ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಬೇಳೂರು ಗ್ರಾ.ಪಂ. ವ್ಯಾಪ್ತಿಯ ಕೆಂಚಮ್ಮನ ಬಾಣೆ ಸಮುದಾಯ ಭವನದಲ್ಲಿ ಬಲಮುರಿ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ. ಸೋಮಶೇಖರ್, ಬಳಗುಂದ ಸ.ಹಿ.ಪ್ರಾ. ಶಾಲೆಯಲ್ಲಿ ಬೇಳೂರು ಗ್ರಾ.ಪಂ. ಅಧ್ಯಕ್ಷ ಬಿ.ಎಂ. ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ಸಾಯಿ ಕೃಷ್ಣ, ಡಾ. ರೋಹಿತ್, ಡಾ. ನಿಂಗನಗೌಡ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ವೈದ್ಯರು ತಪಾಸಣೆ ನಡೆಸಿದರು.
ತಾಲೂಕಿನ ಮಾದಾಪುರ, ಐಗೂರು, ಚೌಡ್ಲು, ಕಿಬ್ಬೆಟ್ಟ, ಶನಿವಾರಸಂತೆ, ನಿಡ್ತ, ತೋಳೂರುಶೆಟ್ಟಳ್ಳಿ, ಬೆಟ್ಟದಳ್ಳಿ, ಸೋಮವಾರಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ಶಿಬಿರ ನಡೆಯಿತು. ನೂರಾರು ಮಂದಿ ತಪಾಸಣೆಗೊಳಪಡಿಸಿಕೊಂಡು ಉಚಿತ ಔಷಧ ಪಡೆದರು.ಸಮುದಾಯ ಆರೋಗ್ಯ ಅಧಿಕಾರಿಗಳು, ಗ್ರಾಮ ಸುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ವಯಂ ಸೇವಕರುಗಳು ಪಾಲೊಂಡಿದ್ದರು. ಇದೇ ಸಂದರ್ಭ ಜನರಿಗೆ ಆಯುಷ್ಮಾನ್ ಕಾರ್ಡ್ ಮಾಡಿ ಕೊಡಲಾಯಿತು.