ಜೂನ್‌ 10ಕ್ಕೆ ಉಚಿತ ಸಾಮೂಹಿಕ ವಿವಾಹ: ದಿನೇಶ್ ಶೆಟ್ಟಿ

KannadaprabhaNewsNetwork |  
Published : May 22, 2026, 01:30 AM IST
21ಎಚಎಲ್ಐ1  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಯಲು ಸೀಮೆ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಸೇರದಂತೆ ಅನೇಕ ಹಿರಿಯ ಮುಖಂಡರೊಂದಿಗೆ   ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಲಿಂಗೈಕ್ಯ ಡಾ. ಶಾಮನೂರು ಶಿವಶಂಕರಪ್ಪ ಅವರ 96ನೇ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಕರ ಪತ್ರ  ಬಿಡುಗಡೆಗೊಳಿಸಿ  ದೂಡಾ ಅಧ್ಯಕ್ಷ ದಿನೇಶ್ ಶೆಟ್ಟಿ  ಮಾತನಾಡಿದರು.ಅನೇಕ ಮುಖಂಡರು ಇದ್ದರು.  | Kannada Prabha

ಸಾರಾಂಶ

ಹಿರಿಯ ಚೇತನ,ರಾಜಕೀಯ ಮುತ್ಸದ್ದಿ ಲಿಂಗೈಕ್ಯ ಡಾ. ಶಾಮನೂರು ಶಿವಶಂಕರಪ್ಪನವರ 96ನೇ ಹುಟ್ಟಹಬ್ಬವನ್ನು ದಾ‍ವಣಗೆರೆ ಜಿಲ್ಲಾ ಎಸ್.ಎಸ್.ಎಂ. ಅಭಿಮಾನಿ ಬಳಗದವತಿಯಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ಜೂ.17 ಬುಧವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಎಸ್‌ಎಸ್‌ಎಂ ಅಭಿಮಾನಿ ಬಳಗದ ಅಧ್ಯಕ್ಷ ಮುದೇಗೌಡ ಗಿರೀಶ್ ನೇತೃತ್ವದಲ್ಲಿ ಹಮ್ಮಿಕೊಂಡಿದೆ ಎಂದು ದಾವಣಗೆರೆ ಜಿಲ್ಲಾ ದೂಡಾ ಅಧ್ಯಕ್ಷ ದಿನೇಶ್ ಶೆಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹಿರಿಯ ಚೇತನ,ರಾಜಕೀಯ ಮುತ್ಸದ್ದಿ ಲಿಂಗೈಕ್ಯ ಡಾ. ಶಾಮನೂರು ಶಿವಶಂಕರಪ್ಪನವರ 96ನೇ ಹುಟ್ಟಹಬ್ಬವನ್ನು ದಾ‍ವಣಗೆರೆ ಜಿಲ್ಲಾ ಎಸ್.ಎಸ್.ಎಂ. ಅಭಿಮಾನಿ ಬಳಗದವತಿಯಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ಜೂ.17 ಬುಧವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಎಸ್‌ಎಸ್‌ಎಂ ಅಭಿಮಾನಿ ಬಳಗದ ಅಧ್ಯಕ್ಷ ಮುದೇಗೌಡ ಗಿರೀಶ್ ನೇತೃತ್ವದಲ್ಲಿ ಹಮ್ಮಿಕೊಂಡಿದೆ ಎಂದು ದಾವಣಗೆರೆ ಜಿಲ್ಲಾ ದೂಡಾ ಅಧ್ಯಕ್ಷ ದಿನೇಶ್ ಶೆಟ್ಟಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಯಲು ಸೀಮೆ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಸೇರದಂತೆ ಅನೇಕ ಹಿರಿಯ ಮುಖಂಡರೊಂದಿಗೆ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಗುರುವಾರ ಕಾರ್ಯಕ್ರಮದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ಸಾಮೂಹಿಕ ವಿವಾಹದಲ್ಲಿ ಭಾಗವಹಿಸುವ ವಧುವಿಗೆ ಬಟ್ಟೆ,ತಾಳಿ, ಕಾಲುಂಗುರ ವರನಿಗೆ ಬಟ್ಟೆ ನೀಡಲಿದ್ದು,ಹಾಗೂ ಸರ್ವರಿಗೂ ಕೂಡ ಭೋಜನ ವ್ಯವಸ್ಥೆ ಮಾಡಲಾಗಿದೆ, ಈ ವಿವಾಹ ಕಾರ್ಯಕ್ರಮದಲ್ಲಿ ಎಲ್ಲಾ ಜಾತಿ,ಧರ್ಮದವರಿಗೆ ಕೂಡ ವಿವಾಹಕ್ಕೆ ಅವಕಾಶವಿದ್ದು, ಆವರವರ ಧರ್ಮ, ಸಂಪ್ರದಾಯಗಳಿಗನುಸಾರವಾಗಿ ವಿವಾಹ ಕಾರ್ಯಕ್ರಮ ನಡೆಸಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

ಈ ಉಚಿತ ಸಾಮೂಹಿರ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗಲಿಚ್ಚಿಸುವ ವಧು-ವರರು ಕಾನೂನು ರೀತಿಯಲ್ಲಿ ಸಂಬಂಧಿಸಿದ ದಾಖಲೆಗಳನ್ನು ಸಮಿತಿಯವರಿಗೆ ಒದಗಿಸಿ ಜೂ.12ರ ಒಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗಿ ಮನವಿ ಮಾಡಿದರು.

ಹೊನ್ನಾಳಿ ತಾಲೂಕಿಗೆ ಸಂಬಂಧಿಸಿದಂತೆ ಆರ್ ನಾಗಪ್ಪ ಮೊಬೈಲ್ ಸಂಖ್ಯೆ 9986283919. ಹಾಗೂ ಸಣ್ಣಕ್ಕಿ ಬಸವನಗೌಡ ಮೊಬೈಲ್ ನಂ.9902006179 ಈ ಸಂಖ್ಯೆಗಳನ್ನು ಸಮರ್ಪಕಿಸಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಬಯಲು ಸೀಮೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ,ಈ ಪವಿತ್ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಅನೇಕ ಹಾಲಿ, ಮಾಜಿ ಸಚಿವರು, ಶಾಸಕರು, ಮುಖಂಡರು ಅಗಮಿಸಲಿದ್ದಾರೆ ಎಂದು ತಿಳಿಸಿದರು.

ದಾವಣಗೆರೆ ಮಹಾ ನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್ ನಾಗರಾಜ್ ಕಾರ್ಯಕ್ರಮ ಕುರಿತು ಮಾತನಾಡಿದರು.

ಮುಖಂಡರಾದ ಚನ್ನವೀರಪ್ಪ ಗೌಡ, ಆರ್. ನಾಗಪ್ಪ,ಸಣ್ಣಕ್ಕಿ ಬಸವನಗೌಡ, ಆರಕೆರೆ ಮಧುಗೌಡ, ಎಚ್.ಬಿ. ಆಣ್ಣಪ್ಪ, ತಾ.ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಪುಪ್ಪರವೀಶ್ ಹಲವಾರು ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜ ಬದಲಾಗದಿದ್ದರೆ ಗುಲಾಮಗಿರಿ ಬರುತ್ತೆ: ಬಿ.ವೀರಪ್ಪ
ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ನೀರಿಗಾಗಿ ಪರದಾಟ