ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿಗಳ ಸಲ್ಲಿಸಲು ಸೂಚನೆ

KannadaprabhaNewsNetwork |  
Published : Jun 05, 2026, 01:45 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿ ಅನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿ ಅನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ "ಸೇವಾಸಿಂಧು " ಪೋರ್ಟಲ್: ** https://sevasindhu.karnataka.gov.in **ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರು, ಸ್ಥಾನಿಕ ಸಂಪಾದಕರು/ ಮುಖ್ಯಸ್ಥರ ಶಿಫಾರಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಪೂರಕವಾಗಿ ಅನುಕೂಲವಾಗುವಂತೆ ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ.

ರಾಜ್ಯದ ಎಲ್ಲ ತಾಲೂಕುಗಳ ಅರ್ಹ ಪತ್ರಕರ್ತರು ಕೂಡಲೇ "ಸೇವಾಸಿಂಧು " ಪೋರ್ಟಲ್ ಮೂಲಕ 2026 ರ ಜೂನ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಪಿಎಸ್‌ ಮ್ಯಾಗ್ನೆಟ್‌ ಯೋಜನೆಯಡಿ ಶಾಲೆಗಳ ಬಂದ್‌ ಸಲ್ಲದು: ಪೂಜಾ ನಂದಿಹಳ್ಳಿ
...ಆರ್ಟ್ ಆಫ್ ಲಿವಿಂಗ್‌ ಆಶ್ರಯದಲ್ಲಿಇಂದಿನಿಂದ ಹ್ಯಾಪಿನೆಸ್ ಪ್ರೋಗ್ರಾಂ