ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ಯಶಸ್ವಿ

KannadaprabhaNewsNetwork |  
Published : Jul 27, 2026, 02:30 AM IST
ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. | Kannada Prabha

ಸಾರಾಂಶ

ಇಲ್ಲಿಯ ಸುಮುಖ ಆಯುರ್ವೇದ ಆಸ್ಪತ್ರೆ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು.

ಹಾವೇರಿ: ಇಲ್ಲಿಯ ಸುಮುಖ ಆಯುರ್ವೇದ ಆಸ್ಪತ್ರೆ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು.

ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ನಡೆದ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತು. ತಪಾಸಣೆಯ ವೇಳೆ ಮೂಳೆ ಸಾಂದ್ರತೆ ಕಡಿಮೆಯಾಗುವಿಕೆಯನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚುವುದರಿಂದ ಆಸ್ಟಿಯೋಪೋರೋಸಿಸ್, ಮೂಳೆ ಮುರಿತ, ಬೆನ್ನುನೋವು ಸೇರಿದಂತೆ ಹಲವು ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯ. ಕ್ಯಾಲ್ಸಿಯಂಯುಕ್ತ ಆಹಾರ ಸೇವನೆ, ನಿಯಮಿತ ವ್ಯಾಯಾಮ ಹಾಗೂ ಸೂಕ್ತ ಪ್ರಮಾಣದ ಸೂರ್ಯನ ಬೆಳಕು ಪಡೆಯುವುದರ ಜೊತೆಗೆ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಸುಮುಖ ಆಯುರ್ವೇದ ಆಸ್ಪತ್ರೆಯ ನಿರ್ದೇಶಕ ಡಾ. ಗುಹೇಶ್ವರ ಪಾಟೀಲ ಸಲಹೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಕುರವತ್ತೇರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಇಂತಹ ಶಿಬಿರಗಳು ಅಗತ್ಯವಾಗಿದ್ದು, ಸುಮುಖ ಆಯುರ್ವೇದ ಆಸ್ಪತ್ರೆಯ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಡಾ.ಪ್ರಕಾಶ ಬಾರ್ಕಿ ಹಾಗೂ ಡಾ.ಅಶ್ವಿನಿ ವಸ್ತçದ್ ಅವರು ತಪಾಸಣೆ ಮಾಡಿಸಿಕೊಂಡ ಜನರ ವರದಿಗಳನ್ನು ಪರಿಶೀಲಿಸಿ, ಮೂಳೆಗಳ ಆರೋಗ್ಯ ಕಾಪಾಡಿಕೊಳ್ಳುವ ವಿಧಾನಗಳು, ಅಗತ್ಯ ಜೀವನಶೈಲಿ ಬದಲಾವಣೆಗಳು ಹಾಗೂ ಆಯುರ್ವೇದ ಚಿಕಿತ್ಸೆಯ ಕುರಿತು ವೈಯಕ್ತಿಕ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಶ ಮಡ್ಲೂರ, ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ವಿನಾಯಕ ಹುದ್ದಾರ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರ ಮೇಲಿದೆ ಸಮಾಜದ ಭವಿಷ್ಯ ರೂಪಿಸುವ ಹೊಣೆ: ಡಿ.ಕೆ. ಹೊನ್ನಪ್ಪನವರ
ನರಗುಂದ ತಾಲೂಕಿನಲ್ಲಿ ಬೆಳೆ ಉಳಿಸಲು ಟ್ಯಾಂಕರ್‌ ನೀರಿನ ಮೊರೆ