ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕೆ.ಆರ್.ನಗರ ವಲಯದ ನಿರ್ದೇಶಕಿ ಮಮತಾ ರಾವ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಂಸ್ಥೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವೀರೇಂದ್ರ ಹೆಗ್ಗಡೆ ಹಾಗೂ ಅಮ್ಮನವರ ಆಲೋಚನೆಗಳ ಮೂಲಕ ಗ್ರಾಮೀಣ ಮಟ್ಟದ ಮಹಿಳೆಯರಿಗೆ ಸೌಲಭ್ಯ ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಡೈರಿ ಕಟ್ಟಡ, ದೇವಾಲಯ ಜೀರ್ಣೋದ್ಧಾರ, ಕೆರೆ ಉಳೆತ್ತುವುದು, ಜ್ಞಾನದೀಪ ಶಿಕ್ಷಕರ ಕೊರತೆ ಇಲ್ಲದಂತೆ ಸಂಸ್ಥೆ ನೆರವು ನೀಡಲಾಗುತ್ತಿದೆ ಎಂದರು.
ಸ್ಪಂದನ ಆಸ್ಪತ್ರೆ ವೈದ್ಯ ಡಾ.ಅಬ್ದುಲ್ ರೆಹಮಾನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸದಸ್ಯರಿಗೆ ಯಾವ ರೀತಿ ಆಹಾರ ಸೇವನೆ ಮಾಡಬೇಕು. ಮೊದಲ ಹಂತದಲ್ಲಿ ಆರೋಗ್ಯ ಹದಗೆಟ್ಟಾಗ ಯಾವ ರೀತಿಯಲ್ಲಿ ಸುಧಾರಣೆ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.ಇದೇ ವೇಳೆ ಕಣ್ಣಿನ ತಪಾಸಣಾಧಿಕಾರಿ ಜಲೀಲ ಹಾಗೂ ಸಿಬ್ಬಂದಿ ವರ್ಗದಿಂದ ಗ್ರಾಮಸ್ಥರಿಗೆ ಕಣ್ಣಿನ ಪರೀಕ್ಷೆ ಜೊತೆಗೆ ಹೃದಯ ಸಂಬಂದಿ ಇಸಿಜಿ ತಪಾಸಣೆ ಮಾಡಿಸಿ ಉಚಿತವಾಗಿ ಔಷಧಿಗಳನ್ನು ನೀಡಿದರು. ಯೋಜನಾಧಿಕಾರಿ ಗಣೇಶ್ ನಾಯ್ಕ್, ಮೇಲ್ವಿಚಾರಕ ರಮೇಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಂಗೀತ, ಸೇವಾ ಪ್ರತಿನಿಧಿ ಪಲ್ಲವಿ, ಕೇಂದ್ರದ ಅಧ್ಯಕ್ಷೆ ಅನಿತಾ, ಗ್ರಾಮದ ಕುಮಾರ್, ಕೇಂದ್ರದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತದ್ದರು.
ಮದ್ದೂರು: ಸೆಪ್ಟಂಬರ್‌ನಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಸಂಬಂಧ ಜೂ.28ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಕೋಣಸಾಲೆ ಕೆ.ಎಸ್.ಸುನಿಲ್ ಕುಮಾರ್ ತಿಳಿಸಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸದಸ್ಯರು, ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಸದಸ್ಯರು ಪೂರ್ವಭಾವಿ ಸಭೆಗೆ ಹಾಜರಾಗಿ ಸಮ್ಮೇಳನ ಕುರಿತು ತಮ್ಮ ಅಮೂಲ್ಯ ಸಲಹೆ ಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ.