ಜು.31ರವರೆಗೆ ಪತ್ರಕರ್ತರಿಗೆ ಉಚಿತ ಹೃದಯ ತಪಾಸಣೆ: ಪ್ರಸನ್ನಕುಮಾರ್‌

KannadaprabhaNewsNetwork |  
Published : Jul 05, 2025, 12:18 AM IST
ಕ್ಯಾಪ್ಷನ3ಕೆಡಿವಿಜಿ39 ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಹೆಲ್ತ್ ಕಾರ್ಡುಗಳನ್ನು ವಿತರಿಸುವ ಮೂಲಕ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗಾಗಿ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರಕ್ಕೆ ಎಸ್.ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನಲ್ಲಿ ಚಾಲನೆ ನೀಡಲಾಯಿತು. ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಹೆಲ್ತ್ ಕಾರ್ಡುಗಳನ್ನು ವಿತರಿಸುವ ಮೂಲಕ ತಪಾಸಣಾ ಶಿಬಿರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

- ಜಿಲ್ಲಾ ವರದಿಗಾರರ ಕೂಟದಲ್ಲಿ ಹೆಲ್ತ್ ಕಾರ್ಡ್‌ಗಳ ವಿತರಣೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗಾಗಿ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರಕ್ಕೆ ಎಸ್.ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನಲ್ಲಿ ಚಾಲನೆ ನೀಡಲಾಯಿತು. ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಹೆಲ್ತ್ ಕಾರ್ಡುಗಳನ್ನು ವಿತರಿಸುವ ಮೂಲಕ ತಪಾಸಣಾ ಶಿಬಿರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ತಪಾಸಣೆಯನ್ನು ಎಸ್‌ಎಸ್ ಹೈಟೆಕ್ ಆಸ್ಪತ್ರೆಯಲ್ಲಿರುವ ಎಸ್.ಎಸ್.ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ ನಡೆಸಲಾಗುತ್ತಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ಕಾರ್ತಿಕ್ ಮಾಹಿತಿ ನೀಡಿದರು.ಪ್ರಸನ್ನಕುಮಾರ್ ಮಾತನಾಡಿ, ಸಮಾಜದ ಅವಿಭಾಜ್ಯ ಅಂಗವಾಗಿರುವ ಮತ್ತು ಅದರ ಸುಧಾರಣೆಗಾಗಿ ಶ್ರಮಿಸುವ ಪತ್ರಕರ್ತರು, ಕೆಲಸದ ಒತ್ತಡ ಮತ್ತು ಡೆಡ್‌ಲೈನ್‌ ಕಾರಣದಿಂದಾಗಿ ತಮ್ಮ ಆರೋಗ್ಯ ಕಾಳಜಿ ವಹಿಸುವುದು ಕಡಿಮೆಯಾಗಿರುತ್ತದೆ. ಆದ್ದರಿಂದ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ಪತ್ರಕರ್ತರಿಗೆ ಇತ್ತೀಚೆಗೆ ಈ ಶಿಬಿರದ ಕೂಪನ್‌ಗಳನ್ನು ವಿತರಿಸಲಾಗಿದೆ ಎಂದರು.

ಈ ಕೂಪನ್‌ಗಳು ಜುಲೈ 31ರವರೆಗೆ ಮಾನ್ಯವಾಗಿರುತ್ತವೆ. ಇಸಿಜಿ, ಇಕೋ, ರಕ್ತದೊತ್ತಡ, ಜಿಆರ್‌ಬಿಎಸ್ ಮತ್ತು ವೈದ್ಯರೊಂದಿಗಿನ ಸಮಾಲೋಚನೆಯನ್ನು ಒಳಗೊಂಡಿದೆ. ಇದರ ಜೊತೆಗೆ ವೈದ್ಯರ ಸಲಹೆಯ ಮೇರೆಗೆ ಟಿಎಂಟಿ ಅಗತ್ಯವಿರುವ ಪತ್ರಕರ್ತರಿಗೆ ಶೇ.50ರಷ್ಟು ರಿಯಾಯಿತಿ ನೀಡಲಾಗುವುದು ಎಂದರು.

ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಸುನೀಲ್ ಭಂಡಾರಿಗಲ್ ಜಿಲ್ಲಾ ವರದಿಗಾರರ ಕೂಟದ ಸದಸ್ಯರು, ಪತ್ರಕರ್ತರು ಶಿಬಿರದ ಲಾಭ ಪಡೆಯುವಂತೆ ಮನವಿ ಮಾಡಿದರು. ಹೆಚ್ಚಿನ ವಿವರಗಳಿಗಾಗಿ ಮೊಃ 9901662045 ಇಲ್ಲಿಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

ಎಸ್.ಎಸ್. ನಾರಾಯಣ ಹೃದಯಾಲಯದ ಸಿಬ್ಬಂದಿ ಕಾರ್ತಿಕ್, ಪ್ರಸನ್ನಕುಮಾರ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಎಸ್. ಬಡದಾಳ್, ಪ್ರಧಾನ ಕಾರ್ಯದರ್ಶಿ ಎಂ.ವೈ.ಸತೀಶ್, ಕೂಟದ ಪದಾಧಿಕಾರಿಗಳಾದ ಡಿ.ಎಂ.ಮಹೇಶ್, ಡಾ.ಕೆ.ಜೈಮುನಿ, ಆರ್.ಎಸ್.ತಿಪ್ಪೇಸ್ವಾಮಿ, ಬಿ.ಸಿಕಂದರ್, ಸಂಜಯ್, ಸಿದ್ದಯ್ಯ ಹಿರೇಮಠ್, ಶಿವರಾಜ್ ಬೀದಿಮನಿ, ನಟರಾಜ್, ಬಸವರಾಜ್, ಸೋಮಶೇಖರ್, ಗಂಗರಾಜ್, ಮುದ್ದಯ್ಯ ಇತರರು ಇದ್ದರು.

- - -

-3ಕೆಡಿವಿಜಿ39:

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಹೆಲ್ತ್ ಕಾರ್ಡುಗಳನ್ನು ವಿತರಿಸುವ ಮೂಲಕ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

PREV