ಬೆಳಗಟ್ಟದಲ್ಲಿ ಉಚಿತ ಆರೋಗ್ಯ ಶಿಬಿರ

KannadaprabhaNewsNetwork |  
Published : Jul 02, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ  ಟಿಂಟ್ ಬಾಟಂ | Kannada Prabha

ಸಾರಾಂಶ

ಚಿತ್ರದುರ್ಗ ತಾಲೂಕಿನ ಬೆಳಗಟ್ಟದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರಕ್ಕೆ ಕೆ.ಎಸ್.ಕೃಷ್ಣಾರೆಡ್ಡಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಎಷ್ಟೇ ಹಣ, ಆಸ್ತಿ ಗಳಿಸಿದ್ದರೂ ಆರೋಗ್ಯವೇ ಮಹಾಭಾಗ್ಯ ಎಂಬ ಮಾತೇ ಸತ್ಯ ಎಂದು ಲೋಕೋಪಯೋಗಿ ಇಲಾಖೆ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಎಸ್.ಕೃಷ್ಣಾರೆಡ್ಡಿ ಹೇಳಿದರು.

ಕೋಟ್ಲಾ ಎಜುಕೇಷನಲ್ ಟ್ರಸ್ಟ್ ಹಾಗೂ ಮೆಡಿಡರ್ಮ್ ಸ್ಪೆಷಾಲಿಟಿ ಕ್ಲಿನಿಕ್ ಸಹಯೋಗದಲ್ಲಿ ಚಿತರ್ದುರ್ಗ ತಾಲೂಕಿನ ಬೆಳಗಟ್ಟ ಹರ್ಷ ಫಾರ್ಮ್‍ನಲ್ಲಿ ಆಯೋಜಿಸಿದ್ದ ಕಣ್ಣಿನ ಪೊರೆ ಜಾಗೃತಿ ಕಾರ್ಯಕ್ರಮ ಹಾಗೂ ಮೆಗಾ ಆರೋಗ್ಯ ಶಿಬಿರದಲ್ಲಿ ಮಾತನಾಡಿದ ಅವರು, ವಯಸ್ಸಾದವರಲ್ಲಿ ಕಣ್ಣಿನ ಪೊರೆ ಸಾಮಾನ್ಯ. ಆದರೆ, ನಿರ್ಲಕ್ಷ್ಯ ವಹಿಸಿದರೆ ದೃಷ್ಟಿ ಸಂಪೂರ್ಣ ಹೋಗಬಹುದು. 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ತಪಾಸಣೆ ಮಾಡಿಸಬೇಕು. ಗ್ರಾಮೀಣ ಭಾಗದಲ್ಲಿ ಜಾಗೃತಿ ಕೊರತೆಯಿಂದ ಅನೇಕರು ಅಂಧತ್ವಕ್ಕೆ ತುತ್ತಾಗುತ್ತಿದ್ದಾರೆ. ಸಕಾಲದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದರೆ ಶೇ.100ರಷ್ಟು ದೃಷ್ಟಿ ಮರಳಿ ಪಡೆಯಬಹುದು ಎಂದು ತಿಳಿಸಿದರು.

ಸಕ್ಕರೆ, ರಕ್ತದೊತ್ತಡ, ಕಣ್ಣು ಸೇರಿ ಅನೇಕ ಆರೋಗ್ಯ ಸಮಸ್ಯೆಗಳು ಸುಪ್ತವಾಗಿ ಕಾಡುತ್ತಿರುತ್ತವೆ. ಆದ್ದರಿಂದ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ನಿರ್ಲಕ್ಷ್ಯ ವಹಿಸಿದರೆ ದೊಡ್ಡ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಬಡತನ, ನಿರ್ಲಕ್ಷ್ಯತನ ಹೆಚ್ಚು ಇರುತ್ತದೆ. ಆದ್ದರಿಂದ ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು. ಸಂಘ-ಸಂಸ್ಥೆಗಳು ಹಳ್ಳಿ, ಕೊಳಚೆ ಪ್ರದೇಶದಲ್ಲಿ ಹೆಚ್ಚಾಗಿ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳುವ ಕಾರ್ಯ ಕೈಗೊಳ್ಳಬೇಕು. ಈ ಮೂಲಕ ಆರೋಗ್ಯ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕೆಂದರು.

ಫಿಜಿಷಿಯನ್ ಡಾ.ಕಾಂತರಾಜ್ ಶಿಬಿರ ಉದ್ಘಾಟಿಸಿದರು. ಡಾ.ಮನುರೆಡ್ಡಿ, ಡಾ. ಹರ್ಷಿತಾರೆಡ್ಡಿ, ಡಾ.ಜಯಪ್ರಕಾಶ್, ಡಾ.ಗೀತಾ, ಡಾ.ದರ್ಶನ್ ಸಾಯಿ, ಡಾ.ಶಶಾಂಕ್ ರೆಡ್ಡಿ, ಡಾ.ನಂದಿನಿ, ಡಾ.ಚಂದನಾ, ಡಾ.ನಿತ್ಯಾ, ಡಾ.ಗಗನ್ ವಿ.ಮೊತ್ಕೂರ್ ಸೇರಿ 12ಕ್ಕೂ ಹೆಚ್ಚು ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು.ಸತ್ಯನಾರಾಯಣ ರೆಡ್ಡಿ, ಸಿಟಿ ಇನ್‍ಸ್ಟಿಟ್ಯೂಟ್ ಕಾರ್ಯದರ್ಶಿ ವೆಂಕಟೇಶ್ ರೆಡ್ಡಿ, ಚಿತ್ರದುರ್ಗ ರೆಡ್ಡಿ ಸಮಾಜ ಅಧ್ಯಕ್ಷ ಬಿ.ವೆಂಕಟೇಶ್ ರೆಡ್ಡಿ, ಡಿಆರ್ ಡಿಓ ಲೋಕೇಶ್ವರಪ್ಪ ಉಪಸ್ಥಿತರಿದ್ದರು. ಶಿಬಿರದಲ್ಲಿ 400ಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣೆಗೆ ಒಳಪಟ್ಟರು. ಎಲ್ಲರಿಗೂ ಉಚಿತವಾಗಿ ಔಷಧ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿಯಿಂದ ಮತದಾನದ ಹಕ್ಕು ಕಸಿಯುವ ಕುತಂತ್ರ
ನಕಲಿ ಜಾತಿ ಪ್ರಮಾಣಪತ್ರ ರದ್ಧತಿಗೆ ಒತ್ತಾಯ