ಗ್ರಾಮೀಣ ವಿದ್ಯಾರ್ಥಿಗಳಿಗೆ ಮಡಿಯಾಲದಲ್ಲಿ ಉಚಿತ ಎಐ ಪದವಿ ಶಿಕ್ಷಣ ಕೇಂದ್ರ

KannadaprabhaNewsNetwork |  
Published : Nov 29, 2026, 03:00 AM IST
ಫೋಟೋ : ೨೮ಕೆಎಂಟಿ_ಎನ್‌ಒವಿ_ಕೆಪಿ೧ : ಧಾರೇಶ್ವರದಲ್ಲಿ ವಿಶ್ವ ಹಿಂದು ಪರಿಷತ್ ಕುಮಟಾ ಪ್ರಖಂಡದ ಹಿತಚಿಂತಕ ಅಭಿಯಾನದಲ್ಲಿ ನಿವೃತ್ತ ಪ್ರೊ ಶಂಕರ ಭಟ್ ಮಾತನಾಡಿದರು. ವಿ.ಕೆ.ಭಟ್, ರಾಮಚಂದ್ರ ಅಡಿ, ಸಂತೋಷ ನಾಯ್ಕ ಇತರರು ಇದ್ದರು. | Kannada Prabha

ಸಾರಾಂಶ

ಕೃತಕ ಬುದ್ಧಿಮತ್ತೆ (ಎಐ), ಮೆಷಿನ್ ಲರ್ನಿಂಗ್‌ನಂತಹ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳ ಉನ್ನತ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಿಗೂ ಉಚಿತವಾಗಿ ಒದಗಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಡಿಯಾಲದಲ್ಲಿ ಉನ್ನತ ಶಿಕ್ಷಣ ಕೇಂದ್ರ ಸ್ಥಾಪನೆಯಾಗುತ್ತಿದೆ. ಶ್ರೀ ಮಡಿಯಾಲ ನಾರಾಯಣ ಭಟ್ ಅವರ ಜನ್ಮಶತಾಬ್ದಿ ಸ್ಮರಣಾರ್ಥ ಸ್ಥಾಪನೆಯಾಗುತ್ತಿರುವ ಈ ಕೇಂದ್ರಕ್ಕೆ ನವೆಂಬರ್ 30ರಂದು ಭೂಮಿಪೂಜೆ ನೆರವೇರಲಿದೆ.

ಬಂಟ್ವಾಳ : ಕೃತಕ ಬುದ್ಧಿಮತ್ತೆ (ಎಐ), ಮೆಷಿನ್ ಲರ್ನಿಂಗ್‌ನಂತಹ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳ ಉನ್ನತ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಿಗೂ ಉಚಿತವಾಗಿ ಒದಗಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಡಿಯಾಲದಲ್ಲಿ ಉನ್ನತ ಶಿಕ್ಷಣ ಕೇಂದ್ರ ಸ್ಥಾಪನೆಯಾಗುತ್ತಿದೆ. ಶ್ರೀ ಮಡಿಯಾಲ ನಾರಾಯಣ ಭಟ್ ಅವರ ಜನ್ಮಶತಾಬ್ದಿ ಸ್ಮರಣಾರ್ಥ ಸ್ಥಾಪನೆಯಾಗುತ್ತಿರುವ ಈ ಕೇಂದ್ರಕ್ಕೆ ನವೆಂಬರ್ 30ರಂದು ಭೂಮಿಪೂಜೆ ನೆರವೇರಲಿದೆ.

ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಆಶ್ರಯದಲ್ಲಿ, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾಗಿ ಶ್ರೀ ಮಡಿಯಾಲ ನಾರಾಯಣ ಭಟ್ ಉನ್ನತ ಶಿಕ್ಷಣ ಕೇಂದ್ರ ಆರಂಭವಾಗಲಿದೆ. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಶಿಕ್ಷಣದ ಅವಕಾಶ ಕಲ್ಪಿಸುವುದು, ಆರ್ಥಿಕ ಪರಿಸ್ಥಿತಿ ಅಥವಾ ಭೌಗೋಳಿಕ ಅಂತರ ಅವರ ಉನ್ನತ ಶಿಕ್ಷಣಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಕೇಂದ್ರದ ಉದ್ದೇಶವಾಗಿದೆ.ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.ಆರಂಭಿಕ ಹಂತದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್ ಲರ್ನಿಂಗ್‌ಗೆ ವಿಶೇಷ ಒತ್ತು ನೀಡುವ ಬಿ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಪದವಿ ಕಾರ್ಯಕ್ರಮ ಆರಂಭಿಸಲು ಉದ್ದೇಶಿಸಲಾಗಿದೆ. 2027–28ನೇ ಶೈಕ್ಷಣಿಕ ವರ್ಷದಿಂದ ಪ್ರವೇಶ ಪ್ರಕ್ರಿಯೆ ಆರಂಭಿಸುವ ಯೋಜನೆಯಿದ್ದು, ಮೊದಲ ಹಂತದಲ್ಲಿ 30 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರವೇಶ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ. ಬಾಲಕ ಮತ್ತು ಬಾಲಕಿಯರಿಬ್ಬರಿಗೂ ಪ್ರವೇಶವಿದ್ದು, ಸಹಶಿಕ್ಷಣ ವ್ಯವಸ್ಥೆ ಇರಲಿದೆ.

ಪಠ್ಯಕ್ರಮವು ಸೈದ್ಧಾಂತಿಕ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ ಪ್ರಾಯೋಗಿಕ ಕಲಿಕೆ, ಯೋಜನಾ ಆಧಾರಿತ ತರಬೇತಿ, ಸಂಶೋಧನೆ ಮತ್ತು ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಕೌಶಲಾಭಿವೃದ್ಧಿಗೆ ಆದ್ಯತೆ ನೀಡಲಿದೆ. ಎಐ ಮತ್ತು ಮೆಷಿನ್ ಲರ್ನಿಂಗ್ ಕ್ಷೇತ್ರಗಳಲ್ಲಿ ಅನುಭವಾಧಾರಿತ ಶಿಕ್ಷಣ ಒದಗಿಸಿ ವಿದ್ಯಾರ್ಥಿಗಳನ್ನು ಉದ್ಯೋಗ ಹಾಗೂ ಸಂಶೋಧನೆಗೆ ಸಜ್ಜುಗೊಳಿಸುವ ಉದ್ದೇಶವಿದೆ.

ಕ್ಯಾಂಪಸ್‌ನಲ್ಲಿ ಆಧುನಿಕ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಆಡಳಿತ ವಿಭಾಗ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಮೊದಲ ಹಂತದ ಕಾಮಗಾರಿಗಳು 2027ರ ಮೇ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಮುಂದಿನ ಹಂತದಲ್ಲಿ ವಿದ್ಯಾರ್ಥಿಗಳ ವಸತಿ ಸೌಲಭ್ಯ ಕಲ್ಪಿಸುವುದರ ಜತೆಗೆ ಹೆಚ್ಚಿನ ಶೈಕ್ಷಣಿಕ ಕಾರ್ಯಕ್ರಮಗಳು, ಉದ್ಯಮ ಸಹಯೋಗ, ಸಂಶೋಧನೆ ಮತ್ತು ನಾವೀನ್ಯತೆ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿಯೇ ಆಧುನಿಕ ತಂತ್ರಜ್ಞಾನ ಶಿಕ್ಷಣ ಮತ್ತು ಸಂಶೋಧನೆಗೆ ಅವಕಾಶ ಕಲ್ಪಿಸುವ ಈ ಕೇಂದ್ರವು ಮಡಿಯಾಲವನ್ನು ಉನ್ನತ ಶಿಕ್ಷಣದ ಹೊಸ ಕೇಂದ್ರವಾಗಿ ರೂಪಿಸುವ ಪ್ರಯತ್ನವಾಗಿದೆ. ನಾರಾಯಣ ಭಟ್ ಅವರ ಶೈಕ್ಷಣಿಕ ಪರಂಪರೆಯನ್ನು ಮುಂದುವರಿಸುವುದು ಉದ್ದೇಶ ಎಂದು ಯೋಜನಾ ನಿರ್ದೇಶಕ ಮಡಿಯಾಲ ಶಂಕರ ನಾರಾಯಣ ಭಟ್ ತಿಳಿಸಿದ್ದಾರೆ. "ಉನ್ನತ ತಂತ್ರಜ್ಞಾನ ಶಿಕ್ಷಣವು ನಗರಗಳಲ್ಲಿರುವ ಅಥವಾ ಆರ್ಥಿಕವಾಗಿ ಅನುಕೂಲವಿರುವ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಬಾರದು. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಎಐ ಮತ್ತು ಮೆಷಿನ್ ಲರ್ನಿಂಗ್‌ನಂತಹ ಭವಿಷ್ಯದ ಕ್ಷೇತ್ರಗಳಲ್ಲಿ ಕಲಿಕೆ, ಸಂಶೋಧನೆ ಮತ್ತು ನಾವೀನ್ಯತೆಗೆ ಅವಕಾಶ ಸಿಗಬೇಕು. ಆರ್ಥಿಕ ಹಿನ್ನೆಲೆ ಯಾವುದಾದರೂ ಇರಲಿ, ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಮೂಲಕ ಇಂತಹ ಅವಕಾಶ ಕಲ್ಪಿಸುವುದು ನಮ್ಮ ಆಶಯ. "

— ಸದ್ಗುರು ಶ್ರೀ ಮಧುಸೂದನ ಸಾಯಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಕ್ಕರೆ ಕನಿಷ್ಠ ಮಾರಾಟ ಬೆಲೆ ಕೆ.ಜಿ.ಗೆ ₹60ಕ್ಕೆ ಹೆಚ್ಚಿಸಿ
ಸೈನಿಕ ಶಾಲೆ ಪ್ರವೇಶಾತಿಗೆ ಜ.31ರಂದು ಪರೀಕ್ಷೆ