ಉಡುಪಿ: ಪತ್ರಕರ್ತರು ಸದಾ ಕಾಲ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಇದರಿಂದ ಅವರಿಗೆ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತಿಲ್ಲ. ಆಹಾರ ಪದ್ಧತಿ, ವ್ಯಾಯಮ ಕೂಡ ವ್ಯವಸ್ಥಿತವಾಗಿರದೆ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ ಎಂದು ಉಡುಪಿ ಲೋಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದ್ದಾರೆ.
ನಾವು ಇಂದು ನಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ನಿಯಮಿತವಾಗಿ ಆಹಾರ ಸೇವನೆ, ವ್ಯಾಯಾಮಕ್ಕೆ ಆದ್ಯತೆ ನೀಡಬೇಕು. ಇದರಿಂದ ಡಯಾಬಿಟೀಸ್, ಬಿಪಿಯಂತಹ ಕಾಯಿಲೆಯಿಂದ ದೂರ ಇರ ಬಹುದಾಗಿದೆ. ಪತ್ರಕರ್ತರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಕೊಡು ವುದರಿಂದ ಇನ್ನಷ್ಟು ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಪತ್ರಿಕಾಭವನ ಸಂಚಾಲಕ ಅಂಕಿತ್ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು. ಅಮೃತ್ ಡಯಾಗ್ನಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಸತೀಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಕಾರ್ಯಕ್ರಮ ನಿರೂಪಿಸಿದರು. ಈ ಉಚಿತ ತಪಾಸಣೆ ಶಿಬಿರವು ಆ. 21ರವರೆಗೆ ನಡೆಯಲಿದೆ.