ಯೋಗೇಶ್ವರ್, ಜಯಮುತ್ತುರಿಂದ ಉಚಿತ ಗಣೇಶನ ಮೂರ್ತಿಗಳ ವಿತರಣೆ

KannadaprabhaNewsNetwork |  
Published : Sep 14, 2026, 02:00 AM IST
ಪೊಟೋ೧೩ಸಿಪಿಟಿ೧: ತಾಲೂಕಿನ ದೊಡ್ಡಮಳೂರು ಗ್ರಾಮದ ಸಾಯಿಮಂದಿರದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಸಿ.ಜಯಮುತ್ತು ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು. | Kannada Prabha

ಸಾರಾಂಶ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಸಿ.ಜಯಮುತ್ತು, ಕಳೆದ ಹದಿನೇಳು ವರ್ಷದಿಂದ ತಾಲೂಕಿನಲ್ಲಿ ಉಚಿತ ಗಣೇಶನ ಮೂರ್ತಿಗಳನ್ನು ವಿತರಿಸಿಕೊಂಡು ಬರಲಾಗುತ್ತಿದೆ. ಜನ ಸಂಭ್ರಮದಿಂದ ಹಬ್ಬ ಮಾಡಲಿ ಎಂದು ಗಣೇಶನ ಮೂರ್ತಿಗಳನ್ನು ವಿತರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷ ಸುಮಾರು ಐನೂರರಿಂದ ಆರುನೂರು ಗಣೇಶ ಮೂರ್ತಿಗಳನ್ನು ವಿತರಿಸಲಾಗುತ್ತಿದೆ. ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ತಿಳಿಸಿದರು.

ಕನ್ನಡಪ್ರಭವಾರ್ತೆ ಚನ್ನಪಟ್ಟಣ

ಗಣೇಶ ಚತುರ್ಥಿ ಪ್ರಯುಕ್ತ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಸಿ.ಜಯಮುತ್ತು ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು.

ನಗರದ ಶಾಸಕರ ಗೃಹ ಕಚೇರಿ, ಅಂಬೇಡ್ಕರ್ ಭವನ, ಶತಮಾನೋತ್ಸವ ಭವನ ಹಾಗೂ ಹೊಂಗನೂರಿನಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಪರ ಅವರ ಬೆಂಬಲಿಗರು ಹಾಗೂ ತಾಲೂಕಿನ ದೊಡ್ಡಮಳೂರು ಗ್ರಾಮದ ಶ್ರೀ ಸಾಯಿ ಮಂದಿರದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಸಿ.ಜಯಮುತ್ತು ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಸಿ.ಜಯಮುತ್ತು, ಕಳೆದ ಹದಿನೇಳು ವರ್ಷದಿಂದ ತಾಲೂಕಿನಲ್ಲಿ ಉಚಿತ ಗಣೇಶನ ಮೂರ್ತಿಗಳನ್ನು ವಿತರಿಸಿಕೊಂಡು ಬರಲಾಗುತ್ತಿದೆ. ಜನ ಸಂಭ್ರಮದಿಂದ ಹಬ್ಬ ಮಾಡಲಿ ಎಂದು ಗಣೇಶನ ಮೂರ್ತಿಗಳನ್ನು ವಿತರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷ ಸುಮಾರು ಐನೂರರಿಂದ ಆರುನೂರು ಗಣೇಶ ಮೂರ್ತಿಗಳನ್ನು ವಿತರಿಸಲಾಗುತ್ತಿದೆ. ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ತಿಳಿಸಿದರು.

ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಮುಖಂಡರಾದ ಬೋರ್‌ವೆಲ್ ರಾಮಚಂದ್ರು, ಬೋರೇಗೌಡ, ರೇಖಾ ಉಮಾಶಂಕರ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರದಲ್ಲಿ ಹಿಂದೂ ಮಹಾಗಣಪತಿ ಉತ್ಸವಕ್ಕೆ ಕ್ಷಣಗಣನೆ
ನಗರಂಗೆರೆಯಲ್ಲಿ ಪರಿಸರ ಜಾಗೃತಿ: ಪ್ಲಾಸ್ಟಿಕ್ ತ್ಯಜಿಸಲು ಮನವಿ