ಕುಂದಾಪುರದ ಮೂಡ್ಲಕಟ್ಟೆಯ ಐಎಂಜೆ ಇನ್‌ಸ್ಟಿಟ್ಯೂಟ್ ನಲ್ಲಿ ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲ್ಯ, ಸೃಜನಶೀಲತೆ ಹಾಗೂ ಮಾಧ್ಯಮ ಸಂಬಂಧಿತ ಜ್ಞಾನವನ್ನು ಅಭಿವೃದ್ಧಿ ಪಡಿಸುವ ಹಾಗೂ ಹೊಸ ಕೌಶಲ್ಯ ಬೆಳೆಸುವ ಉದ್ದೇಶದಿಂದ ಪ್ರೇಮ್ ಎಕ್ಸ್ ಹೆಸರಿನ ಮೀಡಿಯಾ ಕ್ಲಬ್ ಆರಂಭಿಸಲಾಗಿದೆ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ಇನ್‌ಸ್ಟಿಟ್ಯೂಟ್ ನಲ್ಲಿ ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲ್ಯ, ಸೃಜನಶೀಲತೆ ಹಾಗೂ ಮಾಧ್ಯಮ ಸಂಬಂಧಿತ ಜ್ಞಾನವನ್ನು ಅಭಿವೃದ್ಧಿ ಪಡಿಸುವ ಹಾಗೂ ಹೊಸ ಕೌಶಲ್ಯ ಬೆಳೆಸುವ ಉದ್ದೇಶದಿಂದ ಪ್ರೇಮ್ ಎಕ್ಸ್ ಹೆಸರಿನ ಮೀಡಿಯಾ ಕ್ಲಬ್ ಆರಂಭಿಸಲಾಗಿದೆ. ಈ ಕ್ಲಬ್ಬನ್ನು ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ ಅವರು ಬ್ಯಾನರ್ ಅನಾವರಣಗೊಳಿಸಿ ಉದ್ಘಾಟಿಸಿದರು, ನಂತರ ಮಾತನಾಡಿದ ಅವರು ಇಂದು ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ಸಂಕಷ್ಟ ಹಾಗೂ ವೃತ್ತಿ ಜೀವನದಲ್ಲಿ ಎದುರಿಸುವ ಸವಾಲುಗಳನ್ನು ಹಂಚಿಕೊಂಡರು. ಈ ಕಾಲೇಜು ಆರಂಭವಾದ ದಿನದಿಂದ ತಮಗೆ ಇರುವ ಒಡನಾಟವನ್ನು ನೆನಪಿಸಿಕೊಂಡು, ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಈ ಮೀಡಿಯಾ ಕ್ಲಬ್ ಉತ್ತಮ ವೇದಿಕೆಯಾಗಲಿ ಎಂದು ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗಡೆ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಈ ಸಂಘದ ಉದ್ದೇಶ, ಅದನ್ನು ವಿದ್ಯಾರ್ಥಿಗಳು ಹೇಗೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ಐಎಂಜೆ ಇನ್‌ಸ್ಟಿಟ್ಯೂಟ್ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಇಂತಹ ಸಂಘದ ಮಹತ್ವ ಹಾಗೂ ಅದರಿಂದಾಗುವ ಬೆಳವಣಿಗೆಗಳನ್ನು ವಿದ್ಯಾರ್ಥಿಗಳಿಗೆ ಪ್ರಸ್ತುತಪಡಿಸಿದರು. ನಂತರ ಈ ಕ್ಲಬ್ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ನಂದನ್ ಶೆಟ್ಟಿ ಈ ಕ್ಲಬ್ ನ ಅಧ್ಯಕ್ಷರಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಕರುಣಾ ಆರ್ ಗೌಡ ಮತ್ತು ಇಶ್ರತ್ ನಡೆಸಿಕೊಟ್ಟರು. ಕಾರ್ಯಕ್ರಮದ ಸಂಯೋಜಕಿ ಪ್ರೊ. ಸೂಕ್ಷ್ಮ ಎಸ್. ಅಡಿಗ ಸ್ವಾಗತಿಸಿ, ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.