ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ

KannadaprabhaNewsNetwork |  
Published : Feb 26, 2025, 01:02 AM IST
ತರಬೇತಿ | Kannada Prabha

ಸಾರಾಂಶ

ಪ್ರತಿ ವರ್ಷವೂ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ 40ರಿಂದ 50 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸದ ಭದ್ರತೆಯೊಂದಿಗೆ ಉತ್ತಮ ಸಂಬಳ ನೀಡಲಾಗುತ್ತದೆ.

ಮಡಿಕೇರಿ: ಪ್ರತೀ ವರ್ಷವೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ 40 ರಿಂದ 50 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸದ ಭದ್ರತೆಯೊಂದಿಗೆ ಉತ್ತಮ ಸಂಬಳ ನೀಡಲಾಗುತ್ತದೆ. ಯಾವುದೇ ಪದವಿ ಮುಗಿಸಿರುವ ವಿದ್ಯಾರ್ಥಿಗಳು ಈ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಪರೀಕ್ಷೆ ಮೂಲಕ ಪಾರದರ್ಶಕವಾಗಿ ನಡೆಯುವ ಈ ನೇಮಕಾತಿ ಪರೀಕ್ಷೆಗಳ ಬಗ್ಗೆ ಹೆಚ್ಚಿನ ವಿದ್ಯಾರ್ಥಿಗಳಿಗೆ ಮಾಹಿತಿ ಇರುವುದಿಲ್ಲ ಹಾಗೂ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ಪಠ್ಯಕ್ರಮ, ಪರೀಕ್ಷಾ ಪ್ರಕ್ರಿಯೆ, ಇದಕ್ಕೆ ಅಗತ್ಯವಿರುವ ತಯಾರಿ ಬಗ್ಗೆ ಮಾಹಿತಿ ಇರುವುದಿಲ್ಲ.

ಕರ್ನಾಟಕದೆಲ್ಲೆಡೆ ಬ್ಯಾಂಕ್‌ಗಳಲ್ಲಿ ವ್ಯವಹರಿಸುವಾಗ ಭಾಷೆಯ ಅಡಚಣೆಯಾಗಿ ಗ್ರಾಹಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಗ್ರಾಹಕರ ಸಭೆಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ವಿಷಯಗಳನ್ನು ಮನದಲ್ಲಿಟ್ಟುಕೊಂಡು ಕರ್ನಾಟಕದ ಯುವ ಜನತೆ ಬ್ಯಾಂಕ್ ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾಗಬೇಕೆಂಬ ಉದ್ದೇಶದಿಂದ ಕೃಷಿಕ್ ಸರ್ವೋದಯ ಫೌಂಡೇಶನ್ ಕೇಂದ್ರ ಕಚೇರಿ, ಬೆಂಗಳೂರಿನಲ್ಲಿ ನಡೆದ ಟ್ರಸ್ಟಿಗಳ ಸಭೆಯಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಲ್ಲಿ ಭಾಗವಹಿಸಿ ಅಧಿಕಾರಿಗಳಾಗಬೇಕೆಂಬ ಆಶಯದಿಂದ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ ಹಾಸನ ಶಾಖೆಯಲ್ಲಿ ನುರಿತ ವಿಷಯ ತಜ್ಞರಿಂದ ಐ.ಬಿ.ಪಿ.ಎಸ್, ಎಸ್.ಬಿ.ಐ, ಆರ್.ಬಿ.ಐ, ಖಾಸಗಿ ಬ್ಯಾಂಕ್, ಇನ್ಸುರೆನ್ಸ್ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ.

ಹೆಚ್ಚಿನ ಮಾಹಿತಿಗೆ 8660217739 ಕ್ಕೆ ಕರೆ ಅಥವಾ ವಾಟ್ಸಾಪ್ ಮಾಡಬಹುದು ಎಂದು ಶಾಖೆಯ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಅಪಘಾತ ಸೈಕಲ್‌ ಸವಾರ ಸಾವು
ವಿದ್ಯುತ್‌ ತೊಂದರೆ ಸರಿಪಡಿಸದಿದ್ದರೇ ಅಹೋರಾತ್ರಿ ಧರಣಿ