ಮಹಿಳಾಪರ ಹೋರಾಟಗಾರ್ತಿ ಅನ್ನಪೂರ್ಣ ಮೇಲೆ ವಂಚನೆ ಆರೋಪ

KannadaprabhaNewsNetwork |  
Published : Oct 16, 2026, 01:45 AM IST
15ಎಚ್ಎಸ್ಎನ್17 :  | Kannada Prabha

ಸಾರಾಂಶ

ತಮ್ಮ ವಿರುದ್ಧದ ಆರೋಪಗಳನ್ನು ಪ್ರಶ್ನಿಸಿದರೆ ಸುಳ್ಳು ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಈವರೆಗೆ ಅವರು ಯಾವ ಮಹಿಳೆಯರಿಗೂ ನ್ಯಾಯ ಕೊಡಿಸಿಲ್ಲ. ಅವರು ಹೇಳುತ್ತಿರುವ ಮಾತುಗಳೆಲ್ಲ ಸುಳ್ಳು ಎಂದು ಆರೋಪಿಸಿದರು. ಇತ್ತೀಚೆಗೆ ದಲಿತ ಮಹಿಳೆ ಕುಸುಮ ಅವರ ಮೇಲೆ ಅನ್ನಪೂರ್ಣೇಶ್ವರಿ ಗೌಡ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ನೀಡಿದ್ದಾರೆ. ಈ ಸಂಬಂಧ ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದರೂ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಹಾಗೂ ಎಫ್‌ಐಆರ್‌ ದಾಖಲಿಸುತ್ತಿಲ್ಲ ಎಂದು ಕುಸುಮ ಅಳಲು ತೋಡಿಕೊಂಡರು.

ಕನ್ನಡಪ್ರಭ ವಾರ್ತೆ ಹಾಸನಮಹಿಳಾಪರ ಹೋರಾಟಗಾರ್ತಿ ಎಂದು ಹೇಳಿಕೊಂಡು ದಲಿತರು ಹಾಗೂ ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸುವುದಾಗಿ, ಮಕ್ಕಳಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಹಲವರಿಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಅನ್ನಪೂರ್ಣೇಶ್ವರಿ ಗೌಡ ವಿರುದ್ಧ ಮಹಿಳೆಯರಾದ ರತ್ನಮ್ಮ ಹಾಗೂ ನೊಂದ ಸಂತ್ರಸ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ತಮ್ಮ ವಿರುದ್ಧದ ಆರೋಪಗಳನ್ನು ಪ್ರಶ್ನಿಸಿದರೆ ಸುಳ್ಳು ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಈವರೆಗೆ ಅವರು ಯಾವ ಮಹಿಳೆಯರಿಗೂ ನ್ಯಾಯ ಕೊಡಿಸಿಲ್ಲ. ಅವರು ಹೇಳುತ್ತಿರುವ ಮಾತುಗಳೆಲ್ಲ ಸುಳ್ಳು ಎಂದು ಆರೋಪಿಸಿದರು. ಇತ್ತೀಚೆಗೆ ದಲಿತ ಮಹಿಳೆ ಕುಸುಮ ಅವರ ಮೇಲೆ ಅನ್ನಪೂರ್ಣೇಶ್ವರಿ ಗೌಡ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ನೀಡಿದ್ದಾರೆ. ಈ ಸಂಬಂಧ ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದರೂ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಹಾಗೂ ಎಫ್‌ಐಆರ್‌ ದಾಖಲಿಸುತ್ತಿಲ್ಲ ಎಂದು ಕುಸುಮ ಅಳಲು ತೋಡಿಕೊಂಡರು. ಅನ್ನಪೂರ್ಣೇಶ್ವರಿ ಗೌಡ ಅವರು ಮಹಿಳೆಯೊಂದಿಗೆ ವಾಗ್ವಾದ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸುವುದರ ಜತೆಗೆ ಚಪ್ಪಲಿ ಹಾಗೂ ಇತರ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ಸಂದರ್ಭದಲ್ಲಿಯೂ ದುರ್ವರ್ತನೆ ತೋರಿದ್ದಾರೆ ಎಂದು ದೂರಿದರು. ಹಲ್ಲೆಯಿಂದ ಗಾಯಗೊಂಡ ಕುಸುಮ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ವೈದ್ಯಕೀಯ-ಕಾನೂನು ವರದಿ (ಎಂಎಲ್‌ಸಿ) ಸಿದ್ಧಪಡಿಸಲಾಗಿದೆ. ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಈವರೆಗೆ ಎಫ್‌ಐಆರ್‌ ದಾಖಲಿಸಿಲ್ಲ ಎಂದು ಆರೋಪಿಸಿದರು. ಉದ್ಯೋಗ ಕೊಡಿಸುವುದಾಗಿ 2.80 ಲಕ್ಷ ಪಡೆದ ಆರೋಪಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಹಾಗೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯರು ಆರೋಪಿಸಿದರು. ಈ ಸಂಬಂಧ ತಮ್ಮ ಬಳಿ ಆಡಿಯೊ ಮತ್ತು ವಿಡಿಯೊ ಸೇರಿದಂತೆ ಕೆಲವು ಸಾಕ್ಷ್ಯಾಧಾರಗಳಿದ್ದು, ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.ಯಶೋಧಮ್ಮ ಎಂಬ ಮಹಿಳೆಯ ಮಗನಿಗೆ ಹಾಸನ ಮಹಾನಗರ ಪಾಲಿಕೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 2.80 ಲಕ್ಷ ಪಡೆದಿದ್ದಾರೆ ಎಂಬ ಆರೋಪವನ್ನೂ ಮಾಡಿದರು. ಈ ಎಲ್ಲ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತಮ್ಮ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕುಸುಮಾ, ಯಶೋಧ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್ ಆಪರೇಷನ್ ಸಿಎಂ ಮಾಡಿಸಿದ್ದಾರೆ ಎಂಬ ಎಚ್ಡಿಕೆ ಹೇಳಿಕೆಯಲ್ಲಿ ಆಧಾರವಿಲ್ಲ: ಕೆ.ಎಂ.ಉದಯ್
ಅಭಿವೃದ್ಧಿಯಲ್ಲಿ ನಿರೀಕ್ಷಿತ ಪ್ರಗತಿ ಕಾಣದ ದೊಡ್ಡಅರಸಿನಕೆರೆ ಗ್ರಾಮ: ಶಾಸಕ ಉದಯ್