ಕನ್ನಡಪ್ರಭ ವಾರ್ತೆ ಭದ್ರಾವತಿ
ತಾಲೂಕಿನ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತಮಿಳು ಯೂತ್ಸ್ ಅಸೋಸಿಯೇಷನ್ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ತಮಿಳು ಯುವಕರು ಒಗ್ಗೂಡಿಕೊಂಡು ೫೦೦ ದಿನಗಳ ಕಾಲ ನಿರಂತರವಾಗಿ ಸೇವೆ ಮುನ್ನಡೆಸಿಕೊಂಡು ಬಂದಿರುವುದು ಶ್ಲಾಘನೀಯ ಎಂದರು.
ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೂ ಸಹ ಕೆಲವರು ಟೀಕೆಗಳನ್ನು ಮಾಡುತ್ತಾರೆ. ಅವುಗಳಿಗೆ ತಲೆಕೆಡಿಸಿಕೊಳ್ಳದೆ ಎಲ್ಲರೂ ಒಗ್ಗಟ್ಟಾಗಿ ತಮ್ಮ ಸೇವೆ ಮುನ್ನಡೆಸಿಕೊಂಡು ಹೋಗಬೇಕು. ಅಲ್ಲದೆ ಎಲ್ಲಾ ರೀತಿಯ ಸಂಕಷ್ಟಗಳಿಗೂ ಸ್ಪಂದಿಸುವ ನಿಟ್ಟಿನಲ್ಲಿ ಯುವಕರು ಹೆಚ್ಚಿನ ಗಮನ ನೀಡಬೇಕು. ಸೇವಾ ಕಾರ್ಯಗಳಿಗೆ ನೆರವಾಗುವ ನಿಟ್ಟಿನಲ್ಲಿ ವೈಯಕ್ತಿಕವಾಗಿ ೨ ಲಕ್ಷ ರು. ನೆರವು ನೀಡುವುದಾಗಿ ಭರವಸೆ ನೀಡಿದರು.ಹಿರಿಯ ಪತ್ರಕರ್ತ ಕಣ್ಣಪ್ಪ ಮಾತನಾಡಿ, ತಮಿಳರು ಎಂದರೆ ಶ್ರಮಜೀವಿಗಳು ಮತ್ತು ನಂಬಿಕೆಗೆ ಅರ್ಹರಾದವರು. ಶ್ರಮದ ಬದುಕಿನಲ್ಲೂ ಸಮಾಜದ ಎಲ್ಲರ ಏಳಿಗೆಗಾಗಿ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮಾದರಿಯಾದವರು. ತಮಿಳು ಯುವಕರು ೫೦೦ ದಿನಗಳ ಕಾಲ ಬೆಳಗಿನ ಉಚಿತ ಉಪಾಹಾರ ಸೇವಾ ಕಾರ್ಯ ಯಶಸ್ವಿಯಾಗಿ ನಡೆಸಿರುವುದು ತಮಿಳು ಸಮಾಜಕ್ಕೆ ಹೆಮ್ಮೆಯ ಸಂಗತಿ ಎಂದರು.
ಸಂಘದ ಗೌರವಾಧ್ಯಕ್ಷ, ಯುವ ಮುಖಂಡ ಶಿವಕುಮಾರ್ ಮತ್ತು ಅಧ್ಯಕ್ಷ ಜಯಕುಮಾರ್, ನಗರಸಭೆ ಸದಸ್ಯರಾದ ಅನುಸುಧಾ ಮೋಹನ್ ಪಳನಿ, ಬಸವರಾಜ್ ಬಿ.ಆನೇಕೊಪ್ಪ, ಕೆ.ಸುದೀಪ್‌ಕುಮಾರ್, ಟಿಪ್ಪುಸುಲ್ತಾನ್, ಉದ್ಯಮಿ ಎ.ಮಾಧು, ಸುರಕ್ಷಾ ಜೀವನಾ ಸೇವಾ ಟ್ರಸ್ಟ್‌ನ ಜ್ಯೋತಿ ಸೋಮಶೇಖರ್, ಸಂಜೀವಿನ ಹಿರಿಯ ನಾಗರಿಕರ ಆರೈಕೆ ಕೇಂದ್ರದ ಸವಿತಾ, ಸಿದ್ದಾರ್ಥ ಅಂಧರ ಕೇಂದ್ರದ ಶಿಬಬಸಪ್ಪ, ಕಾರ್ಮಿಕ ಮುಖಂಡ ವಿ.ವಿನೋದ್, ತಮಿಳು ಯೂತ್ಸ್ ಅಸೋಸಿಯೇಷನ್ ಪದಾಧಿಕಾರಿಗಳು, ಸದಸ್ಯರು ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು.