ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ

KannadaprabhaNewsNetwork |  
Published : Apr 04, 2026, 02:30 AM IST
ಚಿತ್ತರಂಜನ್‌ ಬೋಳಾರ್‌  | Kannada Prabha

ಸಾರಾಂಶ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂರ್‌ವೆಲ್ ಶಾಖೆಯ ವತಿಯಿಂದ ಕೆ.ವಿ.ಕೆ. ಸೇವಾ ಸಮಿತಿ ಕಸಿಹಿತ್ಲು, ಜಪ್ಪಿನಮೊಗರು, ಲಯನ್ಸ್ ಕ್ಲಬ್ ಮಂಗಳೂರು, ಪಂಪ್‌ವೆಲ್, ಕಲ್ಪವೃಕ್ಷ ಹಾಗೂ ಎನ್. ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ ಜಪ್ಪಿನಮೊಗರು ಕಸಿಹಿತ್ಲು ಕೆ.ವಿ.ಕೆ. ಮೈದಾನದಲ್ಲಿ ನಡೆಯಿತು.

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂರ್‌ವೆಲ್ ಶಾಖೆಯ ವತಿಯಿಂದ ಕೆ.ವಿ.ಕೆ. ಸೇವಾ ಸಮಿತಿ ಕಸಿಹಿತ್ಲು, ಜಪ್ಪಿನಮೊಗರು, ಲಯನ್ಸ್ ಕ್ಲಬ್ ಮಂಗಳೂರು, ಪಂಪ್‌ವೆಲ್, ಕಲ್ಪವೃಕ್ಷ ಹಾಗೂ ಎನ್. ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ ಜಪ್ಪಿನಮೊಗರು ಕಸಿಹಿತ್ಲು ಕೆ.ವಿ.ಕೆ. ಮೈದಾನದಲ್ಲಿ ನಡೆಯಿತು.

ಈ ವೈದ್ಯಕೀಯ ಶಿಬಿರದಲ್ಲಿ ಸಮುದಾಯ ದಂತ ಆರೋಗ್ಯ ವಿಭಾಗ, ಯೇನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇದರ ನುರಿತ ವೈದ್ಯರ ತಂಡದಿಂದ ಉಚಿತ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚೀಕರಣ, ಹುಳುಕು ಹಲ್ಲುಗಳನ್ನು ಭರ್ತಿಗಳನ್ನು ಮಾಡುವುದು, ಚಿಕಿತ್ಸೆಗೆ ಒಳಪಡದ ಮತ್ತು ಬಹಳ ಕೆಟ್ಟಿರುವ ಹಳ್ಳುಗಳನ್ನು ಕೀಳಿಸುವುದು ಹಾಗೂ ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಾಲೇಜು ಕದ್ರಿ ಮಂಗಳೂರು ಇದರ ನುರಿತ ವೈದ್ಯರ ತಂಡದವರಿಂದ ಉಚಿತ ಕಣ್ಣಿನ ತಪಾಸಣೆ, ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಬಿ. ಪಿ. ಹಾಗೂ ಮಧುಮೇಹ ತಪಾಸಣೆ, ಮಾತು ಮತ್ತು ಶ್ರವಣದ ಬಗ್ಗೆ ಮಾಹಿತಿ, ಕಿವಿ, ಗಂಟಲು ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕವನ್ನು ವಿತರಿಸಲಾಗುವುದು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸಿ.ಎಸ್.ಸಿ ಮಂಗಳೂರು ಇವರಿಂದ ಆಯುಷ್ಮಾನ್ ಕಾರ್ಡ್, ಇ ಶ್ರಮ್ ಕಾರ್ಡ್ , ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್, ರಾಷ್ಟ್ರೀಯ ಪಿಂಚಣಿ ಯೋಜನೆ, ಪಾನ್ ಕಾರ್ಡ್ ಮತ್ತು ಪಾಸ್‌ಪೋರ್ಟ್ ನೋಂದಾವಣೆ ಶಿಬಿರ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ
ಹಾನಗಲ್ಲ ಆನಿಕೆರೆ ಕಾಲುವೆ ಕಾಮಗಾರಿ ಅವೈಜ್ಞಾನಿಕ?