ಮಕ್ಕಳಿಗೆ ಉಚಿತ ಹೃದ್ರೋಗ ತಪಾಸಣಾ ಶಿಬಿರ

KannadaprabhaNewsNetwork |  
Published : Jan 18, 2024, 02:02 AM IST
ಉಚಿತ ಹೃದ್ರೋಗ ತಪಾಸಣಾ ಶಿಬಿರ - ಸುದ್ದಿಗೋಷ್ಠಿ | Kannada Prabha

ಸಾರಾಂಶ

ಹೃದ್ರೋಗದಿಂದ ಬಳಲುತ್ತಿರುವ ಯಾವುದೇ ಸಮುದಾಯದ ಮಕ್ಕಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯ ಒದಗಿಸಬೇಕೆನ್ನುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಲ್ಲಿ ಹೆಚ್ಚಿನ ಚಿಕಿತ್ಸೆ ಇಲ್ಲವೆ ಶಸ್ತ್ರ ಚಿಕಿತ್ಸೆಯ ಅಗತ್ಯವಿರುವವರಿಗೆ ಅದನ್ನು ಕೇರಳದ ಕೋಝಿಕೋಡ್‌ನ ಮೆಟ್ರೋಮಡ್ ಇಂಟಾಷನಲ್ ಕಾರ್ಡಿಯಾಕ್ ಸೆಂಟರಲ್ಲಿ ಉಚಿತವಾಗಿ ಒದಗಿಸಲಾಗುತ್ತದೆ. ಶಿಬಿರದ ದಿನಾಂಕ ಮುಂದೆ ತಿಳಿಸಲಾಗುವುದು.

ಕನ್ನಡಪ್ರಭ ವಾರ್ತೆ ಮಡಿಕೇರಿ ಆಲ್ ಇಂಡಿಯಾ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್(ಎಐಕೆಎಂಸಿಸಿ)ಯ ಕೊಡಗು ಜಿಲ್ಲಾ ಘಟಕದಿಂದ 12 ವರ್ಷ ವಯೋಮಿತಿಯೊಳಗಿನ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಘಟಕದ ನಿರ್ದೇಶಕ ಖಲೀಲ್ ಬಾಷಾ ತಿಳಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬಾಷಾ, ಶಿಬಿರದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಹೃದ್ರೋಗದಿಂದ ಬಳಲುತ್ತಿರುವ ಯಾವುದೇ ಸಮುದಾಯದ ಮಕ್ಕಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯ ಒದಗಿಸಬೇಕೆನ್ನುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಲ್ಲಿ ಹೆಚ್ಚಿನ ಚಿಕಿತ್ಸೆ ಇಲ್ಲವೆ ಶಸ್ತ್ರ ಚಿಕಿತ್ಸೆಯ ಅಗತ್ಯವಿರುವವರಿಗೆ ಅದನ್ನು ಕೇರಳದ ಕೋಝಿಕೋಡ್‌ನ ಮೆಟ್ರೋಮಡ್ ಇಂಟಾಷನಲ್ ಕಾರ್ಡಿಯಾಕ್ ಸೆಂಟರಲ್ಲಿ ಉಚಿತವಾಗಿ ಒದಗಿಸಲಾಗುತ್ತದೆ ಎಂದರು.ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಕುಶಾಲನಗರದವರು -9731138438, ಮಡಿಕೇರಿ ವಿಭಾಗದವರಾದರೆ - 8861225651, 9964813083,7907455887, 9916265123, ವಿಭಾಗದವರಾದರೆ - 8861225651, 9964813083, ವಿರಾಜಪೇಟೆಯವರು 9972068760 ಸಂಖ್ಯೆಗೆ ಸಂಪರ್ಕಿಸಿ ಹೆಸರನ್ನು ಜ.30ರ ಒಳಗಾಗಿ ನೋಂದಾಯಿಸಿಕೊಳ್ಳಬೇಕೆಂದರು. ಯಾವ ಪ್ರದೇಶದಲ್ಲಿಹೆಚ್ಚಿನ ನೋಂದಣಿ ಇರುತ್ತದೊ ಅಲ್ಲೇ ಶಿಬಿರವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಹೃದ್ರೋಗ ನಿರ್ಣಯ ಶಿಬಿರವನ್ನು ಕೇರಳದ ಕೋಝಿಕೋಡ್‌ನ ಮೆಟ್ರೋಮಡ್ ಇಂಟಾಷನಲ್ ಕಾರ್ಡಿಯಾಕ್ ಸೆಂಟರ ವೈದ್ಯರ ತಂಡ ನಡೆಸಿಕೊಡಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ ಬಾಷಾ, ಫಾರ್ ಹ್ಯುಮಾನಿಟಿ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸಂಘಟನೆ ನಿರಂತರವಾಗಿ ಅಗತ್ಯ ನೆರವನ್ನು ನೀಡುತ್ತಾ ಬರುತ್ತಿದೆ ಎಂದು ಮಾಹಿತಿ ನೀಡಿದರು .ಎಐಕೆಎಂಸಿಸಿ ಕೊಡಗು ಘಟಕದ ಅಧ್ಯಕ್ಷ ಅಬ್ದುಲ್ ಗಪೂರ್, ಉಪಾಧ್ಯಕ್ಷ ರಿಯಾಜ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್, ಜಂಟಿ ಕಾರ್ಯದರ್ಶಿಗಳಾದ ಮೊಯಿದ್ದೀನ್ ಹಾಗೂ ಸಮೀ‌ರ್ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ