ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ

KannadaprabhaNewsNetwork |  
Published : Feb 11, 2025, 12:45 AM IST
ವಿಜೆಪಿ ೧೦ವಿಜಯಪುರ ಹೋಬಳಿ ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರದ ಕುರಿತ ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೆಂಕಟಗಿರಿಕೋಟೆ ಗ್ರಾಪಂ ಮತ್ತು ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್, ಇವರ ಸಹಯೋಗದಲ್ಲಿ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿಜಯಪುರ ಹೋಬಳಿಯ ವೆಂಕಟಗಿರಿಕೋಟೆ ಗ್ರಾಪಂ ಸಮೀಪದ ಚನ್ನಕೇಶವಸ್ವಾಮಿ ಸಮುದಾಯ ಭವನದಲ್ಲಿ ಫೆ.12ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಆರ್.ಅಮರನಾಥ್ ತಿಳಿಸಿದರು.

ಈ ಕುರಿತು ವೆಂಕಟಗಿರಿಕೋಟೆ ಗ್ರಾಪಂ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೆಂಕಟಗಿರಿಕೋಟೆ ಗ್ರಾಪಂ ಮತ್ತು ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್, ಇವರ ಸಹಯೋಗದಲ್ಲಿ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವನಗೌಡ ಪಾಟೀಲ್ , ಗ್ರಾಪಂ ಅಧ್ಯಕ್ಷೆ ಬಿ. ಆರ್. ಸರೋಜಮ್ಮ, ಉಪಾಧ್ಯಕ್ಷ ಸಿ. ಜಗನ್ನಾಥ್, ಮಾಜಿ ಅಧ್ಯಕ್ಷ ಹುರುಳುಗುರ್ಕಿ ಶ್ರೀನಿವಾಸ್, ಆಶಾ ಮಂಜುನಾಥ್, ಜೋಸೆಪ್, ಮಾಜಿ ಉಪಾಧ್ಯಕ್ಷ ವಿಶ್ವನಾಥಾಚಾರ್, ಸದಸ್ಯರಾದ ಎಂ.ಮಾರಪ್ಪ, ನಾಗರಾಜ್ ಹಾಗೂ ನಾಗಾರ್ಜುನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶೋಭಾ, ಮೀನಾ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಯಂತಿ ಸೇರಿ ಗ್ರಾಪಂ ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ