ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರ ಹೊರವಲಯದ ಜಿಲ್ಲಾಡಳಿತ ಭವನದ ಜಿಪಂನ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ”ಯನ್ನು ಉಧ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕ ಹಕ್ಕುಗಳು ಮತ್ತು ಕಾನೂನು ನಿಯಮಾವಳಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ದೇಶದಲ್ಲಿ ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ ಆಚರಿಸಲಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ 1986ರಲ್ಲಿ ಗ್ರಾಹಕ ಸಂರಕ್ಷಣಾ ಕಾಯಿದೆಯನ್ನು ಜಾರಿಗೆ ತರಲಾಯಿತು. ಈ ಮೂಲಕ ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ. ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಮಾರುಕಟ್ಟೆ ಅಥವಾ ಖರೀದಿ ಸ್ಥಳದಲ್ಲಿ ಉಂಟಾಗುವ ಅನ್ಯಾಯಗಳ ಹೋರಾಟ ನಡೆಸಬಹುದು ಎಂದು ಹೇಳಿದರು.ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಆರ್.ಶ್ರೀನಿವಾಸ್ ಮಾತನಾಡಿ, ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ಈ ದಿನದಂದು ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ಶಿಕ್ಷಣ ಮತ್ತು ಗರಿಷ್ಠ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುವ ಗುರಿ ಹೊಂದಿದೆ. ವ್ಯಾಪಾರ ಪದ್ಧತಿಗಳಲ್ಲಿನ ಅನ್ಯಾಯದ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಇದು ಗ್ರಾಹಕರಿಗೆ ಶಿಕ್ಷಣ ನೀಡುತ್ತದೆ. ಗ್ರಾಹಕರಿಗೆ ಯಾವುದೇ ಅನ್ಯಾಯವಾದಲ್ಲಿ ನೀವು ಗ್ರಾಹಕರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು. ಈ ಮೂಲಕ ನಿಮಗಾದ ಅನ್ಯಾಯಕ್ಕೆ ನ್ಯಾಯ ಹಾಗೂ ಪರಿಹಾರ ಕೇಳಬಹುದು ಎಂದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸೈಯದ್ ಅನ್ಸರ್ ಕಲೀಂ, ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ. ಪೊಲೀಸ್ ಉಪಾಧೀಕ್ಷಕ ಎಸ್.ಶಿವಕುಮಾರ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಎಚ್.ಜನಾರ್ಧನ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಸವಿತ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಕುಮಾರ್, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ರವೀಶ್ ಚಂದ್ರ, ಕೆಎಫ್ ಸಿಎಸ್ ಸಿ ಜಿಲ್ಲಾ ವ್ಯವಸ್ಥಾಪಕ ವಿಜಯ್ ಕುಮಾರ್, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಕಾರ್ಯದರ್ಶಿ ಅಶ್ವತ್ಥ ನಾರಾಯಣಶೆಟ್ಟಿ, ಪ್ಯಾನಲ್ ವಕೀಲರಾದ ಮಂಜುನಾಥರೆಡ್ಡಿ,ಸೃಜನ್ ಗಾಂಧಿ, ಪ್ರೌಢಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಮತ್ತಿತರರಿದ್ದರು.
ಸಾರ್ವಜನಿಕರು ಗ್ರಾಹಕ ಹಕ್ಕುಗಳನ್ನು ತಿಳಿಸಿಕೊಳ್ಳಿ
---------