರಿ ಕಾಲೇಜು ಸಭಾಂಗಣಕ್ಕೆ ಶಿಲಾನ್ಯಾಸ

KannadaprabhaNewsNetwork |  
Published : Mar 31, 2026, 03:00 AM IST
ಶಿಲಾನ್ಯಾಸ | Kannada Prabha

ಸಾರಾಂಶ

ವಿದ್ಯಾರ್ಥಿಗಳು ಸಾಧಿಸುವ ಛಲದಿಂದ ನಿರಂತರ ಶ್ರಮಿಸಬೇಕು. ಅಸಾಧ್ಯವಾದುದನ್ನು ಸಾಧಿಸುವ ಬಗ್ಗೆ ಕನಸು ಕಾಣಬೇಕು. ಆ ಮೂಲಕ ಗುರಿ ತಲುಪಲು ಶ್ರಮಿಸಬೇಕು. ಹಾಗಾದಾಗ ಮಾತ್ರ ತಮ್ಮ ಕಲಿಕೆ ಸಾರ್ಥಕವಾಗುತ್ತದೆ ಮತ್ತು ಜೀವನದಲ್ಲಿ ಏನಾದರೊಂದು ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಉಪ್ಪಿನಂಗಡಿ: ವಿದ್ಯಾರ್ಥಿಗಳು ಸಾಧಿಸುವ ಛಲದಿಂದ ನಿರಂತರ ಶ್ರಮಿಸಬೇಕು. ಅಸಾಧ್ಯವಾದುದನ್ನು ಸಾಧಿಸುವ ಬಗ್ಗೆ ಕನಸು ಕಾಣಬೇಕು. ಆ ಮೂಲಕ ಗುರಿ ತಲುಪಲು ಶ್ರಮಿಸಬೇಕು. ಹಾಗಾದಾಗ ಮಾತ್ರ ತಮ್ಮ ಕಲಿಕೆ ಸಾರ್ಥಕವಾಗುತ್ತದೆ ಮತ್ತು ಜೀವನದಲ್ಲಿ ಏನಾದರೊಂದು ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಶನಿವಾರ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಸಭಾಂಗಣ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ಕಾಲೇಜಿನ ಬಹು ಕಾಲದ ಬೇಡಿಕೆಗೆ ಅನುಗುಣವಾಗಿ ಸರ್ಕಾರ ೨ ಕೋಟಿ ರು. ಮಂಜೂರು ಮಾಡಿದೆ. ಕೆಲ ಅಂತಸ್ಥಿನಲ್ಲಿ ಸಭಾಂಗಣ ಮಾಡಿಕೊಂಡು, ಮುಂದೆ ಮೊದಲ ಮಹಡಿಯಲ್ಲಿ ತರಗತಿ ಕೊಠಡಿ ಮಾಡಲು ಅವಕಾಶ ಇದೆ, ಕಾಲೇಜು ವತಿಯಿಂದ ಬೇಡಿಕೆ ಪಟ್ಟಿ ಮಾಡಿ ಕೊಟ್ಟರೆ ಇನ್ನಷ್ಟು ಅನುದಾನ ದೊರಕಿಸಿ ಕೊಡಬಹುದು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಕಾರ್‍ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಇಸ್ಮಾಯಿಲ್ ಇಕ್ಬಾಲ್, ವಿನ್ಸೆಂಟ್ ಫರ್ನಾಂಡಿಸ್, ಶಬ್ಬೀರ್ ಕೆಂಪಿ, ನಝೀರ್ ಮಠ, ಸವಿತಾ ಹರೀಶ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ರವಿರಾಜ್ ಸ್ವಾಗತಿಸಿ, ಉಪನ್ಯಾಸಕ ಹರಿಪ್ರಸಾದ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ನಾಡಿನಲ್ಲಿ ಮಹಾ ಸಮರಕ್ಕೆ ಅಖಾಡ ಸಿದ್ಧ
ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಅಗತ್ಯ: ಪಲ್ಲವಿ