ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಆದಿ ದ್ರಾವಿಡ ಸಮಾಜ ಸೇವಾ ಸಂಘ ಮೂಡುಬಿದಿರೆ, ಸಮಗಾರ ಸಮಾಜ, ಮರಾಠಿ ಸಮಾಜ ಸೇವಾ ಸಂಘ ಮೂಡುಬಿದಿರೆ, ಪಾಣಾರ ಅಜಿಲ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಮೂಡುಬಿದಿರೆ ತಾಲೂಕು, ದಕ್ಷಿಣ ಕನ್ನಡ ಜಿಲ್ಲಾ ಪರವನ್ ಸಮಾಜ ಸುಧಾರಕರ ಸಂಘ ಹಂಡೆಲು, ಪುತ್ತಿಗೆ ಮೂಡುಬಿದಿರೆ, ಮುಗೇರ ಸಮುದಾಯ ಮತ್ತು ಕೊರಗ ಸಮುದಾಯ ಇವರ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಗಾರ ಸಮಾಜ ಸಂಘದ ಗೌರವಾಧ್ಯಕ್ಷ ಹರೀಶ್ ಎಂ.ಕೆ., ಪರವ ಸಮುದಾಯದ ಅಧ್ಯಕ್ಷ ನಾರಾಯಣ ಮಾಂಟ್ರಾಡಿ, ದಲಿತ ಸಮುದಾಯದ ದ.ಕ. ಜಿಲ್ಲಾ ಗೌರವಾಧ್ಯಕ್ಷ ಅಚ್ಯುತ ಸಂಪಿಗೆ, ಆದಿದ್ರಾವಿಡ ಸಮುದಾಯದ ಎಂ. ಶೀನ. ಮರಾಠಿ ಸಮುದಾಯದ ಗೌರವಾಧ್ಯಕ್ಷ ರಾಮಚಂದ್ರ ಕೆಂಬಾರೆ, ಪಾಣರ ಅಜಿಲ ಯಾನೆ ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಎನ್ .ಕೆ.ಸಾಲಿಯಾನ್, ಪ್ರಸಾದ್ ನೇತ್ರಾಲಯದ ಡಾ.ಅಶ್ವಿನ್, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಸಜಿತ್ ಎಂ., ಪತ್ರಕರ್ತ ಬೆಳವಾಯಿ ಸೀತರಾಮ್ ಆಚಾರ್ಯ, ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ್ ಭಟ್ ಉಪಸ್ಥಿತರಿದ್ದರು.ಮರಾಠಿ ಸಮುದಾಯದ ಪ್ರಕಾಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ನಮೃತಾ ಕುಲಾಲ್ ನಿರೂಪಿಸಿದರು. ರವೀಶ್ ಎನ್. ಕೆ. ವಂದಿಸಿದರು.