ಉಚಿತ ಸಾಮೂಹಿಕ ವಿವಾಹ: 24 ಜೋಡಿಗಳ ಮಾಂಗಲ್ಯ ಧಾರಣೆ

KannadaprabhaNewsNetwork |  
Published : May 23, 2025, 12:03 AM IST
50 | Kannada Prabha

ಸಾರಾಂಶ

ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸಿರುವುದು ಉತ್ತಮ ಕಾರ್ಯ. ಇದರಿಂದ ದುಂದು ವೆಚ್ಚ ತಡೆಯಲು ಸಾಧ್ಯವಾಗುತ್ತದೆ. ಬಡವರು ಉಚಿತವಾಗಿ ಮದುವೆ ಆಗಲು ಅನುಕೂಲಕರವಾಗಿದೆ. ಆದ್ದರಿಂದ ಇನ್ನೂ ಹೆಚ್ಚು ಹೆಚ್ಚು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಬೇಕು.

ಕನ್ನಡಪ್ರಭ ವಾರ್ತೆ ನಂಜನಗೂಡುಸಾಲ ಮಾಡಿ ಮದುವೆ ಆಗಬೇಡಿ ಸರಳವಾಗಿ ಮದುವೆ ಆಗುವ ಮೂಲಕ ಎಲ್ಲರಿಗೂ ಮಾದರಿ ಆಗಬೇಕು ಎಂದು ಹೆಚ್ಚುವರಿ ಜಿಲ್ಲಾಎಧಿಕಾರಿ ಡಾ.ಪಿ. ಶಿವರಾಜು ತಿಳಿಸಿದರು. ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಆವರಣದಲ್ಲಿ ಜಿಲ್ಲಾಡಳಿತ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿರುವುದನ್ನು ತಪ್ಪಿಸಲು ಆರಂಭಿಸಿರುವ ಯೋಜನೆ ಇದಾಗಿದೆ. ಮಾಂಗಲ್ಯ ಭಾಗ್ಯ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. 2020 ರಿಂದ ಮಾಂಗಲ್ಯ ಭಾಗ್ಯ ಯೋಜನೆ ಪ್ರಾರಂಭವಾಯಿತು ಎಂದು ಅವರು ತಿಳಿಸಿದರು.ಸಾಲ ಮಾಡಿ ಮದುವೆ ಮಾಡಲು ಹೋಗಬಾರದು. ಅದ್ಧೂರಿ ಆಡಂಬರದ ಮದುವೆ ಮಾಡಿ ಸಾಲ ಮಾಡಿ ಅದನ್ನು ತೀರಿಸಲು ಕಷ್ಟ ಪಡುವುದು ಬೇಡ. ಈ ರೀತಿ ಸರಳವಾಗಿ ಮದುವೆ ಆಗುವುದರಿಂದ ಆರ್ಥಿಕವಾಗಿ ಹಣ ಉಳಿತಾಯ ಆಗಿ. ಈ ಹಣವನ್ನು ಬೇರೆ ಕಾರ್ಯಗಳಿಗೆ ಬಳಸಿಕೊಳ್ಳಿ ಎಂದು ಕಿವಿಮಾತು ಹೇಳಿದ ಅವರು ಈ ಬಾರಿ 24 ಜೋಡಿಗಳು ಸಾಮೂಹಿಕ ವಿವಾಹವಾಗಿದ್ದು, ಮುಂದಿನ ವರ್ಷ ಕನಿಷ್ಠ 100 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಮದುವೆ ಆಗಬೇಕು ಎಂದು ತಿಳಿಸಿದರು. ನಂಜನಗೂಡು ನಗರಸಭೆ ಅಧ್ಯಕ್ಷ ಶ್ರೀಕಂಠ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸಿರುವುದು ಉತ್ತಮ ಕಾರ್ಯ. ಇದರಿಂದ ದುಂದು ವೆಚ್ಚ ತಡೆಯಲು ಸಾಧ್ಯವಾಗುತ್ತದೆ. ಬಡವರು ಉಚಿತವಾಗಿ ಮದುವೆ ಆಗಲು ಅನುಕೂಲಕರವಾಗಿದೆ. ಆದ್ದರಿಂದ ಇನ್ನೂ ಹೆಚ್ಚು ಹೆಚ್ಚು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸನೂರು, ಶ್ರೀಕಂಠೇಶ್ವರ ದೇವಾಲಯದ ಜಗದೀಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್, ವೃತ್ತ ನಿರೀಕ್ಷಕ ರವೀಂದ್ರ , ಚಾಮುಂಡಿಬೆಟ್ಟದ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್‌ ಮೊದಲಾದವರು ಇದ್ದರು.

PREV

Latest Stories

ಸಂಕಷ್ಟಗಳಿವೆ ಆದರೆ ಸೇವಾ ಸಂತೃಪ್ತಿ ನಮಗಿದೆ: ದಶರಥ ಸಾವೂರ
ರೈತರನ್ನು ಸ್ಮರಿಸುವ, ನೋವಿಗೆ ಸ್ಪಂದಿಸುವ ಕಾರ್ಯವಾಗಲಿ
ಮಳೆಯ ರಭಸಕ್ಕೆ ಮನೆಗಳಿಗೆ ನುಗ್ಗಿದ ನೀರು: ಪರಿಶೀಲನೆ