ಇಂದು ಕಸಾಪದಲ್ಲಿ ಉಚಿತ ಶ್ರವಣ ತಪಾಸಣೆ

KannadaprabhaNewsNetwork |  
Published : Jun 08, 2025, 03:06 AM IST
7ಎಚ್ಎಸ್ಎನ್5 :  | Kannada Prabha

ಸಾರಾಂಶ

ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು, ಈಗ ನಾವು ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು, ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ನಮ್ಮ ಸಂಸ್ಥೆಯಾದ ಟೀಮ್ ಈಶ್ವರ್ ಮಲ್ಲೆಯವರು ಶ್ರವಣದ ಯಂತ್ರಕ್ಕೆ ಆಗುವ ವೆಚ್ಚದ ಶೇಕಡಾ ೪೦% ಮೊತ್ತವನ್ನು ಭರಿಸಲಾಗುತ್ತಿದ್ದು, ರೋಗಿಗಳು ಇವರ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಿದರು

ಕನ್ನಡಪ್ರಭ ವಾರ್ತೆ ಹಾಸನ

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಜೂ8ರ ಭಾನುವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ಧರದಲ್ಲಿ ಶ್ರವಣ ಯಂತ್ರಗಳ ವಿತರಣೆ ಮಾಡುವುದಾಗಿ ರೋಟರಿ ಕ್ಲಬ್ ಆಫ್ ಸೆಂಟ್ರಲ್ ಅಧ್ಯಕ್ಷ ಎಂ.ಡಿ. ನಾಗೇಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು, ಈಗ ನಾವು ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು, ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ನಮ್ಮ ಸಂಸ್ಥೆಯಾದ ಟೀಮ್ ಈಶ್ವರ್ ಮಲ್ಲೆಯವರು ಶ್ರವಣದ ಯಂತ್ರಕ್ಕೆ ಆಗುವ ವೆಚ್ಚದ ಶೇಕಡಾ ೪೦% ಮೊತ್ತವನ್ನು ಭರಿಸಲಾಗುತ್ತಿದ್ದು, ರೋಗಿಗಳು ಇವರ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಿದರು. ರೋಟರಿ ಕ್ಲಬ್ ಆಫ್ ಸೆಂಟ್ರಲ್, ನೇತೃತ್ವದಲ್ಲಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಲೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಮಾಡಲಾಗುವುದು ಎಂದರು. ಪ್ರಮುಖ ಸೂಚನೆಗಳೆಂದರೇ ನೋಂದಣಿ ಕಡ್ಡಾಯವಾಗಿದ್ದು, ಕರೆಮಾಡಿ ನೋಂದಾಯಿಸಿಕೊಳ್ಳಬೇಕು. ಹಿರಿಯರಿಗೆ ಮೊದಲ ಆದ್ಯತೆ ಕೊಡಲಾಗುವುದು. ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ ಇದ್ದರೆ ಜೊತೆಯಲ್ಲಿ ತರಬೇಕು. ಮೊದಲು ನೋಂದಾಯಿಸುವ ೪೦ ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಶ್ವರ್ ಮಲ್ಪೆ ಟೀಮ್‌ನವರು ದೇಣಿಗೆ ಮೊತ್ತದಿಂದ ೪೦% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ ಎಂದು ಹೇಳಿದರು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೯೦೨೩೪೪೩೯೯ ಸಂರ್ಕಿಸಬಹುದಾಗಿದೆ ಎಂದು ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಆಫ್ ಸೆಂಟ್ರಲ್ ಸದಸ್ಯ ಪ್ರಕಾಶ್, ಹಿರಿಯ ಪತ್ರಕರ್ತ ನಾಗರಾಜ್ ಹೆತ್ತೂರ್, ಬಿ.ಆರ್‌. ಬೊಮ್ಮೇಗೌಡ ಇತರರು ಇದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ