ಆಟೋ ಟ್ಯಾಕ್ಸಿ ಚಾಲಕರಿಗೆ ಉಚಿತ ಆರೋಗ್ಯ ತಪಾಸಣೆ, ರಕ್ತಪರೀಕ್ಷಾ ಶಿಬಿರ

KannadaprabhaNewsNetwork |  
Published : Sep 27, 2025, 12:00 AM IST
26ಕೆಎಂಎನ್ ಡಿ17 | Kannada Prabha

ಸಾರಾಂಶ

ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ನಿರಂತರವಾಗಿ ಜನ ಉಪಯೋಗಿ ಕೆಲಸಗಳನ್ನು ಮಾಡುವಂತೆ ತೀರ್ಮಾನಿಸಿದ್ದಾರೆ. ಹೀಗಾಗಿ ಅಕ್ಟೋಬರ್ 2ರವರೆಗೂ ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತೇವೆ.

ಹಲಗೂರು: ಜಿಲ್ಲಾ ಭಾರತೀಯ ಜನತಾ ಪಾರ್ಟಿ ಪ್ರಕೋಷ್ಠಗಳ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಾಗಾರದ ಅಂಗವಾಗಿ ಸ್ಥಳೀಯ ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಶಿಬಿರದಲ್ಲಿ ರಕ್ತ ಪರೀಕ್ಷೆ, ಇಸಿಜಿ, ಹೃದಯ, ಕಿಡ್ನಿ, ಸಕ್ಕರೆ ಕಾಯಿಲೆಗಳಿಗೆ ಸಂಬಂಧಿಸಿದ ಪರೀಕ್ಷೆ ನಡೆಸಲಾಯಿತು. 16 ಜನರಿಗೆ ಇಸಿಜಿ, 82 ಜನರಿಗೆ ರಕ್ತ ಪರೀಕ್ಷೆ, 14 ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಬಿಜೆಪಿ ಜಿಲ್ಲಾ ಸಂಯೋಜಕ ಬಿ.ಎನ್.ಕೃಷ್ಣೆಗೌಡ ಮಾತನಾಡಿ, ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ನಿರಂತರವಾಗಿ ಜನ ಉಪಯೋಗಿ ಕೆಲಸಗಳನ್ನು ಮಾಡುವಂತೆ ತೀರ್ಮಾನಿಸಿದ್ದಾರೆ. ಹೀಗಾಗಿ ಅಕ್ಟೋಬರ್ 2ರವರೆಗೂ ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತೇವೆ. ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಎಂ.ಎನ್.ಕೃಷ್ಣ, ನಾಗೇಗೌಡರು, ರವಿ, ಅಭಿಜಿತ್, ಕಿಶೋರ್, ವೈದ್ಯರಾದ ಡಾ.ಉಮೇಶ್ ಮಠಪತಿ, ಡಾ.ಗುರುಪ್ರಸಾದ್ ಮಠಪತಿ, ಡಾ. ಪ್ರವೀಣ್, ಹಾಗೂ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ