ಉತ್ತಮ ಆರೋಗ್ಯಕ್ಕೆ ಉಚಿತ ಆರೋಗ್ಯ ಶಿಬಿರಗಳು ಹೆಚ್ಚು ಅವಶ್ಯಕ: ಜಿಟಿಡಿ

KannadaprabhaNewsNetwork |  
Published : Oct 11, 2025, 12:02 AM IST
28 | Kannada Prabha

ಸಾರಾಂಶ

ಹಿನಕಲ್‌ ಗ್ರಾಮದಲ್ಲಿ ನಡೆಯುತ್ತಿರುವ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರು ಪರೀಕ್ಷೆ ಮಾಡಿ ಚಿಕಿತ್ಸೆಯನ್ನು ನೀಡುತ್ತಿದ್ದು ಇದು ಉತ್ತಮ ಬೆಳವಣಿಗೆ. ಈ ಶಿಬಿರದಲ್ಲಿ ಹೆಚ್ಚಿನ ಜನರು ಬಂದು ಸದುಪಯೋಗ ಪಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಸಾರ್ವಜನಿಕರ ಉತ್ತಮ ಆರೋಗ್ಯಕ್ಕೆ ಶಿಬಿರಗಳು ಹೆಚ್ಚು ಅಗತ್ಯ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ಹಿನಕಲ್‌ ನ ನಿಂಗಮಣಿ ನೀಲಕಂಠಪ್ಪ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಹೂಟಗಳ್ಳಿ ನಗರ ಸಭೆ, ಇಎಸ್ಐ ಮತ್ತು ಪಿಕೆಟಿಬಿ ಆಸ್ಪತ್ರೆ, ಇಲವಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿ ನಡೆಯುತ್ತಿರುವ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರು ಪರೀಕ್ಷೆ ಮಾಡಿ ಚಿಕಿತ್ಸೆಯನ್ನು ನೀಡುತ್ತಿದ್ದು ಇದು ಉತ್ತಮ ಬೆಳವಣಿಗೆ. ಈ ಶಿಬಿರದಲ್ಲಿ ಹೆಚ್ಚಿನ ಜನರು ಬಂದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಿಬಿರದಲ್ಲಿ ವಿವಿಧ ಆಸ್ಪತ್ರೆಗಳಾದ ಇಎಸ್ಐ, ಪಿಕೆಟಿಬಿ ಆಸ್ಪತ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಇಲವಾಲ, ಕೆವಿಸಿ ಆಸ್ಪತ್ರೆ, ಭಾರತ್ ಕ್ಯಾನ್ಸರ್ ಆಸ್ಪತ್ರೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಎನ್ ಜೆ ಆಸ್ಪತ್ರೆ, ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರ, ಲೈನ್ ಸ್ಟೇಷನ್ ಕಣ್ಣಿನ ಆಸ್ಪತ್ರೆಯ ನುರಿತ ವೈದ್ಯರಿಂದ ಶಿಬಿರದಲ್ಲಿ ಉಚಿತವಾಗಿ ಬಿಪಿ ಶುಗರ್ ಟಿಬಿ, ಎಚ್ಐವಿ ಹೆಪಟೈಟಿಸ್ ಬಿ ಮತ್ತು ಸಿ ಚರ್ಮರೋಗ ಕಿಡ್ನಿ ಪರೀಕ್ಷೆ, ಗರ್ಭಕೋಶ ತೊಂದರೆ, ಮೂಳೆ ತಂಬಾಕು, ಇ.ಎನ್.ಟಿ, ಕ್ಯಾನ್ಸರ್, ಸ್ತ್ರೀರೋಗ, ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದಿಂದ ರಕ್ತದಾನ, ಕಣ್ಣಿನ ತಪಾಸಣೆಯನ್ನು ಸರಿ ಸುಮಾರು 500 ಜನರು ಬಂದು ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಹೂಟಗಳ್ಳಿ ನಗರಸಭೆಯ ಪೌರಯುಕ್ತ ಚಂದ್ರಶೇಖರ್, ಎಇಇ ಗಿರಿಜಮ್ಮ, ಡಾಪ್ಕೋ ಅಧಿಕಾರಿ ಡಾ. ಸಿರಾಜ್ ಅಹಮದ್, ಇಎಸ್ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ್, ಆರ್.ಎಂಒ ಡಾ. ಚಂದ್ರಕಲಾ, ಪಿಕೆಟಿವಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಪ್ರಶಾಂತ್, ಡಾ. ರೇಖಾ, ಹಿರಿಯ ಅರೋಗ್ಯ ನಿರೀಕ್ಷಕ ಶಿವಪ್ರಸಾದ್, ಮೇಲ್ವಿಚಾರಕಿ ಬಿ. ಸವಿತಾ, ಗೋಪಾಲ್, ಗೀತಾ, ಸಿದ್ದೇಶ್ವರಪ್ಪ, ಪುಟ್ಟರಾಜು, ಇಲವಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹೂಟಗಳ್ಳಿ ನಗರಸಭೆ ಸಿಬ್ಬಂದಿ, ಚೈತನ್ಯ ಸ್ವಯಂ ಸೇವ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ