ಗ್ರಾಮೀಣ ಜನರಿಗೂ ಉಚಿತ ಆರೋಗ್ಯ ಸೇವೆ

KannadaprabhaNewsNetwork |  
Published : Aug 30, 2026, 01:15 AM IST
ಿ್ಿ್ಿ್ | Kannada Prabha

ಸಾರಾಂಶ

ಗ್ರಾಮೀಣ ಜನರಿಗೆ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಮಟ್ಟದಲ್ಲಿ 50 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿಯೂ ತೆರೆದು ಸೇವೆ ಒದಗಿಸಲು ಶ್ರೀಸತ್ಯ ಸಾಯಿ ಸೇವಾ ಆಶ್ರಮದ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀಸತ್ಯಸಾಯಿ ಸೇವಾಶ್ರಮದ ಶ್ರೀಮಧುಸೂಧನ್ ಸಾಯಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು ಗ್ರಾಮೀಣ ಜನರಿಗೆ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಮಟ್ಟದಲ್ಲಿ 50 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿಯೂ ತೆರೆದು ಸೇವೆ ಒದಗಿಸಲು ಶ್ರೀಸತ್ಯ ಸಾಯಿ ಸೇವಾ ಆಶ್ರಮದ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀಸತ್ಯಸಾಯಿ ಸೇವಾಶ್ರಮದ ಶ್ರೀಮಧುಸೂಧನ್ ಸಾಯಿ ತಿಳಿಸಿದ್ದಾರೆ. ಇಂದು ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಅವರ ಮನೆಗೆ ಭೇಟಿ ನೀಡಿದ ವೇಳೆ ಮಾತನಾಡಿದರು. ಆರೋಗ್ಯ, ಶಿಕ್ಷಣವೆಂಬುದು ವ್ಯಾಪಾರವಾಗಿರುವ ಇಂದಿನ ದಿನಗಳಲ್ಲಿ ಬಡವರು, ಮಧ್ಯಮ ವರ್ಗದ ಜನರು ಗುಣಮಟ್ಟ ಆರೋಗ್ಯ ಮತ್ತು ಶಿಕ್ಷಣವನ್ನು ಪಡೆಯುವುದು ಮರಿಚಿಕೆಯಾಗಿದೆ. ಸರ್ಕಾರದ ಆಸ್ಪತ್ರೆಯ ಬಗ್ಗೆ ಇಂದಿಗೂ ಜನರಲ್ಲಿ ಅಸಡ್ಡೆಯ ಭಾವನೆ ಇದೆ. ಹಾಗಾಗಿ ಮುದ್ದೇನಹಳ್ಳಿಯಲ್ಲಿರುವ ಶ್ರೀಸಾಯಿ ಗ್ರಾಮದಲ್ಲಿ ಇರುವ ಧರ್ಮಾಸ್ಪತ್ರೆಯ ರೀತಿಯಲ್ಲಿಯೇ ನುರಿತ ವೈದ್ಯರು ಮತ್ತು ಸಿಬ್ಬಂದಿ ಒಳಗೊಂಡ ಸಣ್ಣ ಸಣ್ಣ ಆಸ್ಪತ್ರೆಗಳನ್ನು ಗ್ರಾಮೀಣ ಭಾಗದಲ್ಲಿ ತೆರದು ಸೇವೆ ಒದಗಿಸಬೇಕೆಂಬುದು ಭಕ್ತರ ಕೋರಿಕೆಯಾಗಿದೆ. ನಮ್ಮಇಚ್ಛೆಯೂ ಆ ನಿಟ್ಟಿನಲ್ಲಿಯೇ ಇದ್ದು, ನಮ್ಮ ಉಚಿತ ಆರೋಗ್ಯ ಮತ್ತು ಶಿಕ್ಷಣ ಸೇವೆಗಳು ರಾಜ್ಯದಾದ್ಯಂತ ವಿಸ್ತರಿಸಲಿವೆ ಎಂದರು.ನಮ್ಮ ಮೆಡಿಕಲ್‌ ಕಾಲೇಜಿನ ನುರಿತ ತಜ್ಞ ವೈದ್ಯರೇ ನಿಗದಿತ ದಿನಗಳಂದು ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ರೋಗಿಗಳನ್ನು ಪರೀಕ್ಷಿಸಿ, ಚಿಕಿತ್ಸೆ ನೀಡಲಿದ್ದಾರೆ ಎಂದರು. ಮಧುಗಿರಿಯಲ್ಲಿ ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರ ನಡೆಯುತ್ತಿದೆ. ಹೆದ್ದಾರಿ ಅಕ್ಕಪಕ್ಕದಲ್ಲಿ ಜಾಗ ನೋಡಿ, ಅಲ್ಲಿ 50 ಬೆಡ್‌ ಆಸ್ಪತ್ರೆ ತೆರೆಯಲು ಚಿಂತನೆ ನಡೆದಿದೆ. ಹೆದ್ದಾರಿಗಳಲ್ಲಿ ಅಪಘಾತ ನಡೆದಾಗ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಶಿರಾ ತುಮಕೂರು ಮತ್ತು ದಾಬಸ್‌ಪೇಟೆ ನಡುವೆ ಇಂತಹ ಆಸ್ಪತ್ರೆ ತೆರೆಯುವ ಬಗ್ಗೆ ಆಲೋಚನೆ ಇದೆ. ಜಾಗ ಎಷ್ಟು ಶೀಘ್ರವಾಗಿ ದೊರೆಯುತ್ತದೆಯೋ ಅಷ್ಟು ಬೇಗ ಆಸ್ಪತ್ರೆ ನಿರ್ಮಾಣ ಕಾರ್ಯವೂ ನಡೆಯಲಿದೆ. ನಮ್ಮಆಸ್ಪತ್ರೆಯಿಂದ ಹೊರಬರುವ ವೈದ್ಯರುಗಳನ್ನೇ ಈ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ನೇಮಕ ಮಾಡಲಾಗುವುದು ಎಂದು ಸ್ವಾಮೀಜಿ ನುಡಿದರು.

ಕುಡಿಯುವ ನೀರಿಗೆ ಸಂಬಂಧಿಸಿದಂತೆ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಕೆಲ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಮ್ಮ ಸಂಸ್ಥೆ ವತಿಯಿಂದ ಈಗಾಗಲೇ ಶುದ್ಧೀಕರಣ ಘಟಕಗಳನ್ನು ಹಾಕಿ ನೋಡಿದ್ದೇವೆ. ಒಳ್ಳೆಯ ಫಲಿತಾಂಶ ಬಂದಿದೆ. ಹಾಗಾಗಿ ತುಮಕೂರು ಜಿಲ್ಲೆಯಲ್ಲಿಯೂ ಅಗತ್ಯವಿರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ಹಾಕಲು ಸತ್ಯ ಸಾಯಿ ಸಂಸ್ಥೆ ಸಿದ್ಧವಿದೆ ಎಂದರು. ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಮುದ್ದೇನಹಳ್ಳಿಯ ಶ್ರೀಸತ್ಯಸಾಯಿ ಸೇವಾಶ್ರಮದಿಂದ ಹಲವಾರು ಸಮಾಜ ಸೇವಾ ಕಾರ್ಯಗಳು ಜರುಗುತ್ತಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿದೆ. ಅವುಗಳನ್ನು ತುಮಕೂರುಜಿಲ್ಲೆಗೂ ವಿಸ್ತರಿಸಬೇಕೆಂಬುದು ನಮ್ಮಕೋರಿಕೆಯಾಗಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ಮಾಡಿರುವಂತೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ಶಿರಾ ತಾಲೂಕು ಗಾಣದ ಹುಣಸೆ ಗ್ರಾಮದಲ್ಲಿರುವ ಶಿಕ್ಷಣ ಸಂಸ್ಥೆಯ ಉನ್ನತೀಕರಣ ಹಾಗೂ ಆರೋಗ್ಯ ಸೇವೆಗಳ ವಿಸ್ತರಣೆ ಮಾಡಿದರೆ ಹೆಚ್ಚಿನ ಅನುಕೂಲ ಜಿಲ್ಲೆಯ ಜನರಿಗೆ ಆಗಲಿದೆ ಎಂದರು. ಇದೇ ವೇಳೆ ಮಾಜಿ ಶಾಸಕರಾದ ಡಾ.ಎಸ್.ರಫೀಕ್‌ ಅಹಮದ್, ಡಾ.ಎಸ್.ಷಫಿ ಅಹಮದ್ ಸೇರಿದಂತೆ ಹಲವರು ಶ್ರೀಮಧುಸೂಧನ್ ಸಾಯಿ ಅವರ ದರ್ಶನ ಪಡೆದು ಗೌರವಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಆರ್ಥಿಕ ಅಭಿವೃದ್ಧಿಗೆ ಧಗ್ರಾಯೋ ಸಹಕಾರಿ
ಪಡಿತರ ಅಕ್ಕಿ-ರಾಗಿ ಅಕ್ರಮ ಸಾಗಾಟ ಅಪಘಾತದಲ್ಲಿ ಬಯಲು!